Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!

ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!

ಮುಂಡಗೋಡ ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಾಂಡುರಂಗ ಹೊಟೇಲ್ ಬಳಿ, ಬೈಕ್ ಹಾಗೂ ಟಾಟಾ ಎಸ್ ವಾಹನಕ್ಕೆ ಅಪಘಾತವಾಗಿದೆ. ಪರಿಣಾಮ ಹಳೂರಿನ ಯುವಕ ಗಂಭೀರ ಗಾಯಗೊಂಡಿದ್ದಾನೆ. ಇವತ್ತಷ್ಟೇ ಹಬ್ಬಕ್ಕಾಗಿ ಬೆಂಗಳೂರಿನಿಂದ ಬಂದಿದ್ದ, ಮುಂಡಗೋಡ ಹಳೂರಿನ ಮಣಿಕಂಠ(20) ಎಂಬುವ ಯುವಕನೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಕಾಲಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!

ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!

ಮುಂಡಗೋಡ ತಾಲೂಕಿನ ಅಂದಲಗಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ನಿನ್ನೆ ಸಂಜೆ ಸುಮಾರು ಏಳು ಗಂಟೆಯ ಹೊತ್ತಿಗೆ ಗದ್ದೆಯಲ್ಲಿ ಕರಡಿ ದಾಳಿ ಮಾಡಿದ್ದು, ಕಾಲು ಹಾಗೂ ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯವಿಲ್ಲ ಎನ್ನಲಾಗಿದೆ‌. ದ್ಯಾಮಣ್ಣ ನಾಗಪ್ಪ ಬೆಂಡಿಗೇರಿ (35) ಎಂಬುವವನ‌ ಮೇಲೆ ಕರಡಿ ದಾಳಿ ಮಾಡಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಗಾಯಾಳುಗೆ ಚಿಕಿತ್ಸೆ ನೀಡಲಾಗುತ್ತಿದೆ.

Post
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?

ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?

 ಮುಂಡಗೋಡ ತಾಲೂಕಿನಾಧ್ಯಂತ ಸೋಮವಾರ ಸುರಿದ ಭಾರೀ ಮಳೆಗೆ ವಿಪರೀತ ಅವಾಂತರಗಳು ಸೃಷ್ಟಿಯಾಗಿವೆ. ಸೋಮವಾರದಿಂದ ತಾಲೂಕಿನ ಹಲವು ಕಡೆ ಕೆಲ ದುರಂತಗಳೂ ನಡೆದಿವೆ. ಅತ್ತಿವೇರಿ ಗೌಳಿ ದಡ್ಡಿ ಬಳಿ ಹಾಗೂ ಶಿರಸಿ ರಸ್ತೆಯ ಹಿರೇಹಳ್ಳಿ ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗೌಳಿಗರ ಹದಿನೈದಕ್ಕೂ ಹೆಚ್ಚು ಎಮ್ಮೆಗಳು ನೀರು ಪಾಲಾಗಿವೆ ಅನ್ನೋ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಕೆಲವು ಎಮ್ಮೆಗಳ‌ ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಹಲವು ಎಮ್ಮೆಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿವೆ ಅಂತಾ ಹೇಳಲಾಗಿದೆ. ಅತ್ತಿವೇರಿ ಗೌಳಿದಡ್ಡಿಯಲ್ಲಿ..! ಅಂದಹಾಗೆ, ಸೋಮವಾರ...

Post
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ

ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ

 ಮುಂಡಗೋಡ ತಾಲೂಕಿನ ಸಾಲಗಾವಿಯಲ್ಲಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಸಾಲಗಾವಿಯ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾಲಕನ ಶವ ಹೊರ ತೆಗೆದಿದ್ದಾರೆ. ಅಂದಹಾಗೆ, ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ...

Post
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!

ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!

ಮುಂಡಗೋಡ: ಮಳೆಯ ಅರ್ಭಟ ನೋಡಲು ಹೋದ ಒಂಬತ್ತನೇ ತರಗತಿಯ ಬಾಲಕನೋರ್ವ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಸಾಲಗಾಂವ್ ಸಮೀಪದ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ ರಾತ್ರಿ ಮುಂಡಗೋಡ ಠಾಣೆಗೆ ಬಂದು...

Post
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!

ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!

