ಬಾಚಣಕಿ ಸಮೀಪ ರಸ್ತೆ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಸ್ಥಗಿತ..!

ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿದೆ. ನಿರಂತರ ಮಳೆಯಿಂದ ಬೃಹತ್ ಮರ ರಸ್ತೆ ಮೇಲೆ ಉರುಲಕಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸ್ಥಗಿತವಾಗಿದೆ.

ರಸ್ತೆ ಬದಿ ಇದ್ದ ಮರ ಮದ್ಯಾಹ್ನ ಏಕಾಏಕಿ ಉರುಳಿ ಬಿದ್ದಿದೆ. ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ, ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಕಂದಾಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿದ್ದಾರೆ.

ಅಂದಹಾಗೆ, ಕಳೆದ ಹತ್ತು ದಿನಗಳಿಂದ ತಾಲೂಕಿನಲ್ಲಿ ನಿರಂತರವಾಗಿ ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಗೆ ತಾಲೂಕಿನಾಧ್ಯಂತ ಭಾರೀ ಅವಾಂತರಗಳು ಸೃಷ್ಟಿಯಾಗುತ್ತಿವೆ. ಹಲವು ಕಡೆ ಮನೆಗಳು ನೆಲಸಮಗೊಂಡಿವೆ.