ಟಿಬೇಟಿಯ‌ನ್ ಕಾಲೋನಿ ಬಳಿ‌ ಮರಕ್ಕೆ ಡಿಕ್ಕಿ ಹೊಡೆದ KTM ಬೈಕ್, ಮುಂಡಗೋಡಿನ ಯುವಕ ಸ್ಥಳದಲ್ಲೇ ಸಾವು..!

ಮುಂಡಗೋಡ ಸಮೀಪದ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಬಳಿ ಬೈಕ್ ಅಪಘಾತವಾಗಿದೆ. ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮುಂಡಗೋಡ ಪಟ್ಟಣದ ಸಂಜು ನರಸಪ್ಪ ಕಳಲಕೊಂಡ(32) ಮೃತ ಬೈಕ್ ಸವಾರ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಿಯಂತ್ರಣ ತಪ್ಪಿದ ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಕೂಡ ನುಜ್ಜುಗುಜ್ಜಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.