ಬ್ರಾಹ್ಮಣರ ವಿರುದ್ಧ ನಟ ಚೇತನ್ ಹೇಳಿಕೆ:  ಸಚಿವ ಶಿವರಾಮ್ ಹೆಬ್ಬಾರ್ ಖಂಡನೆ..!

ಯಲ್ಲಾಪುರ: ಕನ್ನಡ ಚಿತ್ರ ನಟ ಚೇತನ್, ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ತೀವ್ರ ಖಂಡನಾರ್ಹ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಸಚಿವ್ರು, ಚೇತನ್ ಹೇಳಿಕೆ ಗಮನಕ್ಕೆ ಬಂದಿದ್ದು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ.

ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು ಅಂತಾ ಹೆಬ್ಬಾರ್ ಕಿಡಿ ಕಾರಿದ್ದಾರೆ.

ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳುತ್ತೇನೆ ಅಂತಾ ಇದೇ ವೇಳೆ ಹೆಬ್ಬಾರ್ ತಿಳಿಸಿದ್ದಾರೆ.