ಧಾತ್ರಿ ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ,ಪುಸ್ತಕ ವಿತರಣೆ..!

ಮುಂಡಗೋಡ: ತಾಲೂಕಿನ ಕೋಡಂಬಿ, ಬೆಡಸಗಾಂವ್, ಮಳಗಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಧಾತ್ರಿ ಫೌಂಡೇಶನ್ ವತಿಯಿಂದ ಉಚಿತ ಪಠ್ಯ, ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ್ ಭಟ್, ಫಣಿರಾಜ್ ಹದಳಗಿ, ಗಿರೀಶ್ ಕಾತೂರು, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ, ದಿವಾನ್ ಸಾಬ್, ವಿಜಯ್ ಕುರುಬರ ಹಾಗೂ ಪಂಚಾಯತ್ ಅಧ್ಯಕ್ಷರು, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಮುಖಂಡರು, ಶಿಕ್ಷಕವೃಂದ ಹಾಗೂ ಮಕ್ಕಳು ಉಪಸ್ಥಿತರಿದ್ದರು.