ನಟ ಪುನೀತ್ ರಾಜಕುಮಾರ್ ನಿಧನ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಶ್ರೀ ಸುಬುದೇಂದ್ರ ತೀರ್ಥರು ಪುನೀತ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಪುನೀತ್ ಇನ್ನಿಲ್ಲ ಎನ್ನುವುದನ್ನ ಅರಗಿಸಿಕೊಳ್ಳುವುದು ಕಷ್ಟ, ಪುನೀತ್ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ
ಡಾ.ರಾಜಕುಮಾರ ಕುಟುಂಬ ರಾಯರ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ, ವಿಶೇಷ ಸಂದರ್ಭಗಳಲ್ಲಿ ಮಠಕ್ಕೆ ತಪ್ಪದೇ ಬಂದು ಹೋಗುತ್ತಾರೆ, ಮೂರು ಜನ ಅಣ್ಣತಮ್ಮಂದಿರು ಮಠದಲ್ಲಿ ಸಂಗೀತ ಕಾರ್ಯಕ್ರಮ ನಡೆಸುವುದಾಗಿ ಪುನೀತ್ ಹೇಳಿದ್ದರು, ರಾಯರ ಆರಾಧನ ಸಂದರ್ಭದಲ್ಲಿ ಸಂಗೀತ ಕಾರ್ಯಕ್ರಮ ನಡೆಸುತ್ತೇವೆ ಎಂದಿದ್ದರು ಅಂತಾ ಶ್ರೀಗಳು ನೆನಪು ಹಂಚಿಕೊಂಡಿದ್ದಾರೆ.

ಪುನೀತ್ ರಾಜ್‍ಕುಮಾರ್ ಚಿಕ್ಕವರಿದ್ದಾಗಿನಿಂದಲೂ “ವಾರ ಬಂತಮ್ಮ ಗುರುವಾರ ಬಂತಮ್ಮ” ಹಾಡನ್ನ ಹೇಳುತ್ತಿದ್ದರು. ಪುನೀತ್ ಅಗಲಿಕೆಯ ನೋವು ಭರಿಸುವಂತ ಶಕ್ತಿಯನ್ನ ಅವರ ಕುಟುಂಬಕ್ಕೆ ಭಗವಂತ ನೀಡಲಿ ಅಂತಾ ಶ್ರೀಗಳು ಪ್ರಾರ್ಥಿಸಿದ್ದಾರೆ.