ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾನಗಲ್ ತಾಲೂಕಿನ ತಿಳವಳ್ಳಿಯ ಸಲ್ಮಾನಖಾನ್ ಗೌನಖಾನ್ ಆಲೂರು (24), ಎಂಬುವವನೇ ಗಾಂಜಾ ಕೇಸಿನ ಆರೋಪಿಯಾಗಿದ್ದು, ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಇವನಿಂದ ಬರೋಬ್ಬರಿ 2kg...
Top Stories
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
Author: Public First Newz (Public First Newz)
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಹತ್ಯೆ ಕೇಸಿಗೆ ಟ್ವಿಸ್ಟ್, ಕಟ್ಟಡದ ವಾಚಮನ್ ನೇಣಿಗೆ ಶರಣು..!
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭೀಕರ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಟ್ಟಡದಲ್ಲಿ ವಾಚಮನ್ ಆಗಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಸಪ್ಪ ಡಂಬರ(68)ಆತ್ಮಹತ್ಯೆ ಮಾಡಿಕೊಂಡ ವಾಚಮನ್ ಆಗಿದ್ದಾನೆ. ನಿನ್ನೆಯಷ್ಟೇ ಹುಬ್ಬಳ್ಳಿಯ ಸಿಲ್ವರ್ ಟೌನ್ ಕಟ್ಟಡದಲ್ಲಿ ಮುಂಡಗೋಡ ತಾಲೂಕಿನ ಮರಗಡಿಯ ಮೌಲಾಲಿ ಎಂಬುವ ಯುವಕನ ಬರ್ಬರ ಹತ್ಯೆಯಾಗಿತ್ತು. ಈ ಹತ್ಯೆಯ ಹಿಂದೆ ವಾಚಮನ್ ಕೈವಾಡವಿದೆ ಅಂತಾ ಕುಟುಂಬಸ್ಥರು ಅನುಮಾನ ವ್ಯಕ್ತ ಪಡಿಸಿದ್ದರು. ಸದ್ಯ ಕಟ್ಟಡದಲ್ಲಿ ವಾಚಮನ್ ಆಗಿದ್ದ ಪರಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಲೆ ಪ್ರಕರಣದಲ್ಲಿ...
ಹುಬ್ಬಳ್ಳಿಯಲ್ಲಿ ಮುಂಡಗೋಡ ಹುಡುಗನ ಮರ್ಡರ್: ಈದ್ ಮಿಲಾದ್ ಗಾಗಿ ಬರಲು ರೆಡಿಯಾಗಿದ್ದವ ಹುಡುಗಿಗಾಗಿ ಹೆಣವಾದ್ನಾ..?
ಮುಂಡಗೋಡ: ಆತ ಮುಂಡಗೋಡಿನ ಹಳ್ಳಿಯಿಂದ ಸಿಟಿಗೆ ದುಡಿಯೋಕೆ ಹೋಗಿದ್ದ. ಕಟ್ಟಡ ಕೆಲಸಕ್ಕೆಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಹೋಗಿದ್ದ ಯುವಕ ನಾಳೆ ಹಬ್ಬಕ್ಕೆ ಊರಿಗೆ ಬರಬೇಕಿತ್ತು. ತಂದೆ ತಾಯಿ ಹಬ್ಬ ಮಾಡಲಿ ಅಂತಾ ಮನೆಗೆ ನಿನ್ನೆ ದುಡ್ಡು ಕೂಡಾ ಹಾಕಿದ್ದ. ಇನ್ನೇನು ಕೆಲಸ ಮುಗಿಸಿ ಹಬ್ಬಕ್ಕೆ ಬರಬೇಕೆಂದವ ಮಲಗಿದ್ದಲ್ಲೇ ಕೊಲೆಯಾಗಿದ್ದಾನೆ. ತಾನು ಕೆಲಸ ಮಾಡ್ತಿದ್ದ ಕಟ್ಟಡದಲ್ಲಿಯೇ ಆತ ಹೆಣವಾಗಿ ಬಿದ್ದಿದ್ದಾನೆ. ದುಷ್ಕರ್ಮಿಗಳು ಎಲ್ಲೆಂದರಲ್ಲಿ ಇರಿದು ಯುವಕನ ಕೊಲೆ ಮಾಡಿದ್ದಾರೆ. ಕಟ್ಟಡ ಕೆಲಸ ಮಾಡ್ತಿದ್ದ ಕಾರ್ಮಿಕ ಮಲಗಿದಲ್ಲೆಯೇ...
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭಯಾನಕ ಮರ್ಡರ್..!
