Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
CET ಪರೀಕ್ಷಾರ್ಥಿಯ  ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!

CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!

ಮುಂಡಗೋಡ: ಸಿ.ಇ.ಟಿ ಪರೀಕ್ಷೆಯ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಬ್ರಾಹ್ಮಣ ಸಮುದಾಯದ ಒಬ್ಬ ವಿದ್ಯಾರ್ಥಿಯನ್ನು ಆತ ಧರಿಸಿದ ಜನಿವಾರವನ್ನು ಕತ್ತರಿಸಿ ಪರೀಕ್ಷೆಗೆ ಪ್ರವೇಶ ನೀಡಿರುವುದನ್ನು ಹಾಗೂ ಬೀದರನಲ್ಲಿ ವಿದ್ಯಾರ್ಥಿ ಜನಿವಾರ ಧರಿಸಿದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡದ ಘಟನೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಖಂಡಿಸಿರೊ ಅವ್ರು, ಈ ದೇಶವು ವಿವಿಧ ಧರ್ಮ, ಸಂಪ್ರದಾಯ, ಧಾರ್ಮಿಕ ಚಿಹ್ನೆ, ಆಚರಣೆಗಳ ಗೌರವವನ್ನು ಮೂಲಭೂತ ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಅವಮಾನವಾಗುವ...

Post
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!

ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ.ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ...

Post
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!

“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!

ಭೂ ದಾಖಲೆಗಳು ಕಂದಾಯ ಆಡಳಿತದ ಮುಖ್ಯ ಭಾಗವಾಗಿದ್ದು, ಅನೇಕ ದಶಕಗಳವರೆಗೆ ಇರುವ ಭೂ ದಾಖಲೆಗಳು ಒಂದು ನಿರ್ದಿಷ್ಟ ಭೂಮಿಯ ಮೇಲೆ ನಡೆದ ವ್ಯವಹಾರಗಳ ಇತಿಹಾಸದ ಪ್ರಮುಖ ಕೊಂಡಿಯಾಗಿದೆ. ದೀರ್ಘಾವಧಿಯ ವರೆಗೆ ಈ ದಾಖಲೆಗಳ ಸರಿಯಾದ ನಿರ್ವಹಣೆ ಮತ್ತು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದ್ದು, ಭೂ ಸುರಕ್ಷಾ ಯೋಜನೆಯ ಮೂಲಕ ಭೂದಾಖಲೆಗಳನ್ನು ಸಂರಕ್ಷಿಸಿ ಅದನ್ನು ತ್ವರಿತವಾಗಿ ಪಡೆಯಲು ಸಾಧ್ಯವಾಗಲಿದೆ. ಈ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಭೂಸುರಕ್ಷಾ ತಂತ್ರಾಂಶದಲ್ಲಿ ಇಂಡೆಕ್ಸಿಂಗ್ ಹಾಗೂ ಕ್ಯಾಟಲಾಗಿಂಗ್ ಮಾಡಿ ಅಪಲೋಡ್ ಮಾಡಲಾಗುವ ಕಾರ್ಯದಲ್ಲಿ ನಾನ್...

Post
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!

ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!

ಕಾರವಾರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಾದ್ಯಂತ ಏಪ್ರಿಲ್ 1 ರಿಂದ ಜೂನ್ 30 ರ ವರೆಗೆ ಸ್ತ್ರೀ ಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯಡಿ ಮಹಿಳೆಯರಿಗಾಗಿ ವಿಶೇಷ ಸವಲತ್ತು ಮತ್ತು ಅವಕಾಶಗಳನ್ನು ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಜಿಲ್ಲಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಹೇಳಿದರು. ಕಾರವಾರ ತಾಲೂಕಿನ ಆಮದಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೆ ನಂ. 329ರಲ್ಲಿ ಬಾಳೆಮಡ್ಡಿ...

