ಮುಂಡಗೋಡ:ತಾಲೂಕಿನ ಹುನಗುಂದ ಗ್ರಾಮದ ವಿಠಲ ರುಕ್ಮಿಣಿ ಹರಿಮಂದಿರದಲ್ಲಿ ರವಿವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 29-8-2021 ರಂದು ರವಿವಾರ ದಿವಸ ಬೆಳಿಗ್ಗೆ 10-00 ಘಂಟೆಗೆ ವಿಠ್ಹಲ ರುಕ್ಮಿಣಿ ಹರಿ ಮಂದಿರದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀ ಕೃಷ್ಣನನ್ನು ತೊಟ್ಟಿಲು ಹಾಕುವ ಕಾರ್ಯಕ್ರಮ ಇರುತ್ತದೆ. ಮಧ್ಯಾನ ಪ್ರಸಾಧ ವ್ಯವಸ್ಥೆ ಇರುವದರಿಂದ ಎಲ್ಲಾ ಭಕ್ತಾದಿಗಳು ಭಾಗವಹಿಸಬೇಕೆಂದು ಪಾಂಡುರಂಗ ಸೇವಾ ಸಮಿತಿಯವರು ಮನವಿ ಮಾಡಿದ್ದಾರೆ.