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ್ದಾರೆ ದುಷ್ಕರ್ಮಿಗಳು. ಗಾರೆ ಕೆಲಸಕ್ಕೆಂದು ಹುಬ್ಬಳ್ಳಿಗೆ ಹೋಗಿದ್ದ ಮೌಲಾಲಿ ಎಂಬುವ ಯುವಕನ್ನು ಕೊಂದು ಹಾಕಿದ್ದಾರೆ. ಹುಬ್ಬಳ್ಳಿಯ ಸಿಲ್ವರ್ ಟೌನ್ ನಲ್ಲಿ ಘಟನೆ ನಡೆದಿದ್ದು ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ ಕೊಲೆಯಾಗಿದ್ದಾನೆ. ಹೊಟ್ಟೆಪಾಡಿಗೆಂದು ಹುಬ್ಬಳ್ಳಿಗೆ ಗೌಂಡಿ ಕೆಲಸಕ್ಕೆಂದು ಹೋಗಿದ್ದ ಎನ್ನಲಾಗಿದೆ. ಮೌಲಾಲಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಯ ಮುಂಭಾಗದಲ್ಲಿಯೇ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ....
ಹುನಗುಂದ ಗ್ರಾಪಂ ಮಾಜಿ ಅಧ್ಯಕ್ಷೆ ಯಲ್ಲವ್ವ ಇಟ್ಲಾಪುರ ನಿಧನ, ಹಲವರ ಸಂತಾಪ..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ಯಲ್ಲವ್ವ ರಾಮಣ್ಣ ಇಟ್ಲಾಪುರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವ್ರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಕೊನೆ ಉಸಿರೆಳೆದಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಯಲ್ಲವ್ವ ಇಟ್ಲಾಪುರ, ಕಳೆದ ಅವಧಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅಧ್ಯಕ್ಷ ಪದವಿಯಿಂದ ಕೆಳಗೆ ಇಳಿದಿದ್ರು. ಬಹುತೇಕ ಸದಸ್ಯರ ಪೈಕಿ ಹಿರಿಯರಾಗಿದ್ದ ಯಲ್ಲವ್ವ ಕಾಂಗ್ರೆಸ್ ಬೆಂಬಲಿತ...
ಹುನಗುಂದ ಗ್ರಾಮಸಭೆಯಲ್ಲಿ ಕೋಲಾಹಲ, ಅಸಂಬದ್ಧ ಉತ್ತರಿಸಿದ ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗೆ ಹಿಗ್ಗಾ ಮುಗ್ಗಾ ತರಾಟೆ..!
ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಇಂದು ಮಂಗಳವಾರ ಗ್ರಾಮ ಸಭೆ ಆಯೋಜಿಸಲಾಗಿತ್ತು. ವಿಠ್ಠಲ ರುಕುಮಾಯಿ ಮಂದಿರದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಬಹುತೇಕ ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಯ ಬೇಜವಾಬ್ದಾರಿ ಹಾಗೂ ಅಸಂಬದ್ಧ ಉತ್ತರಗಳಿಂದ ಭಾರೀ ಕೋಲಾಹಲಕ್ಕೆ ಕಾರಣವಾಯ್ತು. ಚಿಕ್ಕ ನೀರಾವರಿ ಇಲಾಖೆಯ ಅಧಿಕಾರಿಯನ್ನು ಗ್ರಾಮಸ್ಥರು ಹಿಗ್ಗಾ ಮುಗ್ಗಾ ಜಾಡಿಸಿದ್ರು. ಅದು 75 ಲಕ್ಷದ ಕಾಮಗಾರಿ..! ಅಸಲು, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ ಜಲಾಶಯದ ಕಾಲುವೆ ಕಾಮಗಾರಿಯಲ್ಲಿ ಭಾರೀ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಜಲಾಶಯದ...
ಹಸಿಮೇವು ತಿಂದ ಕೆಲವೇ ಹೊತ್ತಲ್ಲಿ ಆಕಳು ಮತ್ತು ಕರು ದಾರುಣ ಸಾವು, ಹುನಗುಂದದಲ್ಲಿ ಘಟನೆ..!
ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಹಸಿಮೇವು ತಿಂದು ಕೆಲವೇ ಹೊತ್ತಲ್ಲಿ ಆಕಳು ಮತ್ತು ಕರು ಸಾವನ್ನಪ್ಪಿರೋ ಘಟನೆ ನಡೆದಿದೆ. ಮೇವು ತಿಂದ ಕೆಲವೇ ಹೊತ್ತಲ್ಲಿ ಸಾವು ಕಂಡಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹುನಗುಂದ ಗ್ರಾಮದ ಬಸವರಾಜ್ ಗುರುಸಿದ್ದಪ್ಪ ಚಬ್ಬಿ ಎಂಬುವವರಿಗೆ ಸೇರಿದ ಸುಮಾರು 37 ಸಾವಿರ ರೂ. ಮೌಲ್ಯದ ಆಕಳು ಮತ್ತು ಕರು ದಾರುಣ ಸಾವು ಕಂಡಿದ್ದು ಆಘಾತ ತಂದಿದೆ. ಇನ್ನು ಪಶು ವೈದ್ಯರು ಸ್ಥಳಕ್ಕೆ ಆಗಮಿಸಿ ಸಾವಿಗೆ ಕಾರಣವೇನು ಅಂತ ಪರಿಶೀಲನೆ ನಡೆಸಿದ್ದಾರೆ.
