ಪುನೀತ್ ನಿವಾಸಕ್ಕೆ ಪಾರ್ಥೀವ ಶರೀರ, ಕುಟುಂಬಸ್ಥರಿಂದ ಪೂಜೆ, ಪತಿಯ ಶವ ಅಪ್ಪಿ ಬಿಕ್ಕಿ ಬಿಕ್ಕಿ ಅತ್ತ ಪತ್ನಿ..!

ನಟ ಪುನೀತ್ ರಾಜಕುಮಾರ ವಿಧಿವಶರಾದ ಹಿನ್ನೆಲೆಯಲ್ಲಿ ಅವ್ರ ಪಾರ್ಥೀವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಪುನೀತ್ ರಾಜಕುಮಾರ್ ನಿವಾಸಕ್ಕೆ ರವಾನಿಸಲಾಯಿತು.

ಪುನೀತ್ ನಿವಾಸದಲ್ಲಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ರು. ನಂತರ ಸಾರ್ವಜನಿಕ ದರ್ಶನಕ್ಕಾಗಿ ಕಂಠೀರವ ಸ್ಟೇಡಿಯಂ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಕಂಠೀರವ ಸ್ಟೇಡಿಯಂ ಗೆ ಕೆಲವೇ ಕ್ಷಣಗಳಲ್ಲಿ ಪಾರ್ಥೀವ ಶರೀರ ಆಗಮಿಸುವ ಸಾಧ್ಯತೆ ಇದೆ.