ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!

ಮುಂಡಗೋಡ ತಾಲೂಕಿನ ಅಂದಲಗಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ನಿನ್ನೆ ಸಂಜೆ ಸುಮಾರು ಏಳು ಗಂಟೆಯ ಹೊತ್ತಿಗೆ ಗದ್ದೆಯಲ್ಲಿ ಕರಡಿ ದಾಳಿ ಮಾಡಿದ್ದು, ಕಾಲು ಹಾಗೂ ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯವಿಲ್ಲ ಎನ್ನಲಾಗಿದೆ‌.

ದ್ಯಾಮಣ್ಣ ನಾಗಪ್ಪ ಬೆಂಡಿಗೇರಿ (35) ಎಂಬುವವನ‌ ಮೇಲೆ ಕರಡಿ ದಾಳಿ ಮಾಡಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಗಾಯಾಳುಗೆ ಚಿಕಿತ್ಸೆ ನೀಡಲಾಗುತ್ತಿದೆ.