ಚೌಡಳ್ಳಿ ಸೊಸೈಟಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ, ಬಿಜೆಪಿಗೆ ಭಾರೀ ಮುಖಭಂಗ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಸೊಸೈಟಿಯಲ್ಲಿ ಬಿಜೆಪಿಗೆ ಭಾರೀ ಹೊಡೆತ ಬಿದ್ದಂತಾಗಿದೆ. ನಿಚ್ಚಳ ಬಹುಮತವಿದ್ದರೂ ಬಿಜೆಪಿಗೆ ಅಧಿಕಾರ ಅಕ್ಷರಶಃ ಕೈತಪ್ಪಿದೆ. ಬದಲಾಗಿ, ಕಾಂಗ್ರೆಸ್ ಬೆಂಬಲಿತರು ಸೊಸೈಟಿಯಲ್ಲಿ ಜಯದ ಝಂಡಾ ಹಾರಿಸಿದ್ದಾರೆ. ಇದ್ರೊಂದಿಗೆ ಇಲ್ಲಿ ಬಿಜೆಪಿಗೆ ಭಾರೀ ಮುಖಭಂಗ ಆದಂತಾಗಿದೆ. ಅಂದಹಾಗೆ, ಚೌಡಳ್ಳಿ ಸೊಸೈಟಿಯಲ್ಲಿ ಕಾಂಗ್ರೆಸ್ ಬೆಂಬಲಿತ ಧರ್ಮಣ್ಣ ಬಸಪ್ಪ ಅರೆಗೊಪ್ಪ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ, ಬಿಜೆಪಿಯ ರಾಜವ್ವ ದೇವಿಂದ್ರಪ್ಪ ಹಾನಗಲ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 13 ಸದಸ್ಯ ಬಲದ ಚೌಡಳ್ಳಿ ಸೊಸೈಟಿಯಲ್ಲಿ ಕೇವಲ 7 ಸದಸ್ಯರ ಅಧ್ಯಕ್ಷರ...
ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ವ್ಯಕ್ತಿಯ ಭೀಕರ ಹತ್ಯೆ..! ಕಳ್ಳತನಕ್ಕೆ ಬಂದವನು ಮಾಜಿ ಸೈನಿಕನಿಂದ ಹೆಣವಾದ್ನಾ..?
ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ಭೀಕರ ಹತ್ಯೆಯಾಗಿದೆ. ಟಿಬೇಟಿಯನ್ ಮಾಜಿ ಸೈನಿಕನೊಬ್ಬ 36 ವರ್ಷದ ಯುವಕನನ್ನು ಹತ್ಯೆ ಮಾಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ನಟ್ಟ ನಡುರಾತ್ರಿಯಲ್ಲಿ ನಡೆದಿರೋ ಘಟನೆಯಲ್ಲಿ ಆರೋಪಿಯೂ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಟಿಬೇಟಿಯನ್ ಕ್ಯಾಂಪ್ ನಂಬರ್ 4 ರ Jamyang Dakpa @ Lobsang S/o Tenzin Yeshi(35) ಎಂಬುವವನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಇನ್ನು ಅದೇ ಕ್ಯಾಂಪಿನ ವಾಸಿ Gonpo Choedak S/o Thinley (50) ಎಂಬುವನೇ...
ಹುನಗುಂದ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ 1 ಲಕ್ಷ ರೂ. ಚೆಕ್ ಹಸ್ತಾಂತರ..!
ಮುಂಡಗೋಡ ತಾಲೂಕಿನ ಹುನಗುಂದ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಅನುದಾನ 1 ಲಕ್ಷ ರೂ. ಮೊತ್ತದ ಡಿ ಡಿ ವಿತರಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರು ಹಾಗೂ ಯೋಜನಾಧಿಕಾರಿ ಗಳು DD ಯನ್ನು ಬಸವೇಶ್ವರ ಟ್ರಸ್ಟ ಕಮಿಟಿ ಅಧ್ಯಕ್ಷರಿಗೆ, ಸರ್ವ ಸದ್ಯಸರಿಗೆ ಹಸ್ತಾಂತರಿಸಿದ್ರು.. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದ್ಯಸ್ಯರು, ಹಾಗೂ ಸಮಿತಿಯ ಸದಸ್ಯರು, ಗಣ್ಯರು ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.