ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ
ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಕಂಟೇನರ್ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಸ್ಥಳದಲ್ಲೆ ದುರ್ಮರಣವಾಗಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಯ ಕಾರು
ಕಂಟೇನರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

