ಮುಂಡಗೋಡ ಪಟ್ಟಣದ ಹೊಸ ಓಣಿಯಲ್ಲಿ ಬೆಂಕಿ ಅವಘಡವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಮುಂಜಾಗ್ರತೆಯಿಂದ ಆಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ. ಹೊಸ ಓಣಿಯ ರಾಜು ಹಿರೇಮಠ ಎಂಬುವವರಿಗೆ ಸೇರಿದ ಮನೆಯಲ್ಲಿ, ವೀಣಾ ಬಾಳಂಬೀಡ ಎನ್ಹುವವರು ಬಾಡಿಗೆ ಇದ್ದರು. ಇಂದು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋದ ನಂತರ ಕೆಲವೇ ಹೊತ್ತಲ್ಲಿ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ...
Top Stories
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
Author: Public First Newz (Public First Newz)
ಸವಣೂರು ಜಿಪಂ AEE ಲೋಕಾಯುಕ್ತ ಬಲೆಗೆ, 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ..!
ಸವಣೂರು: ತಾಲೂಕಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಉಪವಿಭಾಗದ ಎಇಇ ನಿಂಬಣ್ಣ ಹೊಸಮನಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿಯ ಹಣ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟು ಅಧಿಕಾರಿ ತಗಲಾಕ್ಕೊಂಡಿದ್ದಾರೆ. ಲಚ್ಚಪ್ಪ ದುರ್ಗಪ್ಪ ಕನವಳ್ಳಿ ಎಂಬುವವರಿಂದ ಅವರಿಂದ ರೂ 40, ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟು, ರೂ 30 ಸಾವಿರ ಹಣವನ್ನು ಸ್ವೀಕರಿಸುವಾಗ, ಹಾವೇರಿ ಜಿಲ್ಲೆಯ ಲೋಕಾಯುಕ್ತ ಅಧಿಕಾರಿ ಹಾಗೂ ಸಿಬ್ಬಂದಿಗಳು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.. ಅಂದಹಾಗೆ, ಲಚ್ಚಪ್ಪ ದುರ್ಗಪ್ಪ ಕನವಳ್ಳಿ RDPR ಸವಣೂರು ಉಪವಿಭಾಗ ವ್ಯಾಪ್ತಿಯಲ್ಲಿ 2 ಕಾಮಗಾರಿಗಳನ್ನು...
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಅದೇನಾಗಿದೆಯೊ ಒಂದೂ ಅರ್ಥ ಆಗ್ತಿಲ್ಲ. ಇಡೀ ಪಟ್ಟಣದ ಜನ ಒಂದರ್ಥದಲ್ಲಿ ಇಲ್ಲಿನ ಬ್ರಷ್ಟಾಚಾರ ಕಂಡು ಎಲೆ ಎಡಿಕೆ ಸೇವೆ ಮಾಡೋದಷ್ಟೇ ಬಾಕಿ ಉಳಿದಿದೆ. ಯಾಕಂದ್ರೆ, ಈ ಕಚೇರಿಯಲ್ಲಿನ ಕೆಲವು ನುಂಗಣ್ಣರುಗಳ ಕರಾಮತ್ತು ಹಲವರ ಬದುಕಿನ ಜೊತೆ ಚೆಲ್ಲಾಟಕ್ಕಿಳಿದಂತಾಗಿದೆ. ಬ್ರಷ್ಟರ ಬಂಡವಾಳವಾಯ್ತಾ..? ಫಾರ್ಮ್ ನಂ.3 ಅನ್ನೋ “ಬಂಡವಾಳ” ಇಟ್ಕೊಂಡು ಅಕ್ಷರಶಃ ವ್ಯವಹಾರಕ್ಕಿಳಿದಿರೋ ಪಟ್ಟಣ ಪಂಚಾಯತಿಯ ಕೆಲವು ನುಂಗಣ್ಣರುಗಳಿಗೆ ಇದೊಂದು ರೊಕ್ಕ ಗಳಿಸುವ ಅಡ್ಡ ದಂಧೆಯಾಯ್ತಾ ಅನ್ನೋ ಅನುಮಾನ ಶುರುವಾಗಿದೆ. ಈ...
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಒತ್ತಾಯ, ಶಿಗ್ಗಾವಿ ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕರಿಸಿ ಆಕ್ರೋಶ..!
