ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!

ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!

Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ, ಅದು 2021 ರ ಕೊನೆಯ ದಿನ, ಅಂದ್ರೆ, ಡಿಸೆಂಬರ್ 31, ಇಡೀ ವಿಶ್ವವೇ ಹೊಸ ವರ್ಷ, ಹೊಸ ದಿನದ ನಿರೀಕ್ಷೆಯ ಖುಶಿಯಲ್ಲಿದ್ದರೆ, ಅವನೊಬ್ಬ ಮಾತ್ರ ತನ್ನ ಬುಲೆಟ್ಟು ಗಾಡಿಯ ಜೊತೆ ಜೊತೆಗೆ ಶವವಾಗಿ ಬಿದ್ದಿದ್ದ. ಕಲ್ಳಳ್ಳಿ ಹಾಗೂ ಹನಮಾಪೂರ ಗ್ರಾಮಗಳ ಮಧ್ಯದಲ್ಲಿರುವ ಕಲ್ಲಳ್ಳಿ ಹಳ್ಳದ ಚಿಕ್ಕ‌ಬ್ರಿಡ್ಜ್ ಕೆಳಗೆ ಶವವಾಗಿ ಸಿಕ್ಕಿದ್ದ. ಅವತ್ತು ಅಲ್ಲಿ ಸಿಕ್ಕವನ ಶವದ ಮೇಲೆ ರಕ್ತದ ಕುರುಹುಗಳಿದ್ದವು. ಯಾರೋ ಹಂತಕರು...

ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ‌ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!

ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ‌ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!

Murder Case Judgment; ಮುಂಡಗೋಡ ತಾಲೂಕಿನ ಲಕ್ಕೋಳ್ಳಿ ಬಳಿ 2021 ರ ಡಿಸೆಂಬರ್ 31 ರಂದು ನಡೆದಿದ್ದ, ಮೆಹಬೂಬ ಅಲಿ ಜಮಖಂಡಿ ಮರ್ಡರ್ ಕೇಸ್ ನ ತೀರ್ಪು ಹೊರಬಿದ್ದಿದೆ‌. ಕೊಲೆ ಆರೋಪ ಸಾಭೀತಾಗಿದ್ದು, ಮೂವರೂ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ‌. ಶಿರಸಿ ನಗರ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠಾಸೀನ ಶಿರಸಿ ನ್ಯಾಯದೀಶ ಕಿರಣ್ ಕಿಣಿ ತೀರ್ಪು ಪ್ರಕಟಿಸಿದ್ದಾರೆ. ಏನು ಶಿಕ್ಷೆ..? ಅಸಲು, ಪ್ರಮುಖ ಕೊಲೆ ಆರೋಪಿ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯ ಇಬ್ರಾಹಿಂ ಗೆ ಜೀವಾವಧಿ ಶಿಕ್ಷೆ, ಹಾಗೂ 10 ಸಾವಿರ ರೂ ದಂಡ ಪ್ರಕಟಿಸಲಾಗಿದೆ. ಅದ್ರಂತೆ, ಕೊಲೆಗೆ ಸಹಕರಿಸಿದ ಆರೋಪಿಗಳಾದ ಶರೀಫ್ ಮತ್ತು ನಾಝಿಯಾಗೆ ತಲಾ 3 ವರ್ಷ ಸಜೆ ಹಾಗು ತಲಾ 3 ಸಾವಿರ ರೂ ದಂಡ ವಿಧಿಸಲಾಗಿದೆ. ಅಷ್ಟೇ ಅಲ್ಲದೇ, ಕೊಲೆಯಾದ ಮೆಹಬೂಬ್ ಅಲಿ ಪತ್ನಿ ಬೇಬಿ ಆಯಿಶಾಗೆ 25 ಸಾವಿರ ರೂ ಪರಿಹಾರ ನೀಡುವಂತೆ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಪಬ್ಲಿಕ್...

ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!

ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!

Death News; ಶಿಗ್ಗಾವಿಯ BEO ಕಾರ್ಯಾಲಯದಲ್ಲಿ ಹಿರಿಯ ಮೆನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ಪ್ರಸನ್ನ ಗಣಪತಿ ಜಾಧವ್(49) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ಬೆಳಗಿನ ಜಾವ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ..! ಇನ್ನು, ಪ್ರಸನ್ನ ಜಾಧವ್ ಅವರ ನಿಧನಕ್ಕೆ ಶಿಗ್ಗಾವಿ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಅಂಬಿಗೇರ್, ನೌಕರ ಸಂಘದ ಅಧ್ಯಕ್ಷ ಅರುಣ್ ಹುಡೇದ್ ಗೌಡ್ರ, ಬೋಧಕೇತರ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಬೋಂಗಾಳೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು,ಸದಸ್ಯರು, ಹಾಗೂ ಶಿಗ್ಗಾವಿ ತಾಲೂಕಿನ ಶಿಕ್ಷಕ ವೃಂದ ತೀವ್ರ ಸಂತಾಪ ಸೂಚಿಸಿದೆ.

ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!

ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!

Police Raid News; ಉಡ್ತಾ ಬೆಳಗಾವಿಗೆ ಡ್ರಗ್ಸ್ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್ ಅರೇಸ್ಟ್ ಆಗಿದೆ. ಕುಂದಾನಗರಿಯ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ, ಬೆಳಗಾವಿಗೆ ಗಾಂಜಾ, ಪೆನ್ನಿ, ಹೇರಾಯಿನ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್ ಅಂದರ್ ಆಗಿದೆ. ಥೇಟು, ಪುಷ್ಪಾ ಚಿತ್ರದ ಸ್ಟೈಲ್ ನಲ್ಲಿ ಗ್ಯಾಂಗ್ ಕಟ್ಟಿಕೊಂಡು ಡ್ರಗ್ಸ್ ದಂಧೆಗಿಳಿದಿದ್ದವರು, ಮುಂಬೈನಲ್ಲಿ ಡ್ರಗ್ಸ್ ಮಾಫಿಯಾ ಕಿಂಗ್ ಪಿನ್ ಜೊತೆಗೆ ಅರೇಸ್ಟ್ ಆಗಿದ್ದಾರೆ. ಬೆಳಗಾವಿ ಸಿಇಎನ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೆಕರ ಟೀಮ್ ನಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬೆಳಗಾವಿ ನಗರ ಪೊಲೀಸರಿಂದ ಇದೊಂದು ಅತಿ ದೊಡ್ಡ ಕಾರ್ಯಾಚರಣೆ ಎನ್ನಲಾಗಿದೆ. 50 ಕೆಜೆ ಗಾಂಜಾ, 9 ಜನ ಡ್ರಗ್ಸ್ ಸಪ್ಲೈಯರ್ ಅರೇಸ್ಟ್ ಆಗಿದ್ದಾರೆ. ಇದ್ರೊಂದಿಗೆ, ಬರೋಬ್ಬರಿ 30 ಲಕ್ಷ ಮೌಲ್ಯದ ಮಾದಕವಸ್ತು, 13 ಮೊಬೈಲ್, ಡಿಜಿಟಲ್ ಹ್ಯಾಂಗರ್ ತಕ್ಕಡಿ, ಎರಡು ಕಾರ ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ಮತ್ತು ಗೋವಾ, ಮಹಾರಾಷ್ಟ್ರದಲ್ಲಿ ಡ್ರಗ್ಸ್ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್, ಓಡಿಸಾ, ಮುಂಬೈ, ಪುಣೆ, ಮಧ್ಯಪ್ರದೇಶದಿಂದ ಗಾಂಜಾ ತೆಗೆದುಕೊಂಡು...

ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!

ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಬುಧವಾರ, ಅಗಷ್ಟ 20 ರಂದು ಮುಂಡಗೋಡ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!

ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!

Mundgod School Holiday: ಮುಂಡಗೋಡ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ ನಾಳೆ ಮುಂಡಗೋಡ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ, ಜಿಲ್ಲಾಧಿಕಾರಿಗಳು ಆದೇಶಿಸಿರುವಂತೆ ಜಿಲ್ಲೆಯ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕುಗಳಿಗೆ ನಿನ್ನೆಯಿಂದಲೂ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ಮಾತ್ರ ರಜೆ ಘೋಷಣೆ ಮಾಡಿರಲಿಲ್ಲ. ಆದ್ರೆ, ಸಂಜೆ ಜಿಲ್ಲಾಧಿಕಾರಿಗಳು ಮತ್ತೆ ಮುಂಡಗೋಡ ಹೊರತು ಪಡಿಸಿ, ಜಿಲ್ಲೆಯ 11 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದ‌ ನಂತರ, ಮುಂಡಗೋಡ ತಾಲೂಕಾಡಳಿತ ಮುಂಡಗೋಡ ತಾಲೂಕಿನ ಶಾಲೆಗಳಿಗೆ ಮಳೆಯ ರಜೆ ಅಂತಾ ಘೋಷಣೆ ಮಾಡಿದ್ದಾರೆ‌.

ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!

ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಮಂಗಳವಾರ, ಅಗಷ್ಟ 19 ರಂದು ಉತ್ತರ ಕನ್ನಡ ಜಿಲ್ಲೆಯ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿನಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ನಡೆಯುತ್ತವೆ.

School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!

School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಸೋಮವಾರ, ಅಗಷ್ಟ 18 ರಂದು ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!

ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!

Yallapur Accident News; ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಸಮೀಪದ ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ KSRTC ಬಸ್‌ ಡಿಕ್ಕಿ ಹೊಡೆದ ಪರಿಣಾಮ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ನೀಲವ್ವಾ (38), ಗಿರಿಜವ್ವಾ (43) ಹಾಗೂ ಇನ್ನೋರ್ವ ಪುರುಷ ಎಂದು ಗುರುತಿಸಲಾಗಿದ್ದು, ಪುರುಷನ ಗುರುತು ಇನ್ನೂ ಪತ್ತೆಯಾಗಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಅಮ್ಮನಗುಡ್ಡದಿಂದ ಮಂಗಳೂರಿಗೆ ಹೊರಟಿತ್ತು ಎನ್ನಲಾಗಿದೆ. ಹೆದ್ದಾರಿ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಕೇರಳ ಮೂಲದ ಲಾರಿಗೆ ಬಸ್ ಡಿಕ್ಕಿಯಾಗಿದೆ. ಬಸ್‌ನಲ್ಲಿ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಹೆಚ್ಚಿನವರು ಧರ್ಮಸ್ಥಳಕ್ಕೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಇನ್ನೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಏಳು ಮಂದಿ ಪ್ರಯಾಣಿಕರಿಗೆ ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ, ಯಲ್ಲಾಪುರ ಸಿಪಿಐ, ಪಿಎಸ್‌ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!

ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!

Shiggaon Crime News; ಶಿಗ್ಗಾವಿಯಲ್ಲಿ ಮಚ್ಚಿನಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಪಟ್ಟಣದ ಅಪೊಲೋ ಫಾರ್ಮಸಿ ಎದುರು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪಟ್ಟಣದ ಅಪೋಲೋ ಫಾರ್ಮಸಿ ಅಂಗಡಿಯ ಎದುರು ಮಹಮ್ಮದ್ ಸಲೀಮ್ ಶೇಕ್ (27) ಎಂಬಾತನು, ಚಂದಾಪುರ ಗ್ರಾಮದ ಪಿಗ್ಮಿ ಕಲೆಕ್ಟರ್ ಗಂಗಪ್ಪ ಹೂವಣ್ಣನವರ್(32) ಎಂಬುವವನ ಮೇಲೆ ಹಲ್ಲೆ ಮಾಡಿದ್ದಾನೆ. ಅಸಲು, ಎರಡು ತಿಂಗಳ ಹಿಂದೆ 2 ಲಕ್ಷ ರೂ ಗಳನ್ನು ಬಡ್ಡಿಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ, ಗಂಗಪ್ಪನನ್ನು ಶಿಗ್ಗಾವ್ ಪಟ್ಟಣದ ಅಪೋಲೋ ಫಾರ್ಮಸಿ ಎದರು ಕರೆದು, ಕಣ್ಣಿಗೆ ಕಾರಪುಡಿ ಎರಚಿ ಮಚ್ಚಿನಿಂದ ಹೊಡೆದಿದ್ದಾನೆ. ಅದೃಷ್ಟವಶಾತ್ ಗಂಗಪ್ಪ ಮಚ್ಚಿನ ಏಟಿನಿಂದ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡು ಪಾರಾಗಿದ್ದಾನೆ. ಕತ್ತಿಗೆ ಬೀಳಬೇಕಾದ ಮಚ್ಚಿನ ಏಟು ಬೆನ್ನಿಗೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೀಗಾಗಿ, ಗಾಯಾಳುವನ್ನು ತಕ್ಷಣವೇ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆರೋಪಿ ಮಹ್ಮದ್ ಸಲೀಂ ನನ್ನು ಪೊಲೀಸ್ರು ಬಂಧಿಸಿದ್ದಾರೆ. ಇದನ್ನೂ ಓದಿ👉ಹೆಂಡತಿಯ ಅಪ್ಪ,...

error: Content is protected !!