ಬೆಂಗಳೂರು: ಗ್ರಾಮ ಪಂಚಾಯತಿ ಉಪಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ.‌ ನವೆಂಬರ್ 23 ರಂದು ಉಪಚುನಾವಣೆ ನಡೆಸಲು ದಿನಾಂಕ್ ಫಿಕ್ಸ್ ಆಗಿದೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ದಿನಾಂಕ‌ ಘೋಷಣೆಯಾಗಿದೆ‌. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವಾರ್ಡ್ ನಂಬರ್ 1 ರ ಸದಸ್ಯೆ ಯಲ್ಲವ್ವ ಇಟ್ಲಾಪುರ ನಿಧನದಿಂದ ತೆರವಾಗಿರೋ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ವಿವರ ಇಲ್ಲಿದೆ..! ದಿನಾಂಕ 06-11-2024 (ಬುಧವಾರ) ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನವಾಗಿದೆ....

Post
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!

ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!

ಮುಂಡಗೋಡ: ಪಟ್ಟಣದ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆ ಉಸಿರೆಳೆದಿದ್ದಾರೆ.

Post
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!

ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!

ಮುಂಡಗೋಡ; ಕರಡಿ ದಾಳಿಯಿಂದ ಯುವಕನೋರ್ವನಿಗೆ ಗಂಭೀರ ಗಾಯವಾದ ಘಟನೆ, ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ್ ವ್ಯಾಪ್ತಿಯ ಸಿಂಗನಹಳ್ಳಿ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ವಿಪರ್ಯಾಸ ಅಂದ್ರೆ ಐದು ದಿನಗಳ ಹಿಂದೆ ನಡೆದಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮು ಜಾನು ಕೋಕರೆ(31) ಕರಡಿ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಕಳೆದ ಐದು ದಿನಗಳ ಹಿಂದೆ ಕರಡಿ ದಾಳಿಯಾಗಿತ್ತು. ಈ ವೇಳೆ ವ್ಯಕ್ತಿಯ ತಲೆಗೆ ಕಚ್ಚಿ ತೀವ್ರ ಗಾಯಗೊಳಿಸಿತ್ತು. ದುರಂತ ಅಂದ್ರೆ ಇಷ್ಟೊಂದು ಗಾಯವಾಗಿದ್ರೂ ಈ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗಲೇ...

Post
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ:  ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಶಿರಸಿ : ಗ್ರಾಮೀಣ ಪ್ರದೇಶದ ಜನರಿಗೆ ಸರಕಾರದ ಅಗತ್ಯ ಸೌಲಭ್ಯಗಳ ಪೂರೈಕೆ ಹಾಗೂ ಮೂಲಭೂತ ಸಮಸ್ಯೆಗಳ ನಿವಾರಣೆಗಾಗಿ ಶ್ರಮಿಸುವ ಆರ್‌ಡಿಪಿಆರ್, ಕಂದಾಯ, ಪೋಲಿಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಪ್ರತಿಯೊಬ್ಬ ನೌಕರರು ಜನಸಾಮಾನ್ಯರು ಮತ್ತು ಜನಪ್ರತಿನಿಧಿಗಳ ನಡುವಿನ ಸಂಪರ್ಕಕೊಂಡಿಯಾಗಿ ನಿರಂತರ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬ ನೌಕರರು ಈ ಎಲ್ಲ ಒತ್ತಡಗಳ ನಡುವೆಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ವ್ಯಾಯಾಮ, ಯೋಗ, ಕ್ರೀಡೆ ಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಹಾಗೂ ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ...

Post
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!

ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!

ಮುಂಡಗೋಡ ಬ್ಲಾಕ್ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಿದೆ. ತಾಲೂಕಾ ಕಾಂಗ್ರೆಸ್ ನ ಹಿರಿಯ ಮುಖಂಡ ಕೃಷ್ಣ ಹಿರೇಹಳ್ಳಿಯವರನ್ನು ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಸೆಪ್ಟೆಂಬರ್ 20 ರಂದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದ್ರೆ, ಅದು ಒಂದು ವಾರದ ನಂತರ ಬಹಿರಂಗವಾಗಿದೆ. ದಿಟ್ಟ ಹೆಜ್ಜೆ..! ಅಸಲು, ಮುಂಡಗೋಡ ಕಾಂಗ್ರೆಸ್ ಗೆ ಇಂತಹದ್ದೊಂದು ಬದಲಾವಣೆಯ ಅವಶ್ಯಕತೆ ಇತ್ತು. ಹಾಗಂತಾ ಕಳೆದ ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ತಾಲೂಕಾ ಕಾಂಗ್ರೆಸ್ ನಲ್ಲಿ ಬಹಿರಂಗವಾಗೇ ಅಧ್ಯಕ್ಷರ...

error: Content is protected !!