ಶಿಗ್ಗಾವಿ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಇಂದು ಶಿಗ್ಗಾವಿ ತಹಶೀಲ್ದಾರ ಕಛೇರಿಯಲ್ಲಿ ಶಿಗ್ಗಾವಿ ವಕೀಲರ ಸಂಘದಿಂದ ಒಂದು ದಿನ ಕೋರ್ಟ್ ಕಲಾಪದಿಂದ ದೂರ ಉಳಿದು ತಹಶೀಲ್ದಾರರಿಗೆ ಮನವಿ ನೀಡಿ ಸರಕಾರಕ್ಕೆ ಒತ್ತಾಯಿಸಿದರು. ಕೋರ್ಟ್ ನಿಂದ ಘೋಷಣೆ ಕೂಗುತ್ತ ಆಗಮಿಸಿದ ವಕೀಲರು ತಹಶಿಲ್ದಾರ ಸಂತೋಷ ಹಿರೇಮಠ ಅವರಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಜಿ.ಎಸ್. ಅಂಕಲಕೋಟಿ, ಕೃಷ್ಣ ಎಸ್. ಜೋಷಿ, ಕೆ. ಎನ್. ಹುತ್ತನಗೌಡ್ರ, ಕೆ.ಎಸ್. ಪಾಟೀಲ, ಎಂ. ಎಚ್. ಬೆಂಡಿಗೇರಿ, ವಿ. ಕೆ. ಕೊಣಪ್ಪನವರ, ಬಿ....
ರಾಜ್ಯದಲ್ಲಿರೋದು 40% ಪರ್ಸೆಂಟ್ ಸರ್ಕಾರ, ಬಿಜೆಪಿ ಜಾತಿಗಳ ನಡುವೆ ಗಲಾಟೆ ನಡೆಸುತ್ತಿದೆ- ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಆರೋಪ
ಮುಂಡಗೋಡ: ರಾಜ್ಯದಲ್ಲಿ ಸದ್ಯ 40% ಪರ್ಸೆಂಟ್ ಸರ್ಕಾರವಿದೆ. ಬಿಜೆಪಿ ಆಡಳಿತಕ್ಕೆ ಬಂದ ನಂತ್ರ ಜಾತಿ ಜಾತಿಗಳ ನಡುವೆ ಗಲಾಟೆ, ವೈರತ್ವ ಬೆಳೆಸಲಾಗ್ತಿದೆ ಹೀಗಾಗಿ, ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನೂರಕ್ಕೆ ನೂರರಷ್ಟು ಸತ್ಯ ಅಂತಾ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆರ್ ವಿ.ದೇಶಪಾಂಡೆ ಭವಿಷ್ಯ ನುಡಿದ್ರು. ಅವ್ರು, ಪಟ್ಟಣದ ಎಲ್ ವಿ ಕೆ ಕೇಂದ್ರದ ಸಭಾಭವನದಲ್ಲಿ ರವಿವಾರ ಸಂಜೆ ”ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾ ನೂತನ ಅಧ್ಯಕ್ಷ ಸಾಯಿನಾಥ ಗಾಂವಕರ್ ರವರಿಗೆ...
ಗರಗದ ಮಡಿವಾಳೇಶ್ವರ ಮಠದ ಪೀಠಾಧಿಪತಿ ಲಿಂಗೈಕ್ಯ..!
ಧಾರವಾಡ: ಗರಗದ ಶ್ರೀ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಮಹಾಸ್ವಾಮೀಜಿ (89) ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ. ಧಾರವಾಡ ತಾಲೂಕಿನ ಗರಗದ ಪ್ರಸಿದ್ಧ ಮಠವಾಗಿರೋ ಮಡಿವಾಳೇಶ್ವರ ಮಠದಲ್ಲಿ ಕಳೆದ 55 ವರ್ಷಗಳಿಂದ ಶ್ರೀಗಳು ಮಠದಲ್ಲಿದ್ದರು. ಅನಾರೋಗ್ಯದ ಹಿನ್ನೆಲೆ ಇಂದು ನಿಧನರಾಗಿದ್ದಾರೆ. ಇನ್ನು, ಕಳೆದ ವಾರವಷ್ಟೇ ಗರಗದ ಮಡಿವಾಳೇಶ್ವರರ ಜಾತ್ರೆ ಅದ್ದೂರಿಯಾಗಿ ನಡೆದಿತ್ತು. ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.
“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಕ್ಷೇತ್ರ ಮೈಲಾರ ಕಾರ್ಣೀಕ..!
ಮೈಲಾರ: “ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್” ಇದು ಪ್ರಸಕ್ತ ವರ್ಷದ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ, ವೃತಾದಾರಿ ಗೊರವಯ್ಯ ನುಡಿದ ಕಾರ್ಣಿಕ ನುಡಿ. ಗೊರವಯ್ಯ ರಾಮಪ್ಪ ಎಂಬುವವರು 14 ಅಡಿ ಎತ್ತರದ ಬಿಲ್ಲನ್ನೇರಿ ಪ್ರಸಕ್ತ ವರ್ಷದ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಎಂಬ ಕಾರ್ಣಿಕ ವಿಶ್ಲೇಷಣೆ ಮಾಡಲಾಗಿದೆ. ಡೆಂಕಣಮರಡಿಯಲ್ಲಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ವಿಶ್ಲೇಷಣೆ...
ಎಣ್ಣೆ ಏಟಲ್ಲಿ ಮಲಗಿದ್ದವನ ಜೇಬಿಗೆ ಕನ್ನ ಹಾಕಿದ ಅಜ್ಜಿ, ಹಣ ಎಗರಿಸಿ ಪರಾರಿ..!
