Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಪಾಳಾ ಸಮೀಪದ ರಾಮಾಪುರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 50 ಸಾವಿರ ಮೌಲ್ಯದ್ದು..!ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಯಲ್ಲಾಪುರ ರಸ್ತೆಯ ಮಹಮ್ಮದಅನಿಸ ಎಜಾಜ್ ಅಹ್ಮದ್ ಬೇಗ್ (20) ಎಂಬುವವ.. ಈತ ತನ್ನ ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಖಚಿತ ಮಾಹಿತಿ ಆಧಾರದಲ್ಲಿ...

Post
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?

ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?

ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಷ್ಟರು ನೀಚ ಕೃತ್ಯ ಮಾಡಿದ್ದಾರೆ. ಮೀನು ಸಾಕಾಣಿಕೆ ಮಾಡಿದ್ದ ಕೆರೆಗೆ ವಿಷ ಬೆರೆಸಿ ಮೀನುಗಳ ಸಾವಿಗೆ ಕಾರಣರಾಗಿದ್ದಾರೆ. ನೂರಾರು ಮೀನುಗಳು ಹಂತಹಂತವಾಗಿ ಸಾವನ್ನಪ್ಪುತ್ತಿವೆ ಅನ್ನೊ ಮಾಹಿತಿ ಲಭ್ಯವಾಗಿದೆ. ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ ಸರ್ವೇ ನಂಬರ್ 49 ರಲ್ಲಿ ಘಟನೆ ನಡೆದಿದ್ದು, ಮೌಲಾಲಿ ಮಕಾಂದಾರ ಎನ್ನುವವರು ಕೆರೆಯಲ್ಲಿ ಮೀನು ಸಾಕಾಣಿಕೆ‌ ಮಾಡಲು ಟೆಂಡರ್ ಪಡೆದಿದ್ದರು. ಆದ್ರೆ, ಈಗಾಗಲೇ ಮೀನುಗಳು ಒಂದು ಹಂತಕ್ಕೆ ಬೆಳೆದಿದ್ದಾಗಲೇ ದುರುಳರು ಕೆರೆಗೆ ವಿಷ ಹಾಕಿರೋ ಅನುಮಾನ...

Post
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!

ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!

ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಮುಂಡಗೋಡ ತಾಲೂಕಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಾಳೆ ಮಂಗಳವಾರ ದಿ. 22 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಅಂತಾ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ ಮಾಹಿತಿ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ ಮುಂಡಗೋಡಿನ ತಾಲೂಕಾ‌ ಪಂಚಾಯತಿ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಅಂತಾ ಅವ್ರು ಮಾಹಿತಿ ನೀಡಿದ್ದಾರೆ.

Post
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!

ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!

ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಭೀಕರ ಹತ್ಯೆ ಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ‌. ಹೀಗಾಗಿ ಇಡೀ ಕಾರವಾರ ನಗರ ಬೆಚ್ಚಿ ಬಿದ್ದಿದೆ‌. ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಈ ಕೊಲೆಯಿಂದ ಕಾರವಾರಿಗರು ಬೆಚ್ಚಿ ಬಿದ್ದಿದ್ದಾರೆ. ಸ್ಕೂಟಿಯಲ್ಲಿ ಬಂದ...

Post
CET ಪರೀಕ್ಷಾರ್ಥಿಯ  ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!

CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!

ಮುಂಡಗೋಡ: ಸಿ.ಇ.ಟಿ ಪರೀಕ್ಷೆಯ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಬ್ರಾಹ್ಮಣ ಸಮುದಾಯದ ಒಬ್ಬ ವಿದ್ಯಾರ್ಥಿಯನ್ನು ಆತ ಧರಿಸಿದ ಜನಿವಾರವನ್ನು ಕತ್ತರಿಸಿ ಪರೀಕ್ಷೆಗೆ ಪ್ರವೇಶ ನೀಡಿರುವುದನ್ನು ಹಾಗೂ ಬೀದರನಲ್ಲಿ ವಿದ್ಯಾರ್ಥಿ ಜನಿವಾರ ಧರಿಸಿದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡದ ಘಟನೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಖಂಡಿಸಿರೊ ಅವ್ರು, ಈ ದೇಶವು ವಿವಿಧ ಧರ್ಮ, ಸಂಪ್ರದಾಯ, ಧಾರ್ಮಿಕ ಚಿಹ್ನೆ, ಆಚರಣೆಗಳ ಗೌರವವನ್ನು ಮೂಲಭೂತ ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಅವಮಾನವಾಗುವ...

Post
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!

ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ.ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ...

Post
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!

“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!

ಭೂ ದಾಖಲೆಗಳು ಕಂದಾಯ ಆಡಳಿತದ ಮುಖ್ಯ ಭಾಗವಾಗಿದ್ದು, ಅನೇಕ ದಶಕಗಳವರೆಗೆ ಇರುವ ಭೂ ದಾಖಲೆಗಳು ಒಂದು ನಿರ್ದಿಷ್ಟ ಭೂಮಿಯ ಮೇಲೆ ನಡೆದ ವ್ಯವಹಾರಗಳ ಇತಿಹಾಸದ ಪ್ರಮುಖ ಕೊಂಡಿಯಾಗಿದೆ. ದೀರ್ಘಾವಧಿಯ ವರೆಗೆ ಈ ದಾಖಲೆಗಳ ಸರಿಯಾದ ನಿರ್ವಹಣೆ ಮತ್ತು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದ್ದು, ಭೂ ಸುರಕ್ಷಾ ಯೋಜನೆಯ ಮೂಲಕ ಭೂದಾಖಲೆಗಳನ್ನು ಸಂರಕ್ಷಿಸಿ ಅದನ್ನು ತ್ವರಿತವಾಗಿ ಪಡೆಯಲು ಸಾಧ್ಯವಾಗಲಿದೆ. ಈ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಭೂಸುರಕ್ಷಾ ತಂತ್ರಾಂಶದಲ್ಲಿ ಇಂಡೆಕ್ಸಿಂಗ್ ಹಾಗೂ ಕ್ಯಾಟಲಾಗಿಂಗ್ ಮಾಡಿ ಅಪಲೋಡ್ ಮಾಡಲಾಗುವ ಕಾರ್ಯದಲ್ಲಿ ನಾನ್...

Post
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!

ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!

ಕಾರವಾರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಾದ್ಯಂತ ಏಪ್ರಿಲ್ 1 ರಿಂದ ಜೂನ್ 30 ರ ವರೆಗೆ ಸ್ತ್ರೀ ಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯಡಿ ಮಹಿಳೆಯರಿಗಾಗಿ ವಿಶೇಷ ಸವಲತ್ತು ಮತ್ತು ಅವಕಾಶಗಳನ್ನು ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಜಿಲ್ಲಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಹೇಳಿದರು. ಕಾರವಾರ ತಾಲೂಕಿನ ಆಮದಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೆ ನಂ. 329ರಲ್ಲಿ ಬಾಳೆಮಡ್ಡಿ...

Post
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ಕುಸ್ತಿ (ಬಾಲಕರು/ಬಾಲಕಿಯರು),ಅರ್ಚರಿ (ಬಾಲಕರು) ಫೆನ್ಸಿಂಗ್(ಬಾಲಕರು), ಬಾಕ್ಸಿಂಗ್ (ಬಾಲಕರು/ಬಾಲಕಿಯರು) ಕ್ರೀಡೆಗಳಿಗೆ ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪರಿಶಿಷ್ಟ ಪಂಗಡದ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಏ.14 ರಂದು ಯಲ್ಲಾಪುರ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಸಲಾಗಿದೆ. ಭಾಗವಹಿಸುವ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು 2025-26 ನೇ ಸಾಲಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಗೆ ಅರ್ಹತೆ ಪಡೆದಿರಬೇಕು ಜೂನ್ 1 ಕ್ಕೆ...

Post
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ

12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ 12 ವರ್ಷ ಮೇಲ್ಪಟ್ಟ ಬಾಲಕ/ಬಾಲಕೀಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ-2025 ನ್ನು ಏ.15 ರಿಂದ ಏ.29 ರವರೆಗೆ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 8.30 ಗಂಟೆಯವರೆಗೆ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸಲು ನೋಂದಣಿಗೆ ಏ.14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಥ್ಲೆಟಿಕ್ ತರಬೇತಿದಾರ ಶಿವಾನಂದ ನಾಯ್ಕ ಮೊ. ಸಂಖ್ಯೆ: 8722516856 ನ್ನು ಸಂಪರ್ಕಿಸುವAತೆ ಯುವ ಸಬಲೀಕರಣ ಮತ್ತು ಕ್ರೀಡಾ...

error: Content is protected !!