Home publicfirstnewz

Author: publicfirstnewz (Santosh Shetteppanavar)

Post
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!

ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!

ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದುಕೊಂಡು ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ. ಶನಿವಾರ ತಡರಾತ್ರಿ ನಡೆದಿರೋ ಘಟನೆಯಲ್ಲಿ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ದಿನ ರಾತ್ರಿ ಪತ್ನಿಯ ಮನೆಗೆ ಆಗಮಿಸಿದ್ದ ಅರವಿಂದ್, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ...

Post
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!

ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!

 ಮುಂಡಗೋಡ: ತಾಲೂಕಿನ ಚಿಗಳ್ಳಿ ಹೋರಿಹಬ್ಬದಲ್ಲಿ ಯುವಕನಿಗೆ ಹೋರಿ ತಿವಿದು ದಾರುಣ ಸಾವು ಕಂಡ ಹಿನ್ನೆಲೆಯಲ್ಲಿ, ಮುಂಡಗೋಡಿನ ಹಳೂರಿನಲ್ಲಿ ನಡೆಯುತ್ತಿದ್ದ ಹೋರಿ ಹಬ್ಬವನ್ನು ಆಯೋಜಕರು ಅರ್ಧಕ್ಕೆ ಬಂದ್ ಮಾಡಿಸಿದ್ದಾರೆ. ಬೆಳಗಿನಿಂದಲೂ ಮುಂಡಗೋಡಿನ ಹಳೂರಿನಲ್ಲಿ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಹೋರಿ ಅಭಿಮಾನಿಗಳು, ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ಬಂದಿದ್ರು‌. ಆದ್ರೆ ,ಯಾವಾಗ ಚಿಗಳ್ಳಿಯಲ್ಲಿ ದುರಂತ ಸಂಭವಿಸಿದ ಕಾರಣಕ್ಕಾಗಿ ಹೋರಿ ಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ.  

Post
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು‌.!

ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು‌.!

 ಮುಂಡಗೋಡ ತಾಲೂಕಿನ ಚಿಗಳ್ಳಿಯ ಹೋರಿಹಬ್ಬದಲ್ಲಿ ಭಯಾನಕ ದುರ್ಘಟನೆ ಸಂಭವಿಸಿದೆ. ಹೋರಿ ಹಬ್ಬ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಭಯಾನಕ ಸಾವು ಕಂಡಿದ್ದಾನೆ. ಪರಮೇಶ್ ಸಿದ್ದಪ್ಪ ಹರಿಜನ್ (21) ಎಂಬುವ ಯುವಕನೇ ಹೋರಿ ಹಬ್ಬದಲ್ಲಿ ಹೋರಿ ತಿವಿದು ಮೃತಪಟ್ಟ ಯುವಕನಾಗಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ನಿಮಿತ್ತ ಚಿಗಳ್ಳಿಯ ಕಲ್ಮೇಶ್ವರ ಮಠದ ಹತ್ತಿರ ಹೋರಿಹಬ್ಬದಲ್ಲಿ ಏರ್ಪಡಿಸಲಾಗಿತ್ತು. ಈ ಹಬ್ಬದಲ್ಲಿ ವಿವಿದೆಡೆಯಿಂದ ಬಲಿತ ಸ್ಪರ್ಧಾ ಹೋರಿಗಳು ಬಂದಿದ್ದವು. ಹೀಗಾಗಿ, ಹೋರಿಗಳ ಹಬ್ಬ ನೋಡಲು ಹೋಗಿದ್ದ ಹುಡುಗನ ಮೇಲೆ ಹೋರಿ...

Post
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!

ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!

