ಹುಬ್ಬಳ್ಳಿ: ಬೈಕ್ – ಕಾರ್ ನಡುವೆ ಮುಖಾ-ಮುಖಿಯಾಗಿ ಪಿಡಿಓ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರೂರ ಬ್ರಿಡ್ಜ್ ಬಳಿ ನಡೆದಿದೆ.

ಕುಂದಗೋಳ ತಾಲೂಕಿನ ಸಂಶಿ ನಿವಾಸಿಯಾದ ಪ್ರಭುಗೌಡ ಬಸನಗೌಡ ತೇಂಬದಮನಿ ಮೃತ ಪಿಡಿಓ ಆಗಿದ್ದಾರೆ. ಕುಬಿಹಾಳ ಗ್ರಾಮ ಪಂಚಾಯತಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಇವತ್ತು ಸಂಜೆ ಕೆಲಸ ಮುಗಿಸಿ ಊರ‌ ಕಡೆ ಹೋಗುವಾಗ ಎದುರಿಗೆ ಬಂದ ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಸ್ಥಳೀಯರು ಎಸ್ ಡಿ ಎಂ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.