Home Public First Newz

Author: Public First Newz (Public First Newz)

Post
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.‌!

ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.‌!

ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ತಾಲೂಕಿನ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.. ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದ ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ನಿರಂತರ ಮಳೆಯ ಕಾರಣಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಪಕ್ಕದ ಮನೆಯ ಸಾತವ್ವ ಭೀಮಣ್ಣ ಬೆಂಗಳೂರ (50) ಎಂಬುವ ಮಹಿಳೆಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ...

Post
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!

ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!

ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಶಶಿಧರ್ ಪರವಾಪುರ ರಾಜೀನಾಮೆ ನೀಡಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಶಶಿಧರ್ ಮುಂದಿನ 15 ತಿಂಗಳ ಅವಧಿಗೆ ನೂತನ ಅಧ್ಯಕ್ಷರನ್ನು ನೇಮಿಸುವ ಕಾರ್ಯಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಂದಹಾಗೆ, ಕಳೆದ ಒಂದು ವರ್ಷದಿಂದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಶಿಧರ್ ಕಾರ್ಯನಿರ್ವಹಿಸಿದ್ದರು. ಒಳಗಿನ ಒಪ್ಪಂದದಂತೆ, ಒಂದು ವರ್ಷದ ನಂತರ ಅಧಿಕಾರ ಬಿಟ್ಟುಕೊಡುವ ಮಾತಾಗಿತ್ತು. ಹೀಗಾಗಿ, ಒಂದು ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಮಂಗಳವಾರ ರಾಜೀನಾಮೆ ನೀಡಿದ್ದಾರೆ....

Post
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!

ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!

ಮುಂಡಗೋಡ ಪಟ್ಟಣದ ಸಂತೆ ಮಾರುಕಟ್ಟೆ ಹತ್ತಿರ ಶ್ರೀಗಂಧ ಮರ ಕಳ್ಳತನ ವಿಫಲ ಯತ್ನ ನಡೆದಿದೆ. ಎಸ್.ನಾರಾಯಣರಾವ್ ಎಂಬುವವರ ಮನೆ ಆವರಣದಲ್ಲಿ ಘಟನೆ ನಡೆದಿದ್ದು ಮರ ಕಡಿದು ಸಾಗಿಸಲಾಗದೇ ಕಳ್ಳರು ಅಲ್ಲೇ ಬಿಟ್ಟು ಹೋಗಿದ್ದಾರೆ. ಅಂದಹಾಗೆ, ಇದೇ ಸ್ಥಳದಲ್ಲಿ ಈ ಹಿಂದೆಯೂ ಶ್ರೀಗಂಧದ ಮರಗಳ ಕಳ್ಳತನದ ವಿಫಲ ಯತ್ನಗಳು ನಡೆದಿತ್ತು. ಆದ್ರೆ, ಇವತ್ತು ನಡೆದಿರೋ ಘಟನೆ ಖಚಿತತೆಯಿಂದಲೇ ಕಳ್ಳರು ಬಂದು, ಇನ್ನೇನು ಸಾಗಿಸುವ ಹಂತದಲ್ಲಿ ಅರ್ದಕ್ಕೆ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ....

Post
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!

ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!

ಹುಬ್ಬಳ್ಳಿ,: ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ‌ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್ ​(60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ ದುರ್ದೈವಿಗಳು. ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ‌ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಜಾಪರಸಾಬ್ ಓಮಿನ್ ಕಾರ್​ನಲ್ಲಿ ಕುಟುಂಬದವರ ಜೊತೆ ಪಾರ್ಶವಾಯು ಔಷಧಿ ತರಲು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಳಗಾ ಗ್ರಾಮದಲ್ಲಿನ ಸೇಂಟ್ ಮೇರಿ ಆಸ್ಪತ್ರೆಗೆ ಹೋಗಿದ್ದರು. ಔಷಧಿ ಪಡೆದು...

Post
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ

ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ

 ಧಾರವಾಡ: ಹಣ ಕೊಟ್ಟು ವರ್ಗಾವಣೆ ಮಾಡಿಕೊಂಡು ಬಂದ ಪೊಲೀಸ್ ಅಧಿಕಾರಿಗಳು ಕಳ್ಳ, ಕಾಕರಿಂದ, ಬಡ್ಡಿ ದಂಧೆಕೋರರಿಂದ ಹಾಗೂ ವೇಶ್ಯಾವಾಟಿಕೆ ಮಾಡಿಸುವವರಿಂದಲೂ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧ ಕೃತ್ಯಗಳು ಆಗಲು ಎರಡು ಕಾರಣಗಳಿವೆ. ಒಬ್ಬರು ಹುಟ್ಟುತ್ತಲೇ ಕ್ರೈಂ ಮಾಡಿಕೊಂಡು ಬಂದವರು ಮತ್ತೊಬ್ಬರು ಬಡ್ಡಿ ದಂಧೆಕೋರರಿಂದ ಕ್ರೈಂಗಳು ಆಗುತ್ತಿವೆ. ಬಡ್ಡಿ ದಂಧೆ ಮಾಡುವವರು ಫೈನಾನ್ಸ್ ಕಂಪೆನಿಯಿಂದ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ಫೈನಾನ್ಸ್ ಕಂಪೆನಿಗಳು...

