ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರೋ ಮಳೆ, ಗಾಳಿ ಅವಾಂತರ ತಂದಿಟ್ಟಿದೆ. ತಾಲೂಕಿನಲ್ಲಿ ಮಳೆ ಗಾಳಿಗೆ ಒಟ್ಟೂ 12 ಮನೆಗಳಿಗೆ ಹಾನಿಯಾಗಿದ್ದು ಸಂಕಷ್ಟ ತಂದೊಡ್ಡಿದೆ. ಮಳೆಯಿಂದ ಹಾನಿ ಎಲ್ಲೇಲ್ಲಿ..? ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 12 ಮನೆಗಳಿಗೆ ಮಳೆ, ಗಾಳಿಯಿಂದ ಹಾನಿಗೊಳಗಾಗಿದ್ದು, ಹುನಗುಂದ, ಹರಗನಳ್ಳಿ, ಭದ್ರಾಪುರ, ಶ್ಯಾನವಳ್ಳಿ, ಇಂದೂರು, ಗಣೇಶಪುರ, ಚಿಗಳ್ಳಿಯಲ್ಲಿ ತಲಾ ಒಂದು ಮನೆಗಳಿಗೆ ಹಾನಿಯಾಗಿದೆ. ಇನ್ನು ಮುಂಡಗೋಡ ಪಟ್ಟಣ ಹಾಗೂ ಸನವಳ್ಳಿ ಗ್ರಾಮದಲ್ಲಿ ತಲಾ ಎರಡು ಮನೆಗಳು ಜಖಂಗೊಂಡಿವೆ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ...
Top Stories
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!
ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಠಕ್ಕರ್ ಕೊಟ್ಟ ಕಾಂಗ್ರೆಸ್, ಹಲವು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!
ಮುರುಡೇಶ್ವರ ಪ್ರವಾಸಕ್ಕೆ ತೆರಳಿದ್ದ 7 ವಿದ್ಯಾರ್ಥಿಗಳು ನೀರುಪಾಲು, ಮೂವರ ರಕ್ಷಣೆ, ಓರ್ವ ವಿದ್ಯಾರ್ಥಿ ಸಾವು..!
ಚಿಗಳ್ಳಿ ಗ್ರಾಪಂ ಅಧ್ಯಕ್ಷೆ ಪುಷ್ಪಾ ಗೋಸಾವಿ ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆ, ಅಷ್ಟಕ್ಕೂ, ಆ ತಾಯಿ ಗೋಳೋ ಅಂತ ಕಣ್ಣೀರು ಹಾಕಿದ್ಯಾಕೆ..?
ಮುಂಡಗೋಡಿನ ಸಾಯಿ ಭಕ್ತ, ಹಿರಿಯ ಸಮಾಜ ಸೇವಕ ಅಶೋಕ ಗೋಕರ್ಣ ವಿಧಿವಶ..!
ಈ ಬಾರಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಅನ್ನೋದು ನಮ್ಮ ಉದ್ದೇಶ- ಸಿಎಂ ಸಿದ್ಧರಾಮಯ್ಯ
ಶಿಗ್ಗಾವಿಯಲ್ಲಿ ಭರ್ಜರಿ ಜಯ ಸಿಕ್ಕ ಹಿನ್ನೆಲೆ, ಸವಣೂರಿಗೆ ಇಂದು ಸಿಎಂ ಸಿದ್ದರಾಮಯ್ಯ..! ಕ್ಷೇತ್ರಕ್ಕೆ ವಿಶೇಷ ಗಿಫ್ಟ್ ಕೊಡ್ತಾರಾ ಸಿಎಂ..?
ಮುಂಡಗೋಡ ಪ.ಪಂಚಾಯತ್ ಪೈಪಲೈನ್ ಕಾಮಗಾರಿಯಲ್ಲಿ ಬಾರಾ ಬಾನಗಡಿ..? ದಾಖಲೆಯಲ್ಲಿ ಇದ್ದ ಪೈಪ್, ಸ್ಥಳದಲ್ಲಿ ಇಲ್ಲವೇ ಇಲ್ಲಾರಿ..!
ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?
