Heavy Rain Road block:
ಉತ್ತರ ಕನ್ನಡದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನಡುವೆ, ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ, ಭಾರೀ ಮಳೆಯಿಂದ ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದೆ. ಜೊತೆಗೆ ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ.
ಕುಮಟಾ -ಸಿದ್ದಾಪುರ ರಸ್ತೆ ಜಲಾವೃತ..!
ಇನ್ನು ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಹೀಗಾಗಿ, ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಕುಮಟಾದಲ್ಲಿ ಕಳೆದ ಮೂರು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಯ ಪಕ್ಕದ ಚರಂಡಿ ಬ್ಲಾಕ್ ಆಗಿದ್ದು , ನೀರು ಸರಾಗವಾಗಿ ಹೋಗದೇ ರಸ್ತೆ ಮೇಲೆ ನೀರು ಹರಿಯುತ್ತಿದೆ.
ಈ ಭಾಗದ ವಾಲ್ಗಳ್ಳಿಯ ಬಳಿ ಮನೆ ಜಮೀನುಗಳಿಗೆ ನೀರು ನುಗ್ಗುವ ಆತಂಕ ತಂದೊಡ್ಡಿದೆ. ಇನ್ನು ಕುಮಟಾ -ಸಿದ್ದಾಪುರ ರಸ್ತೆ ನೀರು ತುಂಬಿ ಬಂದಾಗಿರುವುದರಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿಯೂ ಸಂಚಾರ ಅಸ್ತವ್ಯಸ್ತವಾಗಿದೆ.