ಕಾರವಾರ: ಕಾರ್ಮಿಕ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಶಿವರಾಮ ಹೆಬ್ಬಾರ್ ಇಂದು ಕಾರವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಕೋವಿಡ್ – 19 ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆಯ ಸದ್ಯದ ಸ್ಥಿತಿಗಳ ಕುರಿತು ಮಾಹಿತಿ ಪಡೆದು, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು,ಸೊಂಕಿತರಿಗೆ ಚಿಕಿತ್ಸೆ, ವೈದ್ಯಕೀಯ ಸೌಕರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ, ಎಂ.ಪಿ. ಮುಲೈ ಮುಹಿಲನ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.