ಬೆಂಗಳೂರು: ರಾಜ್ಯ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಸಿ. ಎಚ್. ಪ್ರತಾಪ್ ರೆಡ್ಡಿ ನೇಮಕಗೊಂಡಿದ್ದಾರೆ.

ಕೆಎಸ್‌ಆರ್‌ಪಿಯ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ, ಅವರ ಜಾಗಕ್ಕೆ ಕ್ರೈಂ ಮತ್ತು ಟೆಕ್ನಿಕಲ್ ಸೆಲ್‌ನಲ್ಲಿ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಂ. ಎನ್. ಅನುಚೇತ್ ಅವರನ್ನು ಸಿಐಡಿಯ ಎಸ್ಪಿಯಾಗಿ ವರ್ಗಾವಣೆ ಮಾಡಿದೆ.