ಮುಂಡಗೋಡ ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಾಂಡುರಂಗ ಹೊಟೇಲ್ ಬಳಿ, ಬೈಕ್ ಹಾಗೂ ಟಾಟಾ ಎಸ್ ವಾಹನಕ್ಕೆ ಅಪಘಾತವಾಗಿದೆ. ಪರಿಣಾಮ ಹಳೂರಿನ ಯುವಕ ಗಂಭೀರ ಗಾಯಗೊಂಡಿದ್ದಾನೆ. ಇವತ್ತಷ್ಟೇ ಹಬ್ಬಕ್ಕಾಗಿ ಬೆಂಗಳೂರಿನಿಂದ ಬಂದಿದ್ದ, ಮುಂಡಗೋಡ ಹಳೂರಿನ ಮಣಿಕಂಠ(20) ಎಂಬುವ ಯುವಕನೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಕಾಲಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post

ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?

ಶಿಗ್ಗಾವಿ ವಿಧಾನಸಭಾ ಉಪ ಕದನ ರಂಗೇರುತ್ತಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಇಂದು ಕೈ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಮಹತ್ವದ ದಿನವಾಗಿದೆ. ಯಾಕಂದ್ರೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರೋ ಅಜ್ಜಂಫೀರ್ ಖಾದ್ರಿ ಇಂದು ನಾಮಪತ್ರ ವಾಪಸ್ ಪಡೀತಾರಾ..? ಯಕ್ಷ ಪ್ರಶ್ನೆಯಾಗಿದೆ. ಈ ನಡುವೆ ಮಂಗಳವಾರ ಹುಬ್ಬಳ್ಳಿಗೆ ಬಂದು ಇಳಿದಿರೊ ಖಾದ್ರಿ, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಯವರನ್ನು ಸಂಧಾನ ಮಾಡಿಸಲಾಗಿದೆ. ಜಮೀರ್ ಅಹ್ಮದ್ ಮುಂದಾಳತ್ವದಲ್ಲಿ ಸಂಧಾನ ಸಭೆ ನಡೆದಿದೆ. ವಾಪಸ್ ಪಡೀತಾರಾ..? ಅಂದಹಾಗೆ, ಶಿಗ್ಗಾವಿ...

Post
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ

ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ

 ಶಿಗ್ಗಾವಿ ಕೇತ್ರದ ಉಪ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದ 26 ಅಭ್ಯರ್ಥಿಗಳ ಪೈಕಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದ್ದು, 7 ನಾಮಪತ್ರಗಳು ತಿರಸ್ಕೃತವಾಗಿದೆ. ಚುನಾವಣಾಧಿಕಾರಿ ಮಹ್ಮದ್ ಖಿಜರ್ ನೇತೃತ್ವದ ತಂಡ ಸೋಮವಾರ ನಾಮಪತ್ರ ಪರಿಶೀಲನೆ ನಡೆಸಿತು. 26 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 46 ನಾಮಪತ್ರಗಳ ಪೈಕಿ 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿದೆ. 19 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿವೆ. ಅ.30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಬಿಜೆಪಿಯ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನ ಯಾಸಿರ್ ಅಹ್ಮದಖಾನ್‌ ಪಠಾಣ, ಸೋಸಿಯಾಲಿಸ್ಟ್ ಪಾರ್ಟಿ(ಇಂಡಿಯಾ)...

Post
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!

ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!

ಮುಂಡಗೋಡ ತಾಲೂಕಿನ ಅಂದಲಗಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ನಿನ್ನೆ ಸಂಜೆ ಸುಮಾರು ಏಳು ಗಂಟೆಯ ಹೊತ್ತಿಗೆ ಗದ್ದೆಯಲ್ಲಿ ಕರಡಿ ದಾಳಿ ಮಾಡಿದ್ದು, ಕಾಲು ಹಾಗೂ ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯವಿಲ್ಲ ಎನ್ನಲಾಗಿದೆ‌. ದ್ಯಾಮಣ್ಣ ನಾಗಪ್ಪ ಬೆಂಡಿಗೇರಿ (35) ಎಂಬುವವನ‌ ಮೇಲೆ ಕರಡಿ ದಾಳಿ ಮಾಡಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಗಾಯಾಳುಗೆ ಚಿಕಿತ್ಸೆ ನೀಡಲಾಗುತ್ತಿದೆ.

Post
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!

ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!