Post
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ಕುಸ್ತಿ (ಬಾಲಕರು/ಬಾಲಕಿಯರು),ಅರ್ಚರಿ (ಬಾಲಕರು) ಫೆನ್ಸಿಂಗ್(ಬಾಲಕರು), ಬಾಕ್ಸಿಂಗ್ (ಬಾಲಕರು/ಬಾಲಕಿಯರು) ಕ್ರೀಡೆಗಳಿಗೆ ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪರಿಶಿಷ್ಟ ಪಂಗಡದ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಏ.14 ರಂದು ಯಲ್ಲಾಪುರ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಸಲಾಗಿದೆ. ಭಾಗವಹಿಸುವ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು 2025-26 ನೇ ಸಾಲಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಗೆ ಅರ್ಹತೆ ಪಡೆದಿರಬೇಕು ಜೂನ್ 1 ಕ್ಕೆ...

Post
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ

12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ 12 ವರ್ಷ ಮೇಲ್ಪಟ್ಟ ಬಾಲಕ/ಬಾಲಕೀಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ-2025 ನ್ನು ಏ.15 ರಿಂದ ಏ.29 ರವರೆಗೆ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 8.30 ಗಂಟೆಯವರೆಗೆ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸಲು ನೋಂದಣಿಗೆ ಏ.14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಥ್ಲೆಟಿಕ್ ತರಬೇತಿದಾರ ಶಿವಾನಂದ ನಾಯ್ಕ ಮೊ. ಸಂಖ್ಯೆ: 8722516856 ನ್ನು ಸಂಪರ್ಕಿಸುವAತೆ ಯುವ ಸಬಲೀಕರಣ ಮತ್ತು ಕ್ರೀಡಾ...

Post
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ  ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!

ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!

ಕಾರವಾರ: ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭವು ಏ.12 ಮತ್ತು 13 ರಂದು ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯಲಿದೆ. ಕದಂಬೋತ್ಸವ-2025 ರ ಉದ್ಘಾಟನೆಯನ್ನು,ಏ.12 ರಂದು ಸಂಜೆ 5 ಗಂಟೆಗೆ ಬನವಾಸಿಯ ಮಯೂರ ವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಯಲ್ಲಾಪುರ- ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ...

Post
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!

ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಜಿಲ್ಲೆಗೆ ನೀಡಿದ ನಿಗಧಿತ ಮಾನವ ದಿನಗಳನ್ನು ಸೃಜಿಸುವ ಕಾರ್ಯದಲ್ಲಿ ಶೇ.100 ರಷ್ಟು ಸಾಧನೆ ಮಾಡಿದ್ದು, 2023-24 ರ ಅವಧಿಯಲ್ಲೂ ಸಹ ಶೇ.100 ಸಾಧನೆ ಮಾಡಿದ್ದು, ಸತತ ಎರಡನೇ ವರ್ಷವೂ ಗುರಿ ಸಾಧಿಸುವ ಮೂಲಕ ವಿಶೇಷ ಸಾಧನೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ...

Post
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ

ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ

 ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ‌. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ...

Post
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!

ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!

 ಮುಂಡಗೋಡ ತಾಲೂಕಿನ ಕೆಲವು ಕಡೆ ಸಂಜೆ ಭಾರಿ ಮಳೆ ಗಾಳಿಗೆ ಅವಾಂತರಗಳು ಸೃಷ್ಠಿಯಾಗಿವೆ. ಭಾರೀ ಮಳೆ ಗಾಳಿಗೆ ಶಿರಸಿ ರಸ್ತೆಯ ಸಾಲಗಾಂವ್ ಸಮೀಪ ಬೃಹತ್ ಮಾವಿನ ಮರ ರಸ್ತೆ ಮೇಲೆ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕಳೆದ ಒಂದು ಗಂಟೆಯಿಂದ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಮಳೆ ಗಾಳಿಗೆ ರಸ್ತೆ ಮೇಲೆಯೇ ಧರೆಗುರುಳಿರೋ ಮರದ ತೆರವು ಮಾಡಬೇಕಿದೆ. ರಸ್ತೆ ಸಂಚಾರ ಸುಗಮಗೊಳಿಸವೇಕಿದೆ ಅಂತಾ ವಾಹನ ಸವಾರರು ಪರದಾಡುತ್ತಿದ್ದಾರೆ.

error: Content is protected !!