ಚಾಮರಾಜನಗರ: ಪುನೀತ್ ರಾಜಕುಮಾರ್ ನಿಧನ ವಿಷಯ ಕೇಳಿ ಹೃದಯಾಘಾತವಾಗಿ
ಪುನೀತ್ ಅಭಿಮಾನಿ ಸಾವಿಗೀಡಾಗಿದ್ದಾನೆ‌. ಚಾಮರಾಜನಗರ ಜಿಲ್ಲೆ ಹನೂರು ತಾಲೋಕು ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದ, ಮುನಿಯಪ್ಪ(29) ಹೃದಯಾಘಾತದಿಂದ ಮೃತಪಟ್ಟ ಅಭಿಮಾನಿ.

ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಮುನಿಯಪ್ಪ, ಪುನೀತ್ ಸಾವಿನ ವಿಷಯ ಕೇಳುತ್ತಲೇ ಕುಸಿದುಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ಕೊನೆಯುಸಿರು ಎಳೆದಿದ್ದಾನೆ ಪುನೀತ್ ಅಭಿಮಾನಿ.

ಪುನೀತ್ ಅವರ ಪ್ರತಿಯೊಂದು ಚಿತ್ರವನ್ನು ತಪ್ಪದೆ ನೋಡುತ್ತಿದ್ದ ಮುನಿಯಪ್ಪ, ಆಗಾಗ್ಗೆ ಬೆಂಗಳೂರಿಗೆ ತೆರಳಿ ನೆಚ್ಚಿನ ನಟನನ್ನು ಭೇಟಿಯಾಗುತ್ತಿದ್ದ, ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ ಮುನಿಯಪ್ಪ. ನಾಳೆ ಮರೂರು ಗ್ರಾಮದಲ್ಲಿ ಪುನೀತ್ ಅಭಿಮಾನಿಯ ಅಂತ್ಯಕ್ರಿಯೆ ನಡೆಯಲಿದೆ.