ಭೀಕರ ಅಪಘಾತ, ನಿಡಸೋಸಿ ಮಠದ ಶ್ರೀಗಳು ಅದೃಷ್ಟವಶಾತ್ ಪಾರು..!

ಧಾರವಾಡ – ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರ ಅಂತ್ಯಕ್ರಿಯೆಗೆ ಬಂದಿದ್ದ ಶ್ರೀಗಳ ಕಾರು ಅಪಘಾತವಾಗಿದೆ. ಬೆಳಗಾವಿ ಹೊರವಲಯದ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದೆ. ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದ್ದು, ಕಾರ್ ಪಲ್ಟಿಯಾಗಿ ಕಾರ ನುಜ್ಜುಗುಜ್ಜಾಗಿದೆ. ಆದ್ರೆ ಏರಬ್ಯಾಗ ಇದ್ದಿದ್ದರಿಂದ ಅದೃಷ್ಟವಶಾತ್ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶ್ರೀಗಳ ಕಾಲಿಗೆ ಚಿಕ್ಕಪುಟ್ಟ ಗಾಯವಾಗಿದೆ. ಸದ್ಯ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಚಾಲಕ ರಮೇಶ ಮಾಳಿ ಸೇರಿದಂತೆ ಇಬ್ಬರು ಆಪ್ತ ಸಹಾಯಕರು ಕಾರಿನಲ್ಲಿದ್ದರು. ಎಲ್ಲರಿಗೂ ಸಣ್ಣ ಪುಟ್ಟ ಗಾಯ ಹೊರತುಪಡಿಸಿದರೆ ಯಾವುದೇ ಗಂಭೀರ ಪ್ರಮಾಣದ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಗಡಿಭಾಗದಲ್ಲಿ ಅಪಾರ ಭಕ್ತ ಸಮೂಹ ಹೊಂದಿರುವ ಶ್ರೀಗಳು, ಸರಳತೆಯ ಮೂಲಕ ಉತ್ತರ ಕರ್ನಾಟಕದ ನಡೆದಾಡುವ ದೇವರು ಅಂತಲೇ ಪ್ರಖ್ಯಾತಿ ಪಡೆದಿದ್ದಾರೆ. ಹೀಗಾಗಿ, ಜಗದ್ಗುರು ಪಂಚಮ ಶಿವಲಿಂಗೇಶ್ವರ ಕಾರು ಅಪಾಘತವಾಗಿರುವ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಭಕ್ತ ವಲಯದಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಶ್ರೀಗಳು ಕ್ಷೇಮವಾಗಿದ್ದಾರೆ ಎನ್ನುವ ಸುದ್ದಿ ಭಕ್ತರು ನಿಟ್ಟುಸಿರು ಬಿಡುವಂತೆ ಮಾಡಿದೆ. ನಿಡಸೋಸಿ ಶ್ರೀಮಠ ಹಾಗೂ ಬಾಗಲಕೋಟ ಚರಂತಿಮಠದ ಪೀಠಾಧಿಪತಿಗಳಾಗಿರುವ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿರುವ ಸುದ್ದಿ ತಿಳಿದು ಭಕ್ತರು ಶ್ರೀಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದರು.