ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!

ಮುಂಡಗೋಡ ತಾಲೂಕಿನ ಅತ್ತಿವೇರಿ ಜಲಾಶಯದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಆಕಸ್ಮಿಕವಾಗಿ ಬಿದ್ದು ಸಾವು ಕಂಡಿರೋ ಘಟನೆ ನಡೆದಿದೆ. ಹುನಗುಂದ ಗ್ರಾಮದ ಅಂದಾನಯ್ಯ ಗದಗಯ್ಯ ಚಿಕ್ಕಮಠ(45) ಎಂಬುವವನೇ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ.

ಶನಿವಾರ ಬೆಳಿಗ್ಗೆ ಮನೆಯಿಂದ ಹೋಗಿದ್ದ ಮೃತ ವ್ಯಕ್ತಿ, ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದರು. ಆದ್ರೆ, ರವಿವಾರ ಸಂಜೆ ವೇಳೆಗೆ ಅತ್ತಿವೇರಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನೀರು ಕುಡಿಯಲು ಹೋಗಿ ಜಲಾಶಯದಲ್ಲಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಶಂಕಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.