ಶಿಗ್ಗಾಂವ ಕ್ಷೇತ್ರದ ಉಪ ಚುನಾವಣೆಗೆ ನಾಮ ಪತ್ರ ಸಲ್ಲಿಕೆಗೆ ಕೊನೆಯದಿನವಾದ ಅ.25ರ ಶುಕ್ರವಾರ 20ಅಭ್ಯರ್ಥಿಗಳು 25 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನಿಂದ ಯಾಸಿರ ಅಹ್ಮದಖಾನ ಪಠಾಣ 4, ಭಾರತೀಯ ಜನತಾ ಪಾರ್ಟಿಯಿಂದ ಭರತ ಬೊಮ್ಮಾಯಿ ಅವರು 2, ಪಕ್ಷೇತರವಾಗಿ ಸೈಯದ್ ಅಜೀಂಪೀರ ಖಾದ್ರಿ 2, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ, ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್‌ನಿಂದ ಮಕ್ತುಮಸಾಬ ಮುಲ್ಲಾ, ಉತ್ತಮ ಪ್ರಜಾಕೀಯ ಪಕ್ಷದಿಂದ ಸಚಿನಕುಮಾರ ಕರ್ಜೇಕಣ್ಣನವರ, ಟಿಪ್ಪು ಸುಲ್ತಾನ ಪಾರ್ಟಿಯಿಂದ ಶೌಖತಅಲಿ ಬಂಕಾಪೂರ, ಪಕ್ಷೇತರರಾಗಿ ರಾಜು...

Post
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!

ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!

ಶಿಗ್ಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.. ಈ ಸಾರಿ ಮುಸ್ಲಿಂ ರಿಗೆ ಮಣೆ ಹಾಕದ ಕೈ ಪಡೆ ವೈಶಾಲಿ ಕುಲಕರ್ಣಿಗೆ ಕೈ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಇದ್ರೊಂದಿಗೆ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಬಗೆ ಹರಿದಂತಾಗಿದೆ. ಅಂದಹಾಗೆ, ವೈಶಾಲಿ ಕುಲಕರ್ಣಿ ಧಾರವಾಡ ಶಾಸಕ ವಿನಯ್ ಕುಲಕರ್ಣಿಯವರ ಸುಪುತ್ರಿಯಾಗಿದ್ದು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಡೆಗೆ ಭಾರೀ ಸೆಡ್ಡು ಹೊಡೆಯುವ ಸಾಧ್ಯತೆ ಇದೆ. ಈ‌ ಕಾರಣಕ್ಕಾಗೇ ಕೈ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಅಂತಾ...

Post
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?

ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?

 ಮುಂಡಗೋಡ ತಾಲೂಕಿನಾಧ್ಯಂತ ಸೋಮವಾರ ಸುರಿದ ಭಾರೀ ಮಳೆಗೆ ವಿಪರೀತ ಅವಾಂತರಗಳು ಸೃಷ್ಟಿಯಾಗಿವೆ. ಸೋಮವಾರದಿಂದ ತಾಲೂಕಿನ ಹಲವು ಕಡೆ ಕೆಲ ದುರಂತಗಳೂ ನಡೆದಿವೆ. ಅತ್ತಿವೇರಿ ಗೌಳಿ ದಡ್ಡಿ ಬಳಿ ಹಾಗೂ ಶಿರಸಿ ರಸ್ತೆಯ ಹಿರೇಹಳ್ಳಿ ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗೌಳಿಗರ ಹದಿನೈದಕ್ಕೂ ಹೆಚ್ಚು ಎಮ್ಮೆಗಳು ನೀರು ಪಾಲಾಗಿವೆ ಅನ್ನೋ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಕೆಲವು ಎಮ್ಮೆಗಳ‌ ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಹಲವು ಎಮ್ಮೆಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿವೆ ಅಂತಾ ಹೇಳಲಾಗಿದೆ. ಅತ್ತಿವೇರಿ ಗೌಳಿದಡ್ಡಿಯಲ್ಲಿ..! ಅಂದಹಾಗೆ, ಸೋಮವಾರ...

error: Content is protected !!