Education News:
ಕಾರವಾರ: ಮೈಸೂರು ವಿಶ್ವ ವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್(ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ಎಸ್.ಇ.ಪಿ. ಪದ್ದತಿ) ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ದ್ವೀತಿಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್(UUCMS) ಅರ್ಜಿ ಸಲ್ಲಿಸಲು ಜೂ.10 ಕೊನೆಯ ದಿನವಾಗಿದೆ.
ಇದನ್ನೂ ಓದಿ👉ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ..!
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ htts://uucms.Karnataka.gov.in ಅಥವಾ https://www.cavamysore.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.
ಇದನ್ನೂ ಓದಿ👉ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಅರ್ಜಿ ಆಹ್ವಾನ..!
ಹೆಚ್ಚಿನ ಮಾಹಿತಿಗಾಗಿ ಕಾರ್ಯಲಯದ ಸಹಾಯವಾಣಿ:0821-2438931 ಯನ್ನು ಸಂಪರ್ಕಿಸುವಂತೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.