ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!

ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!

Death News: ಮುಂಡಗೋಡ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ರಾಮಣ್ಣ ಕುನ್ನೂರ್(69) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಾಮಣ್ಣ ಕುನ್ನೂರ್ ರನ್ನು ನಿನ್ನೆ ಬುಧವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ.

ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

Bus Accident; ಮುಂಡಗೋಡ ತಾಲೂಕಿನ ಮಳಗಿ ಬಸ್ ನಿಲ್ದಾಣದ ಎದುರೇ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಪಘಾತವಾಗಿದೆ. ಪರಿಣಾಮ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ನಿತ್ಯವೂ ಸಂಚರಿಸುವ ಹುಬ್ಬಳ್ಳಿ ಶಿರಸಿ ಬಸ್ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ‌.

ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!

ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!

 Students Protest; ಮುಂಡಗೋಡ ತಾಲೂಕಿನ ಪಾಳಾದಲ್ಲಿ ಸಮರ್ಪಕ ಬಸ್ ಕಲ್ಪಿಸುವಂತೆ ಆಗ್ರಹಿಸಿ, ಶಾಲಾ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ, ಶಿರಸಿ-ಹುಬ್ಬಳ್ಳಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಹತ್ತಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬೆಳಿಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದ ಗ್ರಾಮಸ್ಥರು, ಪೋಷಕರು ವಿದ್ಯಾರ್ಥಿಗಳ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರಲೇ ಬೇಕು ಅಂತಾ ಹಠ ಹಿಡಿದು ಪ್ರತಿಭಟನೆ ಮುಂದುವರೆಸಿದ್ರು. ಅಸಲು, ಮುಂಡಗೋಡ ತಾಲೂಕಿನ ಹಲವು ಹಳ್ಳಿಗಳಿಗೆ KSRTC ಬಸ್ ಸಂಚಾರ ವ್ಯವಸ್ಥಿತವಾಗಿಲ್ಲ. ಅದ್ರಲ್ಲೂ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪೂರಕವಾಗಿ ಬಸ್ ಗಳ ವ್ಯವಸ್ಥೆ ಇಲ್ಲವೇ ಇಲ್ಲ. ಈ ಕಾರಣಕ್ಕಾಗಿನೇ ತಾಲೂಕಾಧ್ಯಂತ ಹಲವು ಬಾರಿ ಪ್ರತಿಭಟನೆಗಳು ನಡೆದಿವೆ. ಆದ್ರೂ ಕೂಡ ಸಂಬಂಧಿಸಿದ ಅಧಿಕಾರುಗಳು ಜಾಣಕುರುಡು ತೋರಿಸ್ತಿದಾರೆ.

ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!

ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!

Accident News; ಮುಂಡಗೋಡ ಹುಬ್ಬಳ್ಳಿ ರಸ್ತೆಯ, ವಡಗಟ್ಟಾ ಸಮೀಪದ ತಡಸ ತಾಯವ್ವನ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಹಲವರಿಗೆ ಗಾಯವಾಗಿರೋ ಘಟನೆ ನಡೆದಿದೆ‌. ಇನ್ನಷ್ಟು ಮಾಹಿತಿ ಬರಬೇಕಿದೆ.. ಅಪಡೇಟ್ ಮಾಡಲಾಗುವುದು.

ಹುಬ್ಬಳ್ಳಿಯಲ್ಲಿ  ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ‌ ಅಟ್ಯಾಕ್..!

ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ‌ ಅಟ್ಯಾಕ್..!

Crime News; ಹುಬ್ಬಳ್ಳಿ: ಕಳೆದ‌ ಮೂರು ದಿನಗಳ ಹಿಂದೆಯಷ್ಟೆ ಪುಡಿ ರೌಡಿಗಳ ಅಟ್ಟಹಾಸದಿಂದ ಓರ್ವ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಪ್ರಕರಣ ನಡೆದ ಬೆನ್ನಲ್ಲೇ ಇನ್ನೊಂದು ಚಾಕು ಇರಿತ ಪ್ರಕರಣ ತಡ ರಾತ್ರಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದ್ದು ನಗರದ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ. ಯಲ್ಲಾಪುರ ಓಣಿಯ ಬುಡ್ಡು ಪಾನ್ ಶಾಪ್ ಬಳಿ ಈ ಘಟನೆ ನಡೆದಿದ್ದು, ಹಳೆಯ ವೈಷಮ್ಯವೇ ಈ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ತಡರಾತ್ರಿ ಅಫ್ತಾಬ್ ನ ಮನೆಗೆ ಆಗಮಿಸಿದ್ದ ಜೈಯದ್, ತೋಹೀದ್, ಚೋರ್ ಫಾರೂಕ್ ಸೇರಿದಂತೆ ಐದು ಜನ ದುಷ್ಕರ್ಮಿಗಳು ಅಫ್ತಾಬ್ ನಿಗೆ ಬೆದರಿಕೆ ಹಾಕಿದ್ದಾರೆ. ಅಲ್ಲೇ ಬೆದರಿಕೆ ಹಿನ್ನೆಲೆ ಇಂದು ಅಫ್ತಾಬ್ ಹಾಗೂ ಆತನ ಕುಟುಂಬಸ್ಥರು ಬೆಂಡಿಗೇರಿ ಪೊಲೀಸ್‌ ಠಾಣೆಗೆ ದೂರು ನೀಡಲು ಹೋಗಿದ್ದಾರೆ. ದೂರು ನೀಡಿ...

ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!

ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!

Heavy rains forecast; ಬೆಂಗಳೂರು: ಕರಾವಳಿ ಹಾಗೂ ಉತ್ತ-ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್‌ 27, 28 ಹಾಗೂ 29 ರಂದು ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್‌ 26 ರಂದು ಉತ್ತರ ಕನ್ನಡದಲ್ಲಿ ಮಾತ್ರ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ 27 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ ನೀಡಲಾಗಿದೆ. , ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗೂ ಭಾರಿ ಮಳೆಯ ಯೆಲ್ಲೋ ಅಲರ್ಟ್ ಇದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ. ಅಕ್ಟೋಬರ್‌ 28ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (30-40 ಕಿ.ಮೀ.) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು,...

KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!

KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!

KDCC ELECTION; ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ KDCC ಬ್ಯಾಂಕ್ ಚುನಾವಣೆಯಲ್ಲಿ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಟೀಂ ಗೆ ನಿರಾಸೆಯಾಗಿದೆ. ಶಾಸಕ ಹಾಗೂ ಹಾಲಿ KDCC ಅಧ್ಯಕ್ಷ ಶಿವರಾಮ್ ಹೆಬ್ಬಾರರ ಬಣ ಸಧ್ಯಕ್ಕೆ ಸ್ಪಷ್ಟ ಮುನ್ನಡೆ ಸಾಧಿಸಿದಂತಾಗಿದೆ. ಅಂದಹಾಗೆ, ಕೆಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಮಂಡಳಿ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಒಟ್ಟು 16 ನಿರ್ದೇಶಕ ಸ್ಥಾನಗಳಿಗೆ ನಡೆದ ಸ್ಪರ್ಧೆಯಲ್ಲಿ, ಈವರೆಗೆ ಏಳು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಉಳಿದ ಕ್ಷೇತ್ರಗಳ ಮತ ಎಣಿಕೆ ಕುರಿತ ವಿಚಾರ ಕೋರ್ಟಿನಲ್ಲಿದೆ. ಹೀಗಾಗಿ, ಕೋರ್ಟ್ ತೀರ್ಮಾನದ ನಂತರವಷ್ಟೇ ಸ್ಪಷ್ಟತೆ ಸಿಗಲಿದೆ. ಮುಂದಿನ ಐದು ವರ್ಷಗಳ ಅವಧಿಗೆ ಹೊಸ ಆಡಳಿತ ಮಂಡಳಿಯನ್ನು ಆಯ್ಕೆ ಮಾಡಲು ಇಂದು (ಶನಿವಾರ) ಮತದಾನ ನಡೆದಿತ್ತು. ಉಪವಿಭಾಗಾಧಿಕಾರಿ ಕಾವ್ಯರಾಣಿ ಇಂದೇ ಸಂಜೆ ಮತ ಎಣಿಕೆಯ ಫಲಿತಾಂಶ ಪ್ರಕಟಿಸಿದರು. ಈ ಚುನಾವಣೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಮತ್ತು ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿದೆ. ಈಗಾಗಲೇ ಹೊರಬಂದ ಫಲಿತಾಂಶಗಳ...

ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!

ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!

 Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ. ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ. ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.  

ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ

ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ

Heavy rain forecast; ಕಾರವಾರ; ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು , ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, 45 ರಿಂದ 55 ಕೀಮೀ ವೇಗದಲ್ಲಿ ಸಮುದ್ರ ತೀರದಲ್ಲಿ ಗಾಳಿ ಬೀಸುವ ಸಾದ್ಯತೆಯ ಹಿನ್ನೆಲೆಯಲ್ಲಿ , ಮಳೆಯ ಜೊತೆಗೆ ಗಾಳಿ ಕೂಡಾ 45-55 ಕಿ.ಮೀ ವೇಗದಿಂದ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳಿರುವ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಶಿಥಿಲವಾದ ಕಟ್ಟಡದಲ್ಲಿ ವಾಸಿಸುತ್ತಿರುವವರು ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು. ಸಣ್ಣ...

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!

Heavy rain forecast; ಬೆಂಗಳೂರು; ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿಣಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ದಿನ ಇದರ ಪ್ರಭಾವ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದಾಗಿ ವಾರವಿಡೀ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ನೀಡಲಾಗಿದೆ. ಹಾಸನ, ಮೈಸೂರು, ತುಮಕೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಜಿಲ್ಲೆಗಳಿಗೆ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಅಲ್ಲದೇ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೂ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ...

error: Content is protected !!