ಮುಂಡಗೋಡ: ತಾಲೂಕಿನ ಅರಶಿಣಗೇರಿ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬ ಕಾಡಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದೇವೇಂದ್ರಪ್ಪ ಈರಪ್ಪ ತೆಗ್ಗಳ್ಳಿ(60) ಎಂಬುವ ರೈತನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. 4 ಎಕರೆ ಜಮೀನು ಹೊಂದಿರೋ ರೈತ ಈ ವರ್ಷ 1ಲಕ್ಷ 20 ಸಾವಿರ ರೂಪಾಯಿ ಖರ್ಚು ಮಾಡಿ ಶೇಂಗಾ ಬೆಳೆದಿದ್ದ. ಆದ್ರೆ ಇತ್ತಿಚೆಗೆ ಸುರಿದ ಭಾರೀ ಮಳೆಯಿಂದ ಬೆಳೆದಿದ್ದ ಶೇಂಗಾ ಎಲ್ಲಾ ಹಾಳಾಗಿತ್ತು. ಹೀಗಾಗಿವಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆ ಕೈಕೊಟ್ಟ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.