Home ಅಪಘಾತ

Category: ಅಪಘಾತ

Post
ಪಾಳಾ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ, ಮಗು ಸೇರಿ ದಂಪತಿಗೆ ಗಂಭೀರ ಗಾಯ..!

ಪಾಳಾ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ, ಮಗು ಸೇರಿ ದಂಪತಿಗೆ ಗಂಭೀರ ಗಾಯ..!

ಪಾಳಾ ಕ್ರಾಸ್ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಮಾವಿನ ಮರ ಬಿದ್ದ ಪರಿಣಾಮ ಒಂದು ಮಗು ಸೇರಿ ಮೂವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಪಾಳಾದಿಂದ‌ ಮುಂಡಗೋಡ ಕಡೆಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ರಸ್ತೆ ಬದಿಯ ಹಳೆಯ ಮರ ಬಿದ್ದು ಘಟನೆ ಸಂಭವಿಸಿದೆ. ಮುಂಡಗೋಡ ತಾಲೂಕಿನ ಚಿಟಗೇರಿಯ ಪರಶುರಾಮ್ ಸಿದ್ದಪ್ಪ ನಾಯ್ಕರ್, ಮಧು ಪರಶುರಾಮ್ ನಾಯ್ಕರ್ ಹಾಗೂ ಒಂದೂವರೆ ವರ್ಷದ ಮಗು ಧನವೀರ್ ಪರಶುರಾಮ್ ನಾಯ್ಕರ್ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಾಗೆ...

Post
ಪಾಳಾ ಬಳಿ ಬೈಕ್ ಸವಾರನ ಮೇಲೆ ಉರುಳಿ ಬಿದ್ದ ಮರ, ಸವಾರನಿಗೆ ಗಂಭೀರ ಗಾಯ..!

ಪಾಳಾ ಬಳಿ ಬೈಕ್ ಸವಾರನ ಮೇಲೆ ಉರುಳಿ ಬಿದ್ದ ಮರ, ಸವಾರನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಬಳಿ ರಸ್ತೆ ಮೇಲೆ ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮರ ಉರುಳಿಬಿದ್ದು ಗಂಭೀರ ಗಾಯವಾದ ಘಟನೆ ನಡೆದಿದೆ. ಪಾಳಾದಿಂದ‌ ಮುಂಡಗೋಡ ಕಡೆಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ರಸ್ತೆ ಬದಿಯ ಹಳೆಯ ಮರ ಬಿದ್ದು ಘಟನೆ ಸಂಭವಿಸಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಗಾಯಾಳುವನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮುಂಡಗೋಡ ಪಿಎಸ್ ಐ ಪರಶುರಾಮ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Post
ಕಾರ್ ಪಲ್ಟಿ ನಾಲ್ವರು ಸ್ಥಳದಲ್ಲೇ ಸಾವು, 6 ಜನರಿಗೆ ಗಾಯ..!

ಕಾರ್ ಪಲ್ಟಿ ನಾಲ್ವರು ಸ್ಥಳದಲ್ಲೇ ಸಾವು, 6 ಜನರಿಗೆ ಗಾಯ..!

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವಾಗಿದೆ, ಕಾರು ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದು ಬಿದ್ದ ಪರಿಣಾಮ, 4 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 6 ಜನರಿಗೆ ಗಾಯವಾಗಿದೆ. ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ಘಟನೆ ನಡೆದಿದ್ದು, ಎನ್ ಎಚ್ 4 ಪಿಬಿ ರಸ್ತೆಯಿಂದ ಕೆಳಗೆ ಸರ್ವಿಸ್ ರಸ್ತೆಗೆ ಕಾರ್ ಬಿದ್ದಿದೆ‌. ಘಟನೆಯಲ್ಲಿ, ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ...

Post
ಅಗಡಿ ಪೆಟ್ರೊಲ್ ಬಂಕ್ ಬಳಿ ಬೈಕ್ ಅಪಘಾತ, ಇಬ್ಬರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಅಗಡಿ ಪೆಟ್ರೊಲ್ ಬಂಕ್ ಬಳಿ ಬೈಕ್ ಅಪಘಾತ, ಇಬ್ಬರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಬೈಕ್ ಅಪಘಾತವಾಗಿದೆ. ಅಗಡಿ ಸಮೀಪದ ಪೆಟ್ರೊಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಅನ್ನೊ ಮಾಹಿತಿ ಇದೆ. ಬಸಾಪುರ ಗ್ರಾಮದ ತಿಪ್ಪಯ್ಯ ಹಾಗೂ ಹುಲಿಹೊಂಡ ಗ್ರಾಮದ ಕುಮಾರ್ ಎಂಬುವವರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರ ಅಂತಾ ಹೇಳಲಾಗ್ತಿದೆ. ಸದ್ಯ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಮುಂಡಗೋಡ ಸಮೀಪ ಭೀಕರ ಅಪಘಾತ, ಗಾಯಗೊಂಡಿದ್ದ ಇ‌ಂದೂರಿನ ಮತ್ತೋರ್ವ ವ್ಯಕ್ತಿ ಸಾವು..! ಮೃತರ ಸಂಖ್ಯೆ ಎರಡಕ್ಕೆ ಏರಿಕೆ..!