ತಡಸ ತಾಯವ್ವನ ಸನ್ನಿಧಿಯಲ್ಲೇ ನಡೀತು ಭಯಂಕರ ಘಟನೆ, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಆತ್ಮಹತ್ಯೆಗೆ ಯತ್ನ.!
ಆಂದೋಲನದ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಶಿರಸಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ
ಚೌಡಳ್ಳಿಯ ಹಿರಿಯ ಸಹಕಾರಿ ಧುರೀಣ ವೈ.ಪಿ.ಪಾಟೀಲ್(72) ವಿಧಿವಶ..!
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
Category: ಉತ್ತರ ಕನ್ನಡ
ತಾಲೂಕಿನಲ್ಲಿಂದು ಕೊರೋನಾ ಖೇಲ್ ಖತಂ..! ಶೂನ್ಯವಾಯ್ತು ಸೋಂಕಿತರ ಸಂಖ್ಯೆ..!
ಮುಂಡಗೋಡ:ತಾಲೂಕಿನ ಮಟ್ಟಿಗೆ ಇದು ಸಂತಸದ ಸುದ್ದಿ. ತಾಲೂಕಿನಲ್ಲಿ ಇಂದು ಹೊಸತಾಗಿ ಯಾವುದೇ ಕೊರೋನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿಲ್ಲ. ಸದ್ಯ ತಾಲೂಕಿನಲ್ಲಿ ಒಟ್ಟೂ 105 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 41 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 64 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 21 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ದುರಂತದ ಸಂಗತಿಯೆಂದ್ರೆ, ಇಂದು ತಾಲೂಕಿನಲ್ಲಿ ಒಟ್ಟು 2 ಜನ ಸೋಂಕಿತರು ಮೃತ ಪಟ್ಟಿದ್ದಾರೆ. ಟಿಬೇಟಿಯನ್...
ರಸ್ತೆಯ ಮದ್ಯೆ ಕಾಮಗಾರಿಯ ಗುಂಡಿ: ಆ ಗ್ರಾಮಗಳಿಗೆ ತೆರಳಬೇಕೆಂದ್ರೆ ಕಷ್ಟ ಕಷ್ಟ..!! ಎಲ್ಲದು..?
ಮುಂಡಗೋಡ:ತಾಲೂಕಿನ ಚೌಡಳ್ಳಿ, ಕ್ಯಾಸನಕೇರಿ ರಸ್ತೆಯಲ್ಲಿ ಅದ್ವಾನ ಶುರುವಾಗಿದೆ. ಚೌಡಳ್ಳಿ, ಕ್ಯಾಸನಕೇರಿ, ಮಲವಳ್ಳಿ, ಲಕ್ಕೊಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸೋ ರಸ್ತೆ ಅಧಿಕಾರಿಗಳ ನಿರ್ಲಕ್ಷದಿಂದ ಮಳೆಗಾಲದಲ್ಲಿ ಎದ್ದು ಬಿದ್ದು ಹೋಗುವ ಸ್ಥಿತಿಗೆ ತಂದಿಟ್ಟಿದೆ. ಹೌದು, ಮುಂಡಗೋಡ ತಾಲೂಕಿನ ಚೌಡಳ್ಳಿ, ಮಲವಳ್ಳಿ, ಲಕ್ಕೊಳ್ಳಿ, ಕ್ಯಾಸನಕೇರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸೋ ರಸ್ತೆಯಲ್ಲಿ ನೀರಾವರಿ ಯೋಜನೆಗಾಗಿ ಕಾಮಗಾರಿ ಮಾಡಲಾಗಿತ್ತು. ಪೈಪಲೈನ್ ಅಳವಡಿಸಲು ರಸ್ತೆಯಲ್ಲೇ ಗುಂಡಿ ತೆಗೆದು ಪೈಪಲೈನ್ ಜೋಡಿಸಲಾಗಿದೆ. ಪೈಪ್ ಲೈನ್ ಕಾಮಗಾರಿ ಎಫೆಕ್ಟ್..! ಆದ್ರೆ ಹಾಗೆ ಗುಂಡಿ ತೋಡಿ, ಪೈಪುಗಳನ್ನು...
ಮಳೆಯ ಅಬ್ಬರಕ್ಕೆ ಉತ್ತರ ಕನ್ನಡ ತತ್ತರ: ಆಗಿರೋ ಅವಾಂತರಗಳೆಷ್ಟು..?
ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ. ಭಾರೀ ಗಾಳಿ ಮಳೆಗೆ ಮಲೆನಾಡು ಭಾಗ ಸಂಪೂರ್ಣ ತತ್ತರಿಸಿದೆ. ಹೀಗಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಲ್ಲೇಲ್ಲಿ..? ಜಿಲ್ಲೆಯ ಸಿದ್ದಾಪುರ, ಶಿರಸಿ, ಯಲ್ಲಾಪುರ, ದಾಂಡೇಲಿ, ಮುಂಡಗೋಡ ಭಾಗಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಕಳೆದ 3 ದಿನಗಳಲ್ಲಿ ಸಿದ್ದಾಪುರ ತಾಲೂಕು ಒಂದರಲ್ಲೇ ಸುಮಾರು 375 ಮಿಲಿಮಿಟರ್ ಮಳೆ ದಾಖಲಾಗಿದೆ. ಅದ್ರಲ್ಲೂ ನಿನ್ನೆ ರಾತ್ರಿಯಿಂದ ಸಿದ್ದಾಪುರದಲ್ಲಿ 142.4 ಮಿಲಿಮಿಟರ್ ಮಳೆ ದಾಖಲಾಗಿದೆ. ಧರೆಗುರುಳಿದ ವಿದ್ಯುತ್ ಕಂಬಗಳು..! ಜಿಲ್ಲೆಯ...
ಮುಂಡಗೋಡ ತಾಲೂಕಿನಲ್ಲಿ ಮಳೆರಾಯನ ಅರ್ಭಟ: ಮನೆ ಮೇಲ್ಚಾವಣಿ ಕುಸಿದು ಟ್ರಾಕ್ಟರ್ ಜಖಂ..!
ಮುಂಡಗೋಡ: ತಾಲೂಕಿನಾಧ್ಯಂತ ಮಳೆರಾಯನ ಅರ್ಭಟ ಜೋರಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ತಾಲೂಕಿನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಇನ್ನು, ನಿನ್ನೆ ಸುರಿದ ಧಾರಾಕಾರ ಮಳೆಯಿಂದ ಸನವಳ್ಳಿ ಗ್ರಾಮದಲ್ಲಿ ಅವಘಡ ಸಂಭವಿಸಿದೆ. ಮನೆಯ ಮುಂದೆ ಶೆಡ್ ನಲ್ಲಿ ನಿಂತಿದ್ದ ಟ್ರಾಕ್ಟರ್ ಮೇಲೆ ಮನೆಯ ಮೇಲ್ಚಾವಣಿ ಕಿಸಿದು ಬಿದ್ದಿದೆ. ಪರಿಣಾಮ ಟ್ರಾಕ್ಟರ್ ಮೇಲ್ಭಾಗ ಸಂಪೂರ್ಣ ಜಖಂ ಗೊಂಡಿದೆ. ಸನವಳ್ಳಿಯ ಶಿವಾನಂದ್ ನಾಗಪ್ಪ ಕೇರಿಹೊಲದವರ ಎಂಬುವರಿಗೆ ಸೇರಿದ ಟ್ರಾಕ್ಟರ್ ಇದಾಗಿದ್ದು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಬಂದು ಸ್ಥಳ ಪರಿಶೀಲನೆ ಕೈಗೊಂಡಿದ್ದಾರೆ. ಸೂಕ್ತ...
ಮುಂಡಗೋಡಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ “ಶ್ರಮಿಕರಿಗೆ ನೆರವು”
ಮುಂಡಗೋಡ: ರಾಜ್ಯ ಬಿಜೆಪಿ ಸರಕಾರ 11 ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸಹಾಯ ಧನ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ನೆರವಾಗುವ ನಿಟ್ಟಿನಲ್ಲಿ ತಾಲೂಕಾ ಬಿಜೆಪಿ ಯುವ ಮೋರ್ಚಾ “ಶ್ರಮಿಕರಿಗೆ ನೆರವು ” ಕಾರ್ಯಕ್ರಮ ಆಯೋಜಿಸಿದೆ. ಯಲ್ಲಾಪುರ ಕ್ಷೇತ್ರದ ಬಿಜೆಪಿ ಯುವ ನಾಯಕ ವಿವೇಕ್ ಹೆಬ್ಬಾರ್, ಕಾರ್ಯಕ್ರಮ ಉದ್ಘಾಟಿಸಿ, ಅಸಂಘಟಿತ ಕಾರ್ಮಿಕರು ಸರ್ಕಾರದ ಘೋಷಿಸಿರೋ ಸಹಾಯಧನ ಪಡೆದುಕೊಳ್ಳುವಂತೆ ಕರೆ ನೀಡಿದ್ರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ ನಾಯಕ, ಯುವಮೋರ್ಚಾ ತಾಲೂಕಾ...
ಇಂದೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ..!
ಮುಂಡಗೋಡ: ತಾಲೂಕಿನ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಆಶಾ ಕರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರೋ 7 ಜನ ಆಶಾ ಕಾರ್ಯಕರ್ತೆಯರು ಕೊರೋನಾ ಸಂಕಷ್ಟದ ಸಮಯದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಹೀಗಾಗಿ, ಆಶಾ ಕಾರ್ಯಕರ್ತರ ಸೇವೆ ಪರಿಗಣಿಸಿ ತಾಲೂಕಿನೆಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸನ್ಮಾನ ಸಮಾರಂಭದಲ್ಲಿ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಅರುಣ ಸಿಂಗ್ “ಪರ್ಸನಲ್” ಭೇಟಿಗೆ 28 ಶಾಸಕರು ರೆಡಿ..! ನಾಳೆ ಬೆಳಿಗ್ಗೆ ಮೂಹೂರ್ತ ಫಿಕ್ಸ್..!!
ಬೆಂಗಳೂರು: ಕೇಸರಿ ಪಡೆಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿ 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಯಾವಾಗ ಭೇಟಿ..? ನಾಳೆ ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಹಾಗೂ ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ...
ಹಣ್ಣಿನ ಗಾಡಿಯಲ್ಲಿ ಗೋಮಾಂಸ ಸಾಗಾಟ: ಮೂವರು ಆರೋಪಿಗಳು ಅಂದರ್..!
ಭಟ್ಕಳ: ಹಣ್ಣಿನ ಗಾಡಿಯಲ್ಲಿ ಗೋಮಾಂಸ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಪೊಲೀಸ್ರು ಬಂಧಿಸಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೊಸ್ಟ್ ನಲ್ಲಿ ಕಾರ್ಯಾಚರಣೆ ನಡೆಸಿ, 500 ಕೆಜಿಗೂ ಅಧಿಕ ಗೋಮಾಂಸ ವಶಕ್ಕೆ ಪಡೆಯಲಾಗಿದೆ. ಹಾನಗಲ್ ತಾಲೂಕಿನ ಮೌಲಾ ಅಲಿ ಬಾಷಾ ಸಾಬ್, ಭಟ್ಕಳದವರಾದ ಜೀಲಾನಿ ಮೋಹಿದ್ದೀನ್, ಮುಝರಪ್ ಎಂಬುವ ಆರೋಪಿಗಳೆ ಬಂಧನಕ್ಕೊಳಗಾದವರು. ಈ ಕುರಿತು, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಡೇಲಕೊಪ್ಪ ಬಳಿ ಬೈಕ್, ಬೊಲೆರೋ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ: ತಾಲೂಕಿನ ಶಿರಸಿ ರಸ್ತೆಯ ಹುಡೇಲಕೊಪ್ಪ ಬಳಿ ಭೀಕರ ಅಪಘಾತ ನಡೆದಿದೆ. ಬೊಲೆರೊ ಪಿಕ್ ಅಪ್ ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ. ತಾಲೂಕಿನ ಅಟ್ಟಣಗಿಯ ರಾಜೇಶ್ ಚಲವಾದಿ(21) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಶ್ರೀಕಾಂತ್ ಅನ್ನೋ ಮತ್ತೋರ್ವ ಬೈಕ್ ಹಿಂಬದಿಯ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಸದ್ಯ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಅಪಘಾತದ ತೀವ್ರತೆಗೆ ಬೊಲೆರೋ ಪಿಕ್...