ಇಂದು ಮತ್ತೆ ಭಾರೀ ಮಳೆಯಾಗುವ ಸಂಭವ, ಎಲ್ಲೇಲ್ಲಿ ಮಳೆಯಾಗತ್ತೆ ಗೊತ್ತಾ..?

ಬೆಂಗಳೂರು: ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇ‌‌ದು ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದ್ರಂತೆ ದಾವಣಗೇರೆಯಲ್ಲಿ ಹೆಚ್ಚು ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಕೊಡಗು,ಹಾಸನ, ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮುನ್ಸೂಚನೆ ನೀಡಲಾಗಿದೆ.