ಹಾರವಳ್ಳಿ ಬಳಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು..!

ಮುಂಡಗೋಡ: ತಾಲೂಕಿನ ಹಾರವಳ್ಳಿ‌‌ ಗ್ರಾಮದ ಹತ್ತಿರ ಮಾಜಿ ಶಾಸಕ‌ ವಿ ಎಸ್ ಪಾಟೀಲ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ.

ಬನವಾಸಿಯಿಂದ ಪಾಳಾ- ರಾಮಪೂರ ಮಾರ್ಗವಾಗಿ ತಮ್ಮ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ‌ ಚಾಲಕ ಆನಂದ ಆಲೂರನಿಗೆ ಕಣ್ಣಿಗೆ ಹಾಗೂ ಮಾಜಿ ಶಾಸಕ ವಿ ಎಸ್ ಪಾಟೀಲರಿಗೆ ಎದಗೆ ಪೆಟ್ಟು ಬಿದ್ದಿದೆ. ಅದೃಷ್ಟವಾಶತ್ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಹೆಚ್ಚು ಗಾಯ- ನೋವುವಾಗಿಲ್ಲ. ತಕ್ಷಣವೇ ಮಾಜಿ ಶಾಸಕರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.