Home publicfirstnewz

Author: publicfirstnewz (Santosh Shetteppanavar)

Post
ಯಲ್ಲಾಪುರ ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿದ ಸಚಿವ ಹೆಬ್ಬಾರ್..!

ಯಲ್ಲಾಪುರ ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿದ ಸಚಿವ ಹೆಬ್ಬಾರ್..!

ಯಲ್ಲಾಪುರ:ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ದೇಹಳ್ಳಿ, ಆನಗೋಡ ಹಾಗೂ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳ, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ,ಗ್ರಾಮಗಳಲ್ಲಿ ಕೊರೊನಾ ಸೋಂಕನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮಸ್ಥರನ್ನು ಭೇಟಿಯಾಗಿ ಕೋವಿಡ್ 19 ಸೋಂಕಿನ ಕುರಿತು ಜಾಗೃತಿ ಮೂಡಿಸಿ,ಕೋವಿಡ್ ನ...

Post
ಸಿಎಂ ಘೋಷಿಸಿದ ವಿಶೇಷ ಪ್ಯಾಕೇಜ್ ನಲ್ಲಿ ಯಾರಿಗೇಷ್ಟು..? ಇಲ್ಲಿದೆ ಫುಲ್ ಡೀಟೇಲ್ಸ್..!

ಸಿಎಂ ಘೋಷಿಸಿದ ವಿಶೇಷ ಪ್ಯಾಕೇಜ್ ನಲ್ಲಿ ಯಾರಿಗೇಷ್ಟು..? ಇಲ್ಲಿದೆ ಫುಲ್ ಡೀಟೇಲ್ಸ್..!

ಕರ್ನಾಟಕದಲ್ಲಿ 2ನೇ ಅಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಮಾಡಿದ್ದು ಇದರಿಂದ ಸಂಕಷ್ಟಕ್ಕೊಳಗಾಗಿರೋ ವಿವಿಧ ವರ್ಗಗಳಿಗೆ ಸರ್ಕಾರ  ಪ್ಯಾಕೇಜ್ ಘೋಷಣೆ ಮಾಡಿದೆ. ಆರ್ಥಿಕ ಹಿಂಜರಿತದ ನಡುವೆಯೂ ಕೂಡ ಸಂಕಷ್ಟಕ್ಕಿಡಾಗಿರುವ ವರ್ಗಗಳಿಗೆ ಸಿಎಂ ಯಡಿಯೂರಪ್ಪ ಇಂದು ಮತ್ತೆ ಘೋಷಣೆ ಮಾಡಿದ್ದಾರೆ.  ಹಾಗಾದ್ರೆ ಇವತ್ತು ಘೋಷಣೆ ಮಾಡಿರೋ ಪ್ಯಾಕೇಜ್ ನಲ್ಲಿ ಯಾರ್ಯಾರ ಪಾಲು ಎಷ್ಟು..? ಇಲ್ಲಿದೆ ಫುಲ್ ಡೀಟೇಲ್ಸ್. 1. ಪವರ್ ಲೂಮ್ ನೇಕಾರರು ಪ್ರತಿ ಪವರ್ ಲೂಮ್‍ಗೆ ಇಬ್ಬರು ಕೆಲಸಗಾರರಿಗೆ ಮೀರದಂತೆ ತಲಾ ರೂ 3,000ದಂತೆ...

Post
ನಕ್ಕು ನಗಿಸಿದ್ದ ಹಿರಿಯ ಪೋಷಕ ನಟಿ ಬಿ.ಜಯಾ ವಿಧಿವಶ..! ಕಂಬನಿ ಮಿಡಿದ ಚಿತ್ರರಂಗ..!!

ನಕ್ಕು ನಗಿಸಿದ್ದ ಹಿರಿಯ ಪೋಷಕ ನಟಿ ಬಿ.ಜಯಾ ವಿಧಿವಶ..! ಕಂಬನಿ ಮಿಡಿದ ಚಿತ್ರರಂಗ..!!