ಯಲ್ಲಾಪುರ: ಎಣ್ಣೆ ಹೊಡೆದು ಟೈಟ್ ಆಗಿ ಮಲಗಿದ್ದವನ ಜೇಬಿನಿಂದ ವೃದ್ದೆಯೋರ್ವಳು ಹಣ ಎಗರಿಸಿದ್ದಾಳೆ. ಹಾಡಹಗಲೇ ಯಲ್ಲಾಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಸ್ಥಳೀಯರ ಮೊಬೈಲ್ ಕೆಮೇರಾದಲ್ಲಿ ಸೆರೆಯಾಗಿದೆ. ಯಲ್ಲಾಪುರ ಬಸ್ ನಿಲ್ದಾಣದ ನಂದಿನ ಹಾಲಿನ ಕೌಂಟರ್ ಬಳಿ ಓರ್ವ ವ್ಯಕ್ತಿ, ಫುಲ್ ಟೈಟ್ ಆಗಿ ನಶೆಯಲ್ಲೇ ಮಲಗಿರ್ತಾನೆ. ಈ ವೇಳೆ ಅಲ್ಲಿಗೆ ಬಂದ ವೃದ್ದೆಯೋರ್ವಳು, ಏಕಾಏಕಿ ನಶೆಯಲ್ಲಿ ಮಲಗಿದ್ದವನ ಜೇವಿಗೆ ಕೈ ಹಾಕಿದ್ದಾಳೆ. ಕೈಗೆ ಸಿಕ್ಕಷ್ಟು ಹಣ ಎಗರಿಸಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾಳೆ. ಇದನ್ನೇಲ್ಲ ಅಲ್ಲೇ...
ಹಾನಗಲ್ ಬಳಿಯ ಜಿಗಳಿಕೊಪ್ಪದಲ್ಲಿ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು..!
ಬೆಳ್ಳಂಬೆಳಿಗ್ಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಮಾಡಿ, ಚಾಪೆ, ಹಾಗೂ ರಗ್ಗಿನಲ್ಲಿ ಸುತ್ತಿ ಗೋವಿನಜೋಳದ ಜಮೀನಿನಲ್ಲಿ ಬಿಸಾಕಿ ಹೋಗಿದ್ದಾರೆ ದುಷ್ಕರ್ಮಿಗಳು. ಮೃತ ವ್ಯಕ್ತಿ ಸುಮಾರು 35 ವರ್ಷ ಪ್ರಾಯದವನಾಗಿದ್ದು, ಯಾರು, ಎಲ್ಲಿಯವನು ಅನ್ನೊ ಮಾಹಿತಿ ಇನ್ನೂ ಸಿಕ್ಕಿಲ್ಲ. ಗುಪ್ತಾಂಗಕ್ಕೆ ಹೊಡೆದು ಕೊಲೆ..! ಇನ್ನು ಅದೇಲ್ಲೊ ಕೊಲೆ ಮಾಡಿ, ಶವವನ್ನು ಚಾಪೆಯಲ್ಲಿ ಸುತ್ತಿ, ಜಿಗಳಿಕೊಪ್ಪ ಗ್ರಾಮದ ಹೊರವಲಯದಲ್ಲಿ ಬೀಸಾಕಿ ಹೋಗಿರೋ ಶವದ ಮುಖ, ತಲೆ ಹಾಗೂ ಗುಪ್ತಾಂಗಕ್ಕೆ ಏಟುಗಳು ಬಿದ್ದು...
ರೈಲಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವ್ಯಕ್ತಿ ಬಂಧನ, ಕಾರವಾರ ರೈಲ್ವೆ ಪೊಲೀಸರ ಭರ್ಜರಿ ಕಾರ್ಯಾಚರಣೆ..!
ಕಾರವಾರ: ಕೇರಳಕ್ಕೆ ಅಕ್ರಮವಾಗಿ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಕಾರವಾರ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮಂಗಳ ಎಕ್ಸ್ ಪ್ರೆಸ್ ರೈಲಿನಲ್ಲಿ ದಾಖಲೆ ರಹಿತ ಹಣ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಮಹಾರಾಷ್ಟ್ರ ಮೂಲದ ವಿಕಾಸ್ ರಮೇಶ್ ದೋಕಲೆ ಬಂಧಿತ ವ್ಯಕ್ತಿಯಾಗಿದ್ದು, ಬಂಧಿತನಿಂದ ದಾಖಲೆ ರಹಿತ ರೂ.20,09,720 ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರ ದಿಂದ ಕೇರಳಕ್ಕೆ ಹಣ ಕೊಂಡೊಯ್ಯುತಿದ್ದನು ಎನ್ನಲಾಗಿದ್ದು, ರೈಲ್ವೆ ಪೊಲೀಸರಿಂದ ಕಾರವಾರ ನಗರ ಠಾಣೆ ಪೊಲೀಸರಿಗೆ ಪ್ರಕರಣ ಹಸ್ತಾಂತರವಾಗಿದೆ.