ಕಾತೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಗರಿಸಿದ ಕಳ್ಳರು..!

ಮುಂಡಗೋಡ: ತಾಲೂಕಿನ ಕಾತೂರು ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳುವು ಮಾಡಿದ ಘಟನೆ ನಡೆದಿದೆ. ಶಿರಾಜ್ ಬೊಮ್ನಳ್ಳಿ ಎಂಬುವವರ ಹೀರೋ ಹೊಂಡಾ ಸ್ಪೆಂಡರ್ ಪ್ರೊ ಬೈಕ್ ಕಳ್ಳತನವಾಗಿದೆ.

ಮನೆ ಮುಂದೆ ನಿಲ್ಲಿಸಿದ್ದಾಗ ರಾತ್ರಿ ಯಾರೋ ಖದೀಮರು ಬಂದು ಬೈಕ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಅಂತಾ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಶಿರಾಜ್ ಬೊಮ್ನಳ್ಳಿ ದೂರು ದಾಖಲಿಸಿದ್ದಾರೆ