

ಕಾರವಾರ- ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಮತ್ತೆ ಮುಂದುವರೆದಿದೆ.. ಬೆಳಿಗ್ಗೆಯಿಂದ ಸ್ವಲ್ಪ ಬಿಡುವು ಕೊಟ್ಟಿದ್ದ ಮಳೆ ಸಂಜೆಗೆ ಮಲೆನಾಡು ತಾಲೂಕುಗಳಾದ ಸಿದ್ದಾಪುರ, ಶಿರಸಿ, ಯಲ್ಲಾಪುರ, ಮುಂಡಗೋಡು, ಹಳಿಯಾಳ ಗಳಲ್ಲಿ ಮತ್ತೆ ವರುಣನ ಅಬ್ಬರ ಪ್ರಾರಂಭವಾಗಿದೆ.. ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾಗುತ್ತಿರೋ ಹಿನ್ನೆಲೆ
ಶರಾವತಿ, ಅಘನಾಶಿನಿ ನದಿಗಳ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಪ್ರವಾಹ ಪರಿಸ್ಥಿತಿ ಅವಲೋಕನಕ್ಕಾಗಿ ನಾಳೆ ಹೊನ್ನಾವರಕ್ಕೆ ಕಂದಾಯ ಆರ್.ಅಶೋಕ್ ಭೇಟಿ ನೀಡಲಿದ್ದಾರೆ. ಶರಾವತಿ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಲಿರೋ ಸಚಿವ ಅಶೋಕ, ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.