ಕಾರ್ ಪಲ್ಟಿ ನಾಲ್ವರು ಸ್ಥಳದಲ್ಲೇ ಸಾವು, 6 ಜನರಿಗೆ ಗಾಯ..!

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವಾಗಿದೆ, ಕಾರು ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದು ಬಿದ್ದ ಪರಿಣಾಮ, 4 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 6 ಜನರಿಗೆ ಗಾಯವಾಗಿದೆ.

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ಘಟನೆ ನಡೆದಿದ್ದು, ಎನ್ ಎಚ್ 4 ಪಿಬಿ ರಸ್ತೆಯಿಂದ ಕೆಳಗೆ ಸರ್ವಿಸ್ ರಸ್ತೆಗೆ ಕಾರ್ ಬಿದ್ದಿದೆ‌.

ಘಟನೆಯಲ್ಲಿ, ಸುರೇಶ ವೀರಪ್ಪ ಜಾಡಿ (45),
ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ ಪ್ರಭುರಾಜ ಸಮಗಂಡಿ‌ 28 ಸಾವು ಕಂಡಿದ್ದಾರೆ.

ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.