ಮುಂಡಗೋಡ ಸಮೀಪ ಭೀಕರ ಅಪಘಾತ, ಗಾಯಗೊಂಡಿದ್ದ ಇ‌ಂದೂರಿನ ಮತ್ತೋರ್ವ ವ್ಯಕ್ತಿ ಸಾವು..! ಮೃತರ ಸಂಖ್ಯೆ ಎರಡಕ್ಕೆ ಏರಿಕೆ..!

ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇಂದೂರಿನ ಕುಮಾರ್ ಇಳಿಗೇರ್(44) ಸಾವನ್ನಪ್ಪಿದ ಮತ್ತೋರ್ವ ಬೈಕ್ ಸವಾರನಾಗಿದ್ದಾ‌ನೆ. ಇನ್ನು ಘಟನೆಯಲ್ಲಿ ಮುಂಡಗೋಡಿನ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ...

Post
ಹುನಗುಂದ ಗ್ರಾಪಂ ಮಾಜಿ ಸದಸ್ಯ ಮೌಲಾಸಾಬ್ ಗೋರಿ ಬೈಕ್ ಅಪಘಾತದಲ್ಲಿ ಸಾವು..! ಹಲವರ ಕಂಬನಿ

ಹುನಗುಂದ ಗ್ರಾಪಂ ಮಾಜಿ ಸದಸ್ಯ ಮೌಲಾಸಾಬ್ ಗೋರಿ ಬೈಕ್ ಅಪಘಾತದಲ್ಲಿ ಸಾವು..! ಹಲವರ ಕಂಬನಿ

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೌಲಾಸಾಬ್ ಮಹ್ಮದಸಾಬ್ ಗೋರಿ (42) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಸಮೀಪ ಸಂಭವಿಸಿರೋ ಬೈಕ್ ಅಪಘಾತದಲ್ಲಿ ರವಿವಾರ ನಿಧನರಾಗಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಮೌಲಾಸಾಬ್ ತಮ್ಮ ಅವಧಿಯಲ್ಲಿ ಜನಮನ್ನಣೆ ಗಳಿಸಿಕೊಂಡಿದ್ರು. ಹೀಗಾಗಿ, ಮೌಲಾಸಾಬರ ನಿಧನಕ್ಕೆ ಗ್ರಾಮಸ್ಥರು, ವಿವಿಧ ಸಮಾಜದ ಮುಖಂಡರು ಕಂಬನಿ ಮಿಡಿದಿದ್ದಾರೆ.

Post
ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ, ಸಿಡಿಲು ಬಡಿದು 5 ಹಸುಗಳು ದಾರುಣ ಸಾವು..!

ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ, ಸಿಡಿಲು ಬಡಿದು 5 ಹಸುಗಳು ದಾರುಣ ಸಾವು..!

ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಮೊದಲ ದಿನದ ಮಳೆಯಲ್ಲೇ ಐದು ಹಸುಗಳು ದಾರುಣ ಸಾವು ಕಂಡಿವೆ. ಸಿಡಿಲು ಬಡಿದು ಗದ್ದೆಯಲ್ಲಿದ್ದ 5 ಹಸುಗಳು ಮೃತಪಟ್ಟಿವೆ. ಪಾಳಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲಕೊಪ್ಪ ಗ್ರಾಮದ ಪಕ್ಕೀರ ಗೌಡ ಕಡಬಗೇರಿ ಎಂಬುವವರ ಐದು ಹಸುಗಳು ಗದ್ದೆಯಲ್ಲಿ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿವೆ. ಇಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಲ್ಲಿ ಸಿಡಿಲ ಅರ್ಭಟದಿಂದ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಕೊಪ್ಪ ಕೆರೆಯ ಬಳಿ ಬೆಳ್ಳಂ ಬೆಳಿಗ್ಗೆ ಬೈಕ್ ಅಫಘಾತ, ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು..!

ಕೊಪ್ಪ ಕೆರೆಯ ಬಳಿ ಬೆಳ್ಳಂ ಬೆಳಿಗ್ಗೆ ಬೈಕ್ ಅಫಘಾತ, ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು..!