Post
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!

ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!

ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ಭರ್ಜರಿ ಯುದ್ಧ ಸಾರಿದ್ದಾರೆ. ಪರಿಣಾಮ 25 ಮೀಟರ್ ಬಡ್ಡಿ ದಂಧೆಕೋರರನ್ನು ಹೆಡೆಮುರಿ ಕಟ್ಟಿದ್ದಾರೆ. ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಮೀಟರ್ ಬಡ್ಡಿ ಹಾವಳಿಯ ಬಗ್ಗೆ ನೋವು ತೋಡಿಕೊಂಡಿದ್ದರಲ್ಲದೇ ನೆಮ್ಮದಿ ನಿಟ್ಟುಸಿರು ಬಿಡುವಂತೆ ಮಾಡುವಂತೆ ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ತಮ್ಮ ಠಾಣೆ ವ್ಯಾಪ್ತಿಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಪತ್ತೆಗೆ ಮುಂದಾಗಿ ಹುಬ್ಬಳ್ಳಿ,...

Post
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!

ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!

ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ರನ್ನು ವರ್ಗಾವಣೆ ಮಾಡಲಾಗಿದೆ. ಯಲ್ಲಾಪುರದ ಇಡಗುಂದಿ ಅರಣ್ಯ ವಲಯಕ್ಕೆ ನಿಯುಕ್ತಿ ಮಾಡಲಾಗಿದ್ದು ಇವ್ರ ಜಾಗಕ್ಕೆ ಅಂದ್ರೆ ಕಾತೂರು ಅರಣ್ಯ ವಲಯಕ್ಕೆ ವೀರೇಶ್ ಎಂಬುವವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Post
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?

ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?

ಮುಂಡಗೋಡ ಪಟ್ಟಣ ಪಂಚಾಯತಿಯ ಬಿಲ್ ಕಲೆಕ್ಟರ್ ಮಂಜುನಾಥ್ ಮುಚ್ಚಂಡಿ ಅಂತೂ ಇಂತೂ ಟ್ರಾನ್ಸಪರ್ ಆಗಿದ್ದಾರೆ‌. ಜುಲೈ 31 ರಂದೇ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದ್ದರೂ ಸಾಹೇಬ್ರು ಮಾತ್ರ ಇನ್ನೂ ಜಾಗ ಕದಲಿಸಿಲ್ಲ. ಅದ್ಯಾರ ಕೃಪೆಯೋ ಅಥವಾ, ತಮಗಿರೋ ಭಾರೀ ಪ್ರಭಾವ ಬಳಸಿ ಇಲ್ಲೇ ಮುಂದುವರಿಯೋ ಮಹಾ ಪ್ಲ್ಯಾನೋ ಯಾರಂದ್ರೆ ಯಾರಿಗೂ ಅರ್ಥವಾಗಿಲ್ಲ. ಹೀಗಾಗಿ, ಸಾರ್ವಜನಿಕ ವಲಯದಲ್ಲಿ ಇದು ಭಾರೀ ಚರ್ಚೆಗೆ ಕಾರಣವಾಗ್ತಿದೆ. ಗುಸು, ಗುಸು ಪಿಸು, ಪಿಸು ನಡೀತಿದೆ..! ಅಸಲು, ಸಾಕಷ್ಟು ಆಕ್ರೋಶಗಳು, ಆರೋಪಗಳು ಮಾರ್ದನಿಸಿದ ಹಿನ್ನೆಲೆಯಲ್ಲಿ, ಮುಚ್ಚಂಡಿ...

Post
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..

ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..

ಮುಂಡಗೋಡ ತಾಲೂಕಿನ ಶಿಡ್ಲಗುಂಡಿ ಗ್ರಾಮದ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 60-65 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು ಯಾರಿಗಾದ್ರೂ ಈತನ ಬಗ್ಗೆ ಗುರುತು ಇದ್ರೆ ಮುಂಡಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ. ಮುಂಡಗೋಡ ಪೊಲೀಸ್ ಠಾಣೆ ಫೋನ್ ನಂಬರ್ 08301 222211 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕ್ರೈ ಪಿಎಸ್ಐ ಹೆಚ್.ಬಿ.ಕುಡುಗುಂಟಿ ತಿಳಿಸಿದ್ದಾರೆ

Post
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ

ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ

ಕಾರವಾರ; ರಾಜ್ಯದಲ್ಲಿ ಅತೀ ಹೆಚ್ಚು ಪೋಕ್ಸೋ ಪ್ರಕರಣ ಗಳು 18 ವರ್ಷದೊಳಗಿನ ವಯೋಮಿತಿಯಲ್ಲಿ ಕಂಡು ಬರುತ್ತಿರುವುದರಿಂದ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಾಗ್ರತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಜಾಗೃತಿ ಮೂಡಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಕರೆ ನೀಡಿದ್ರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 18 ವರ್ಷದೊಳಗಿನವರೂ ಕೂಡಾ ಮಕ್ಕಳ ಹಕ್ಕುಗಳ ರಕ್ಷಣಾ...

error: Content is protected !!