ಬೆಂಗಳೂರು: ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ ಇಂದು ಕೊನೆಯುಸಿರು ಎಳೆದಿದ್ದಾರೆ. ಅನೇಕ ಹಿರಿಯ ನಟರೊಂದಿಗೆ ನಟಿಸಿದ್ದ ನಟಿಯ ನಿಧನಕ್ಕೆ ಚಿತ್ರರಂಗವೇ ಕಣ್ಣೀರು ಸುರಿಸಿದೆ. ಎತ್ತರದಲ್ಲಿ ಕೊಂಚ ಕುಳ್ಳಗಿದ್ದ ಜಯಾ ಅವರು ಕುಳ್ಳಿ ಜಯಾ ಎಂದೇ ಜನಪ್ರಿಯರಾಗಿದ್ದರು. ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಜನರ ಮನಸ್ಸು ಗೆದ್ದಿದ್ದರು. ಹಾಸ್ಯಮಯ ಪಾತ್ರಗಳಲ್ಲೂ ಕಾಣಿಸಿಕೊಂಡು ಅಭಿಮಾನಿಗಳ ಮೊಗದಲ್ಲಿ ನಗು ಮೂಡಿಸಿದ್ದರು. ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು. 1944ರಲ್ಲಿ...

Post
ಬೀಜ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ-ಕೃಷಿ ಸಚಿವ ಬಿ.ಸಿ.ಪಾಟೀಲ್

ಬೀಜ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ-ಕೃಷಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ: : ಕಳಪೆ ಬಿತ್ತನೆ ಬೀಜ ದಾಸ್ತಾನು, ಮಾರಾಟ ಹಾಗೂ ಅನಧಿಕೃತವಾಗಿ ಬಿತ್ತನೆ ಬೀಜ ಗೊಬ್ಬರ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಕುರಿತಂತೆ ರಾಜ್ಯಾದ್ಯಂತ ವಿಶೇಷ ಅಭಿಯಾನ ಕೈಗೊಂಡು ಅಕ್ರಮಕ್ಕೆ ಕಡಿವಾಣ ಹಾಕಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಹೇಳಿದರು. ಹಾವೇರಿ ಪ್ರವಾಸಿ ಮಂದಿರದಲ್ಲಿ ಮುಂಗಾರು ಬಿತ್ತನೆ ಬೀಜ ಹಾಗೂ ಗೊಬ್ಬರದ ದಾಸ್ತಾನು ವ್ಯವಸ್ಥೆ ಕುರಿತಂತೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕಳಪೆ...

Post
ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ: ಜೊತೆಗೆ 500 ಕೋಟಿ ಪ್ಯಾಕೇಜ್ ಘೋಷಣೆ..!!

ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ: ಜೊತೆಗೆ 500 ಕೋಟಿ ಪ್ಯಾಕೇಜ್ ಘೋಷಣೆ..!!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ಮಾರ್ಗಸೂಚಿ‌ ಒಂದು ವಾರಗಳ ಕಾಲ ಮುಂದುವರಿಯಲಿದೆ‌. ಹೋಟೆಲ್ ಗಳಲ್ಲಿ ಸಂಜೆಯ ವರೆಗೂ ಪಾರ್ಸೆಲ್ ಗೆ ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೇ ಲಾಕ್ ಡೌನ್ ಘೋಷಣೆಯ ಜೊತೆಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ‌ ಮಾಡಿದ್ದಾರೆ.

Post
ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!

ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!

ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆ ಹತ್ತಿರ, ಇಂದು ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ 12 ಗಂಟೆ ನಂತರ ಪಟ್ಟಣದ ಒಳಗೆ ಅನಗತ್ಯವಾಗಿ ಪ್ರವೇಶಿಸುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನ ಸವಾರರನ್ನು ತಡೆದು ಕೋವಿಡ್ನಿ ನಿಯಮಗಳನ್ನು ತಿಳಿ ಹೇಳಿದರು. ಹಾಗೆ ಸಂಚಾರ ನಿಯಮ ಪಾಲಿಸಲು ಸಾರ್ವಜನಿಕರಿಗೆ ಪೊಲೀಸ್ ಪೇದೆಗಳು ಎಚ್ಚರಿಸಿದರು.

