ಮುಂಡಗೋಡ: ತಾಲೂಕಿನ ಇಂದೂರು ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿರೋ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಮುಂದಾಗಿದೆ.

ಇಂದೂರು ಹೊರವಲಯದ ಅರಣ್ಯ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದಾರೆ.