Home ಅನ್ನದಾತನ ಅಂಕಣ

Category: ಅನ್ನದಾತನ ಅಂಕಣ

Post
ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು, ಗದ್ದೆಗಳಲ್ಲಿ ಗಜರಾಜನ ಹೆಜ್ಜೆ ಗುರುತು ಪತ್ತೆ..! ಆತಂಕದಲ್ಲಿ ರೈತರು..!!

ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು, ಗದ್ದೆಗಳಲ್ಲಿ ಗಜರಾಜನ ಹೆಜ್ಜೆ ಗುರುತು ಪತ್ತೆ..! ಆತಂಕದಲ್ಲಿ ರೈತರು..!!

 ಮುಂಡಗೋಡ: ತಾಲೂಕಿನ ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು ಠಿಕಾಣಿ ಹೂಡಿದೆಯಾ..? ಇಂತಹದ್ದೊಂದು ಅನುಮಾನ ಈ ಭಾಗದ ರೈತರಿಗೆ ನಿದ್ದೆಗೆಡಿಸಿದೆ. ನಿನ್ನೆ ರಾತ್ರಿ ಸನವಳ್ಳಿ ಭಾಗದ ಕಾಡಂಚಿನ ಗದ್ದೆಗಳಲ್ಲಿ ಕಾಡಾನೆಗಳು ಓಡಾಡಿ ಹೋಗಿರೋ ಕುರುಹುಗಳು ಸಿಕ್ಕಿವೆ. ಸನವಳ್ಳಿಯ ಫಕ್ಕೀರಪ್ಪ ಬೋಕಿಯವರ್, ಪಕ್ಕಿರೇಶ್ ಕೆರಿಹೊಲದವರ, ರಮೇಶ್ ಅರಶೀಣಗೇರಿಯವರ ನಾಟಿ‌ ಮಾಡಿರೋ ಬತ್ತದ ಗದ್ದೆಗಳಲ್ಲಿ, ಗೋವಿನಜೋಳದ ಗದ್ದೆಗಳಲ್ಲಿ ಆನೆಗಳು ನಡೆದಾಡಿರೋ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಇನ್ನು ಅಡಿಕೆ ತೋಟದಲ್ಲಿ ನುಗ್ಗಿರೋ ಆನೆಗಳು ಕೆಲವು ಅಡಿಕೆ ಗಿಡಗಳಿಗೆ ಹಾನಿ ಮಾಡಿವೆ. ಹೀಗಾಗಿ...

Post
ಮತ್ತೆ ಮಳೆಯ ಆತಂಕ, ಫಸಲು ಕಟಾವಿಗೆ ಯಂತ್ರಗಳ ಮೊರೆ ಹೋದ ರೈತ..!

ಮತ್ತೆ ಮಳೆಯ ಆತಂಕ, ಫಸಲು ಕಟಾವಿಗೆ ಯಂತ್ರಗಳ ಮೊರೆ ಹೋದ ರೈತ..!

ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಮಳೆಯ ಆತಂಕ ಶುರುವಾಗಿದೆ ಹೀಗಾಗಿ, ಅನ್ನದಾತರು ಫಸಲುಗಳ ರಕ್ಷಣೆಗೆ ಮತ್ತೆ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಮಳೆಯ ಆತಂಕದ ನಡುವೆ ಭತ್ತದ ಕೊಯ್ಲಿಗೆ ಮುಂದಾಗಿದ್ದಾನೆ ರೈತ.. ಇನ್ನು, ಈ ಸಾರಿ ಮಳೆಯಲ್ಲಿ ಸಿಲುಕಿ ಸಂಪೂರ್ಣ ಹಾಳಾದ ಸ್ಥಿತಿಯಲ್ಲಿರೋ ಭತ್ತದ ಫಸಲು ಕಟಾವು ಮಾಡಲು ರೈತ ಭತ್ತ ಕಟಾವು ಮಾಡುವ ಯಂತ್ರಗಳ‌ ಮೊರೆ ಹೋಗಿದ್ದಾನೆ.. ಹೀಗಾಗಿ ತಾಲೂಕಿನೆಲ್ಲೆಡೆ ಈಗ ಭತ್ತ ಕಟಾವು ಮಾಡೋ ಯಂತ್ರಗಳ ಸದ್ದೇ ಕೇಳುತ್ತಿದೆ. ಸಮಯವೂ ಉಳಿಯತ್ತೆ ಕೆಲಸವೂ ಕಡಿಮೆಯಾಗತ್ತೆ ಅನ್ನೋ ಕಾರಣಕ್ಕೆ...

Post
ಹೋರಿ ಹಬ್ಬದ ಹುಚ್ಚು, ಪ್ರಾಣಕ್ಕಿಂತ ಹೆಚ್ಚು..!

ಹೋರಿ ಹಬ್ಬದ ಹುಚ್ಚು, ಪ್ರಾಣಕ್ಕಿಂತ ಹೆಚ್ಚು..!

ಇದು ಅಕ್ಷರಶಃ ಉತ್ತರ ಕರ್ನಾಟಕ ಮಂದಿಯ ರಣರೋಚಕ ಜವಾರಿ ಕ್ರಿಡೆ.. ಈ ಕ್ರಿಡೆಯಲ್ಲಿ ಲಕ್ಷ ಲಕ್ಷ ಆಭಿಮಾನಿಗಳ ಕಲರವ ಕೇಳತ್ತೆ.. ರೋಮಾಂಚಕ ಕ್ಷಣಗಳಿಗೆ ಸಾಕ್ಷಿಯಾಗಿ ಹುಚ್ಚೆದ್ದು ಕುಣಿಯೋ ಲಕ್ಷಾಂತರ ಅಭಿಮಾನಿಗಳ ಕೇಕೆ ಚಪ್ಪಾಳೆ ಇರತ್ತೆ.. ಅಲ್ಲಿ ಯಾವ ಬಿಂಕ ಬಿಗುಮಾನಗಳೂ ಇರಲ್ಲ. ಅಲ್ಲಿರೋದು ಅಪ್ಪಟ ಅಭಿಮಾನ ಮಾತ್ರ.. ಅಂದಹಾಗೆ ಅದು ಯಾವ ಕ್ರೀಡೆ ಅಂತಿರಾ.. ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್.. ಹಬ್ಬದ ಹುಚ್ಚು..! ಹೌದು ಉತ್ತರ ಕರ್ನಾಟಕ ಭಾಗದಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹುಚ್ಚೇದ್ದು ಕುಣಿಸೋ ಕ್ರೀಡೆ ಅಂದ್ರೆ...

Post
KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ: ಬೆಳೆಸಾಲ ಪಡೆಯಲು ಹರಸಾಹಸ..!

KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ: ಬೆಳೆಸಾಲ ಪಡೆಯಲು ಹರಸಾಹಸ..!

ಮುಂಡಗೋಡ: ಪಟ್ಟಣದ KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ ಇನ್ನೂ ನಿಂತಿಲ್ಲ. ತಮ್ಮ ಬೆಳೆಸಾಲದ ಹಣಕ್ಕಾಗಿ ದಿನವಿಡೀ ಬಿಸಿಲು, ಮಳೆಯಲ್ಲೇ ಕಾಯಬೇಕಾದ ದುಸ್ತಿತಿ ತಪ್ಪಿಲ್ಲ.. ಬ್ಯಾಂಕ್ ಎದುರು ಅರ್ಧ ಕಿಲೋ ಮೀಟರ್ ವರೆಗೂ ಸರತಿ ಸಾಲಲ್ಲಿ ನಿಂತು ಬಸವಳಿಯುತ್ತಿರೋ ಅನ್ನದಾತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಯಾರೂ ತೋರುತ್ತಿಲ್ಲ. ಈ ಸುದ್ದಿಯ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. ಹೌದು, ಮುಂಡಗೋಡ ತಾಲೂಕಿನ ರೈತರಿಗೆ ಸಿಗಬೇಕಾದ ಬೆಳೆಸಾಲಕ್ಕೆ ಅನ್ನದಾತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ....

Post
ಬೀಜ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ-ಕೃಷಿ ಸಚಿವ ಬಿ.ಸಿ.ಪಾಟೀಲ್

ಬೀಜ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ-ಕೃಷಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ: : ಕಳಪೆ ಬಿತ್ತನೆ ಬೀಜ ದಾಸ್ತಾನು, ಮಾರಾಟ ಹಾಗೂ ಅನಧಿಕೃತವಾಗಿ ಬಿತ್ತನೆ ಬೀಜ ಗೊಬ್ಬರ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಕುರಿತಂತೆ ರಾಜ್ಯಾದ್ಯಂತ ವಿಶೇಷ ಅಭಿಯಾನ ಕೈಗೊಂಡು ಅಕ್ರಮಕ್ಕೆ ಕಡಿವಾಣ ಹಾಕಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಹೇಳಿದರು. ಹಾವೇರಿ ಪ್ರವಾಸಿ ಮಂದಿರದಲ್ಲಿ ಮುಂಗಾರು ಬಿತ್ತನೆ ಬೀಜ ಹಾಗೂ ಗೊಬ್ಬರದ ದಾಸ್ತಾನು ವ್ಯವಸ್ಥೆ ಕುರಿತಂತೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕಳಪೆ...

Post
ಮೃತಪಟ್ಟ ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಫರ್ಧಾ ಹೋರಿ..!

ಮೃತಪಟ್ಟ ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಫರ್ಧಾ ಹೋರಿ..!

ಮುಂಡಗೋಡ-ತಾಲೂಕಿನ ಹೆಮ್ಮೆಯ ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಪರ್ಧಾ ಹೋರಿ ಅನಾರೋಗ್ಯದ ಹಿನ್ನೆಲೆ ನಿನ್ನೆ ತಡರಾತ್ರಿ ಮೃತಪಟ್ಟಿದೆ. ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಪರ್ಧಾ ಹೋರಿ ಎಂದೇ ಖ್ಯಾತಿಯಾಗಿರುವ ಹೋರಿ, ತೀವ್ರ ಅನಾರೋಗ್ಯದಿಂದ ಬಳಲಿ ಮೃತಪಟ್ಟಿದೆ. ರಾಜ್ಯದ ನಾನಾ ಭಾಗಗಳಲ್ಲಿ ನಡೆದಿದ್ದ ಅನೇಕ ಸ್ಪರ್ಧೆಗಳಲ್ಲಿ ಪಾಲ್ಗೊಂಡಿತ್ತು. ಅದ್ರಲ್ಲೂ ಹಾನಗಲ್, ಬೆಟ್ಟದಕುರ್ಲಿ ಹಾಗೂ ಖಚವಿ ಹೀಗೆ ಅನೇಕ ಗ್ರಾಮಗಳಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ಯಲ್ಲಿ ಪಾಲ್ಗೊಂಡು ಭಾರೀ ಬಹುಮಾನಗಳನ್ನು ಬಾಚಿ ಕೊಂಡಿತ್ತು.....

Post
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು..!

ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು..!

ಬೆಂಗಳೂರು : ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಆಗಮನವಾಗುವ ಸಾಧ್ಯತೆಯಿದೆ. ಕೇರಳಕ್ಕೆ 31 ರಂದು ಪ್ರವೇಶಿಸಲಿರುವ ಮುಂಗಾರಿನಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 1 ರಂದು ನೈಋತ್ಯ ಮುಂಗಾರು ಕೇರಳ ರಾಜ್ಯ ಪ್ರವೇಶಿಸಲಿದ್ದು, ಕರ್ನಾಟಕಕ್ಕೆ ಜೂನ್ 5 ರಂದು ಪ್ರವೇಶಿಸುವ ನಿರೀಕ್ಷೆ ಇದೆ.ರಾಜ್ಯದಲ್ಲಿ ಮೇ. 29 ರವರೆಗೆ ಮಳೆ ಮುಂದುವರೆಯಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...

Post

ಶೇಂಗಾ ಬೆಳೆದ ತಾಲೂಕಿನ ರೈತನ ಬದುಕು ಮೂರಾಬಟ್ಟೆ; ಇದೇಲ್ಲ ತೌಕ್ತೆ ಚಂಡ ಮಾರುತದ ಎಫೆಕ್ಟ್ ಕಣ್ರಿ..!

