ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ.
ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.