ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!

Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ‌ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ‌ ಬುಧವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ‌ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.