Home Public First Newz

Author: Public First Newz (Public First Newz)

Post
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!

ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!

ಬೆಂಗಳೂರು: ಗ್ರಾಮ ಪಂಚಾಯತಿ ಉಪಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ.‌ ನವೆಂಬರ್ 23 ರಂದು ಉಪಚುನಾವಣೆ ನಡೆಸಲು ದಿನಾಂಕ್ ಫಿಕ್ಸ್ ಆಗಿದೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ದಿನಾಂಕ‌ ಘೋಷಣೆಯಾಗಿದೆ‌. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವಾರ್ಡ್ ನಂಬರ್ 1 ರ ಸದಸ್ಯೆ ಯಲ್ಲವ್ವ ಇಟ್ಲಾಪುರ ನಿಧನದಿಂದ ತೆರವಾಗಿರೋ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ವಿವರ ಇಲ್ಲಿದೆ..! ದಿನಾಂಕ 06-11-2024 (ಬುಧವಾರ) ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನವಾಗಿದೆ....

Post
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

 ಹಾವೇರಿ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹಾವೇರಿ ನಗರದಲ್ಲಿ ಇರುವ ಹತ್ತಾರು ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಾಲಕನೋರ್ವ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಘಟನೆ ನಡೆದಿದೆ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿಯೇ ಘಟನೆ ನಡೆದಿದ್ದು, ನೀವೆದನ್ ಬಸವರಾಜ್ ಗುಡಗೇರಿ (12) ಕೊಚ್ಚಿ ಹೋದ ಬಾಲಕನಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಾಲಕನ ಸಂಬಂಧಿಗಳಿಂದ...

Post
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?

ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?

ಬೆಂಗಳೂರಿನ ಲಾಡ್ಜ್‌ವೊಂದರಲ್ಲಿ ತೀರ್ಥಹಳ್ಳಿ ತಹಶೀಲ್ದಾರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಗದಗ ಮೂಲದ ಜಕ್ಕಣ್ಣಗೌಡ‌ರ್(56) ಮೃತ ತಹಶೀಲ್ದಾರರಾಗಿದ್ದಾರೆ. ಜಕ್ಕಣ್ಣಗೌಡರ್‌ ಅವರು ಬೆಂಗಳೂರಿಗೆ ಅ.14ರಂದು ಹೋಗೊದ್ದರು. ಖಾಸಗಿ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಆದ್ರೆ, ನಿನ್ನೆ ರಾತ್ರಿ 9ರ ಸುಮಾರಿಗೆ ಅವರು ಲಾಡ್ಜ್ ರೂಮ್‌ನಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗದಗ ಮೂಲದ 56 ವರ್ಷದ ಜಕ್ಕಣ್ಣ ಗೌಡರ್, ಕೋರ್ಟ್ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದು, ಅ.14ರಂದು ಖಾಸಗಿ ಲಾಡ್ಜ್ ಬುಕ್ ಮಾಡಿದ್ದರು. ಆದ್ರೆ, ನಿನ್ನೆ ಬೆಳಗ್ಗೆಯಿಂದ ಕುಟುಂಬಸ್ಥರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು...

Post
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!

ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!

ಶಿಗ್ಗಾವಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಶಿಗ್ಗಾವಿ ಪಟ್ಟಣದ ಹಿರೇಕೆರೆಯಲ್ಲಿ ಮಂಗಳವಾರ ಸಂಜೆ ಜರುಗಿದೆ. ಮೃತ ವ್ಯಕ್ತಿಗಳನ್ನ ಶಿಗ್ಗಾವಿ ಪಟ್ಟಣದ ಸಾಲಗೇರಿ ಓಣಿಯ ಹಜರತ ಅಲಿ ಇಬ್ರಾಹಿಂ ಮುಕ್ಕೇರಿ (27), ಅಕ್ಸರ್ ಹಿಮಾಮ್ ಖಾಸೀಮ್ ಸುಲ್ತಾನಖಾನವರ (35) ಎಂದು ಗುರುತಿಸಲಾಗಿದೆ. ಮೀನು ಹಿಡಿಯುವಾಗ ಆಯತಪ್ಪಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಗಳ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮೃತ ವ್ಯಕ್ತಿಗಳ...

Post
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!

ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!

ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ 3 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬ‌ರ್ 13ರಂದು ಉಪ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬ‌ರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶವು ಪ್ರಕಟವಾಗಲಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

Post
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ

ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ

ಹುಬ್ಬಳ್ಳಿಯ ಯುವಕನೋರ್ವನ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುದೀಪ್, ಕಿರಣ್ ಪೊಲೀಸರ ಗುಂಡು ತಿಂದ ಆರೋಪಿಗಳಾಗಿದ್ದಾರೆ. ಆಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಶಿವರಾಜ್ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಆದ್ರೆ ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಬಂಧಿಸಲು ತೆರಳಿದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಂಕತರ ಮೇಲೆ ಫೈರಿಂಗ್ ಮಾಡಿದ್ದು, ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಗುಂಡು ತಗುಲಿದ್ದರಿಂದ...

Post
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!

ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!

ಮುಂಡಗೋಡ: ಪಟ್ಟಣದ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆ ಉಸಿರೆಳೆದಿದ್ದಾರೆ.

Post
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ

“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ

ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಇದು ಪ್ರಸಕ್ತ ವರ್ಷದ ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ.. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿಯ ದೈವ ವಾಣಿ ಕಾರ್ಣಿಕ ಶುಕ್ರವಾರ ಸಂಜೆ ಜರುಗಿತು. ನಾಗಪ್ಪಜ್ಜ ಉರ್ಮಿ 21 ಅಡಿ ಬಿಲ್ಲನ್ನು ಏರಿ “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ವಿಜಯದಶಮಿಯ ಮುನ್ನಾದಿನ ಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ಕಾರ್ಣಿಕ ನುಡಿಯುವ ಸಂಪ್ರದಾಯವಿದೆ. “ದಸರಾ ಸಂದರ್ಭದಲ್ಲಿ ಕಾರ್ಣಿಕ ನುಡಿಯುವ ನಾಗಪ್ಪ ಉರ್ಮಿ 21 ಅಡಿ...

Post
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!

ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!

ಮುಂಡಗೋಡ; ಕರಡಿ ದಾಳಿಯಿಂದ ಯುವಕನೋರ್ವನಿಗೆ ಗಂಭೀರ ಗಾಯವಾದ ಘಟನೆ, ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ್ ವ್ಯಾಪ್ತಿಯ ಸಿಂಗನಹಳ್ಳಿ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ವಿಪರ್ಯಾಸ ಅಂದ್ರೆ ಐದು ದಿನಗಳ ಹಿಂದೆ ನಡೆದಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮು ಜಾನು ಕೋಕರೆ(31) ಕರಡಿ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಕಳೆದ ಐದು ದಿನಗಳ ಹಿಂದೆ ಕರಡಿ ದಾಳಿಯಾಗಿತ್ತು. ಈ ವೇಳೆ ವ್ಯಕ್ತಿಯ ತಲೆಗೆ ಕಚ್ಚಿ ತೀವ್ರ ಗಾಯಗೊಳಿಸಿತ್ತು. ದುರಂತ ಅಂದ್ರೆ ಇಷ್ಟೊಂದು ಗಾಯವಾಗಿದ್ರೂ ಈ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗಲೇ...

error: Content is protected !!