ಮುಂಡಗೋಡ- ತಾಲೂಕಿನ ಅನ್ನದಾತ ಅಕ್ಷರಶಃ ಸಂಕಷ್ಟದಲ್ಲಿದ್ದಾನೆ. ಬೇಸಿಗೆ ಬೆಳೆಯಾಗಿ ಸಾವಿರಾರು ರೂ. ಖರ್ಚು ಮಾಡಿ ಶೇಂಗಾ ಬೆಳೆದಿದ್ದ ರೈತನ ಬದುಕು ಈಗ ಮೂರಾಬಟ್ಟೆಯಾಗಿದೆ. ತೌಕ್ತೆ ಚಂಡ ಮಾರುತದ ಎಫೆಕ್ಟ್ ನಿಂದಾಗಿ ಶೇಂಗಾ ಬೆಳೆದಿದ್ದ ರೈತನಿಗೆ ಈಗ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಯಸ್, ಬಂದಷ್ಟು ಬರಲಿ ಅಂತಾ ತನ್ನ ಗದ್ದೆಯಲ್ಲಿ ಬೆಳೆದು ಮಳೆಯ ನೀರಲ್ಲಿ ಕೊಳೆತು ಹೋಗಿರೋ ಶೇಂಗಾ ಬೆಳೆಯನ್ನು ಒಕ್ಕಲು ಮಾಡುತ್ತಿರೋ ರೈತನ ಮನಸಲ್ಲಿ ಅಕ್ಷರಶಃ ಆತಂಕವಿದೆ.. ಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆಯೇಲ್ಲ...

Post
ಕಾಡಾನೆ ದಾಳಿಯಿಂದ ಬೆಳೆನಾಶ; ಮನನೊಂದ ರೈತ ಆತ್ಮಹತ್ಯೆ

ಕಾಡಾನೆ ದಾಳಿಯಿಂದ ಬೆಳೆನಾಶ; ಮನನೊಂದ ರೈತ ಆತ್ಮಹತ್ಯೆ

ಮುಂಡಗೋಡ: ಕಾಡಾನೆಗಳು ಭತ್ತದ ಕಾಳು ಬಣವೆಯನ್ನು ತಿಂದು ತುಳಿದು ಹಾನಿ ಮಾಡಿದ್ದನ್ನೆ ಮನಸ್ಸಿಗೆ ಹಚ್ಚಿಕೊಂಡು ತಾಲೂಕಿನ ಬೆಡಸಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯ ತೊಗರಳ್ಳಿ ಗ್ರಾಮದ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.. ಪ್ರಭಾಕರ್ ವಾಮನ ಕೊರ್ಸಿ(51) ಆತ್ಮಹತ್ಯೆ ಮಾಡಿಕೊಂಡ ರೈತ.. ಈತ ತನ್ನ ವ್ಯವಸಾಯಕ್ಕೆಂದು ವಿವಿಧ ಬ್ಯಾಂಕ ಹಾಗೂ ಸಂಘ ಸಂಸ್ಥೆಗಳಲ್ಲಿ ಸುಮಾರು 4ಲಕ್ಷ 20 ಸಾವಿರ ರೂಪಾಯಿ ಸಾಲ ಮಾಡಿ ಹೊಲದಲ್ಲಿ ಭತ್ತದ ಬೆಳೆಯನ್ನು ಬೆಳೆದು ಕೊಯ್ಲು ಮಾಡಿ ಕಾಳು ತುಂಬಿದ...

Post

ಉತ್ತರ ಕನ್ನಡ; ಮಳೆ..ಮಳೆ..ಮಳೆ.. ಹಲವು ರಸ್ತೆ ಸಂಚಾರ ಬಂದ್

ಕಾರವಾರ- ಉತ್ತರ ಕನ್ನಡದಲ್ಲಿ ಗುರುವಾರವೂ ಮಳೆ ಮುಂದುವರೆದಿದೆ.. ಜಿಕ್ಕೆಯ ಹಲವು ಭಾಗಗಳಲ್ಲಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿಗಳು ತುಂಬಿ ಹರಿಯುತ್ತಿರೋ ಪರಿಣಾಮ ರಸ್ತೆಯಲ್ಲಿ ನೀರು ತುಂಬಿದೆ. ಹಲವೆಡೆ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಆಗಿದೆ.. ಇನ್ನು ಗಾಳಿಯ ಅಬ್ಬರಕ್ಕೆ ಮರಗಳು ಧರೆಗುರುಳಿದ್ದು, ಯಲ್ಲಾಪುರ-ಅಂಕೋಲಾ, ಶಿರಸಿ-ಕುಮಟಾ, ಸಿದ್ದಾಪುರ-ಕುಮಟಾ, ಸಿದ್ದಾಪುರ-ಸಾಗರ ರಾಜ್ಯ ಹೆದ್ದಾರಿಗಳು ತಾತ್ಕಾಲಿಕ ಸ್ಥಗಿತವಾಗಿವೆ..

error: Content is protected !!