ಮುಂಡಗೋಡ ತಾಲೂಕಿನ ಕೊಪ್ಪದ ಕೆರೆ ಬಳಿ ಬೆಳ್ಳಂ ಬೆಳಿಗ್ಗೆ ಬೈಕ್ ಅಪಘಾತವಾಗಿದೆ. ಪರಿಣಾಮ ಮೂವರಿಗೆ ಗಂಭೀರ ಗಾಯವಾಗಿದೆ. ರಸ್ತೆ ಬದಿಯ ಕಲ್ಲಿಗೆ ಬೈಕ್ ಡಿಕ್ಕಿ ಹೊಡೆದು ಅಪಘಾತವಾಗಿದೆ. ಕೊಪ್ಪ ಇಂದಿರಾನಗರದ ಲಕ್ಷ್ಮಣ ರಾಮಣ್ಣ ಬೋವಿವಡ್ಡರ (36), ಬಸವರಾಜ್ ಹನ್ಮಂತಪ್ಪ ಕುಂಕೂರ್ (36), ಮುಂಡಗೋಡಿನ ಸಾದಿಕ್ ಜಲಾಲ್ ಸಾಬ್ ಹುಬ್ಬಳ್ಳಿ(36) ಗಂಭೀರ ಗಾಯಗೊಂಡಿದ್ದಾರೆ. ಅಪಘಾತವಾದ ತಕ್ಷಣವೇ ಗ್ರಾಮಸ್ಥರು ಗಾಯಗೊಂಡವರನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಮುಂಡಗೋಡಿನಲ್ಲಿ ನೆಲಕ್ಕುರುಳಿದ ಬೃಹತ್ ಆಲದ ಮರ, ಅಪಾರ ಹಾನಿ..!

ಮುಂಡಗೋಡಿನಲ್ಲಿ ನೆಲಕ್ಕುರುಳಿದ ಬೃಹತ್ ಆಲದ ಮರ, ಅಪಾರ ಹಾನಿ..!

 ಮುಂಡಗೋಡ ಪಟ್ಟಣದ ಬಂಕಾಪುರ ರಸ್ತೆಯಲ್ಲಿನ ಅಯ್ಯಪ್ಪಸ್ವಾಮಿ ದೇವಸ್ಥಾನದ ಹಿಂದೆ ಬೃಹತ್ ಆಲದ ಮರ ಏಕಾಏಕಿ ನೆಲಕ್ಕುರುಳಿದೆ. ಪರಿಣಾಮ ಮರದ ಕೆಳಗಡೆ ನಿರ್ಮಿಸಿಕೊಂಡಿದ್ದ ಗ್ಯಾರೇಜ್ ಹಾಗೂ ವೆಲ್ಡಿಂಗ್ ವರ್ಕ್ ಶಾಪ್ ಗೆ ಹಾನಿಯಾಗಿದೆ‌. ನಾಲ್ಕೈದು ಬೈಕ್ ಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದುಗಡೆ ಇರೋ ಪುರಾತನ ಆಲದ ಮರ ಮೂರು ಭಾಗಗಳಾಗಿ ನೆಲಕ್ಕುರಿಳಿದ್ದು. ಪ್ರಮೋದ್ ಎಂಬುವವರಿಗೆ ಸೇರಿದ ಗ್ಯಾರೇಜು ಸಂಪೂರ್ಣ ಜಖಂ ಗೊಂಡಿದೆ. ಇದ್ರಿಂದ ಗ್ಯಾರೇಜಿನಲ್ಲಿ ರಿಪೇರಿಗೆಂದು ಬಂದಿದ್ದ ಬೈಕ್...

Post
ಮುಂಡಗೋಡಿನಿಂದ ಹಜ್ ಯಾತ್ರೆಗೆ ತೆರಳಿದ್ದ ಮೂವರು ಕಾರ್ ಅಪಘಾತದಲ್ಲಿ ಸಾವು..! ಮತ್ತೆ ಮೂವರಿಗೆ ಗಾಯ..!

ಮುಂಡಗೋಡಿನಿಂದ ಹಜ್ ಯಾತ್ರೆಗೆ ತೆರಳಿದ್ದ ಮೂವರು ಕಾರ್ ಅಪಘಾತದಲ್ಲಿ ಸಾವು..! ಮತ್ತೆ ಮೂವರಿಗೆ ಗಾಯ..!

 ಮುಂಡಗೋಡಿನಿಂದ ಮೆಕ್ಕಾ( ಹಜ್ ಯಾತ್ರೆಗೆ) ತೆರಳಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡಿನ ರೋಣ್ಸ್ ಮೆಡಿಕಲ್ ಮಾಲೀಕ ಫಯಾಜ್ ಅಹ್ಮದ್ ರೋಣ್, ಅವ್ರ ಧರ್ಮಪತ್ನಿ ಆಫೀನಾ ಬಾನು ಹಾಗೂ ಅಣ್ಣನ ಮಗ ಆಯಾನ್ ರೋಣ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮೆಕ್ಕಾದ ದರ್ಶನ ಮುಗಿಸಿಕೊಂಡು ಕಾರಿನಲ್ಲಿ ಮದಿನಾಕ್ಕೆ ಹೊರಟಿದ್ದ ವೇಳೆ, ಕಾರಿನ ಟೈಯರ್ ಸ್ಪೋಟಗೊಂಡ ಪರಿಣಾಮ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನುಳಿದಂತೆ ಹೆಚ್ಚಿನ...

error: Content is protected !!