ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in/bcwd ಆನ್ಲೈನ್ ಮೂಲಕ ಜೂನ್ 16 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ. & ಎಸ್.ಟಿ. ರೂ. 2,50,000/- ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1,00,000 ಒಳಗಿರಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ www.bcwd.karnataka.gov.inನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226589, 226588 ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.