Post
12 ಗಂಟೆ ನಂತರವೂ ತೆರೆದಿದ್ದ ದಿನಸಿ ಅಂಗಡಿಗಳು: ಪೊಲೀಸರಿಂದ ಕ್ರಮ..!

12 ಗಂಟೆ ನಂತರವೂ ತೆರೆದಿದ್ದ ದಿನಸಿ ಅಂಗಡಿಗಳು: ಪೊಲೀಸರಿಂದ ಕ್ರಮ..!

ಮುಂಡಗೋಡ: ಪಟ್ಟಣದಲ್ಲಿ ಇಂದು ಲಾಕ್ ಡೌನ್ ಸಡಿಲಿಕೆಯ ವಾರದ ಕೊನೆಯ ದಿನ ಅಗತ್ಯ ವಸ್ತುಗಳ ಖರೀಧಿಯಲ್ಲಿ ತೊಡಗಿದ್ದ ಜನ್ರು 12 ಗಂಟೆಯ ನಂತರವೂ ಅನಗತ್ಯ ತಿರುಗಾಡುತ್ತಿದ್ದ ದೃಷ್ಯ ಕಂಡು ಬಂತು. ದಿನಸಿ ಅಂಗಡಿಗಳು ಕೂಡ 12 ಗಂಟೆ ನಂತರವೂ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಹೀಗಾಗಿ, ಮುಂಡಗೋಡ ಪ್ರೊಬೇಷನರಿ ಪಿಎಸ್ ಐ ಕುಮಾರಿ ಕಸ್ತೂರಿ, ಅಂಗಡಿಕಾರರಿಗೆ ಎಚ್ಚರಿಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರು. ಗುಂಪು ಗುಂಪಾಗಿ ನಿಂತಿದ್ದ ಜನರನ್ನು ಎಚ್ಚರಿಸಿ ಕಳಿಸಿದ್ರು.

Post
ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!

ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!

ಹುಬ್ಬಳ್ಳಿ: ನಗರದ ಗದಗ ರಿಂಗ್ ರೋಡಲ್ಲಿ ಎರಡು ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ, ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಹುಬ್ಬಳ್ಳಿ ಸೆಟ್ಲಮೆಂಟ್ ಗಂಗಾಧರನಗರದ ವಿಶಾಲ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದ್ದು, ಪಲ್ಸರ್ ಬೈಕಿನಲ್ಲಿ ಹೋಗಿ ವಾಹನ ಚಾಲಕರನ್ನು ಬೆದರಿಕೆ ಹಾಕಿ ಹಣ ದೋಚುತ್ತಿದ್ದರು ಎನ್ನಲಾಗಿದೆ. ರಿಂಗ್ ರೋಡಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ ಎಂಬುವವರ ಟಾಟಾ ಏಸ್ ವಾಹನಗಳನ್ನ ನಿಲ್ಲಿಸಿ,...

Post

ಕಾರವಾರ ಡಿಸಿ ಕಛೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಚಿವ ಹೆಬ್ಬಾರ್ ಸಭೆ..!

ಕಾರವಾರ: ಕಾರ್ಮಿಕ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಶಿವರಾಮ ಹೆಬ್ಬಾರ್ ಇಂದು ಕಾರವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಕೋವಿಡ್ – 19 ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಸದ್ಯದ ಸ್ಥಿತಿಗಳ ಕುರಿತು ಮಾಹಿತಿ ಪಡೆದು, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು,ಸೊಂಕಿತರಿಗೆ ಚಿಕಿತ್ಸೆ, ವೈದ್ಯಕೀಯ ಸೌಕರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕಿ...

Post

ಜಿಲ್ಲಾಸ್ಪತ್ರೆಗೆ 5 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಿದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ..!

ಕಾರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಉತ್ತರಕನ್ನಡ ಜಿಲ್ಲೆಗೆ ನೀಡಿರುವ ಸುಮಾರು 5 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಜಿಲ್ಲಾ ವೈದ್ಯಾಧಿಕಾರಿ ಮೂಲಕ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ , ಜಿಲ್ಲಾ ವೈದ್ಯಾಧಿಕಾರಿ, ಶರದ್ ನಾಯಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು‌.

error: Content is protected !!