ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!

Father And Son Death; ಸವದತ್ತಿ; ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳಾಗಿದ್ದಾರೆ.

ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿ. ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ್, ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ ಧರೆಪ್ಪ ಹಾಗೂ ಮತ್ತೋರ್ವ ಬಾಲಕ ಬಾಗಪ್ಪ ಸಣ್ಣಕ್ಕಿ, ಹೀಗಾಗಿ, ತಕ್ಷಣ ಇಬ್ಬರ ರಕ್ಷಣೆಗೆ ಧಾವಿಸಿದ್ದ ಬಸವರಾಜ್ ಕೆಂಗೇರಿ, ಈ ವೇಳೆ ತಾನೂ ಕೂಡ ಮುಳಗಿ ಬಸವರಾಜ್ ಮತ್ತು ಧರೆಪ್ಪ ಸಾವು.

Father And Son Death;

ಪಕ್ಕದ ಜಮೀನಿನಲ್ಲಿ ಕೆಲಸ ಮಾಡ್ತಿದ್ದವರಿಂದ ಮತ್ಯೊಬ್ಬ ಬಾಲಕ ಬಾಗಪ್ಪನ ರಕ್ಷಣೆ, ಗಂಭೀರ ಸ್ಥಿತಿಯಲ್ಲಿರುವ ಬಾಲಕ ಬಾಗಪ್ಪಗೆ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಗಳನ್ನೂ ಓದಿ👇

ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?

ಕಾರವಾರದಲ್ಲಿ ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ, ಕಾರಲ್ಲಿ ಕೂತಿದ್ದ ಮಹಿಳೆ ಸಾ*ವು..!

ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

 

error: Content is protected !!