ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಬೈಕ್ ಅಪಘಾತವಾಗಿದೆ. ಅಗಡಿ ಸಮೀಪದ ಪೆಟ್ರೊಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಅನ್ನೊ ಮಾಹಿತಿ ಇದೆ. ಬಸಾಪುರ ಗ್ರಾಮದ ತಿಪ್ಪಯ್ಯ ಹಾಗೂ ಹುಲಿಹೊಂಡ ಗ್ರಾಮದ ಕುಮಾರ್ ಎಂಬುವವರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರ ಅಂತಾ ಹೇಳಲಾಗ್ತಿದೆ. ಸದ್ಯ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
Category: ಉತ್ತರ ಕನ್ನಡ
ಮುಂಡಗೋಡ ಸಮೀಪ ಭೀಕರ ಅಪಘಾತ, ಗಾಯಗೊಂಡಿದ್ದ ಇಂದೂರಿನ ಮತ್ತೋರ್ವ ವ್ಯಕ್ತಿ ಸಾವು..! ಮೃತರ ಸಂಖ್ಯೆ ಎರಡಕ್ಕೆ ಏರಿಕೆ..!
ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇಂದೂರಿನ ಕುಮಾರ್ ಇಳಿಗೇರ್(44) ಸಾವನ್ನಪ್ಪಿದ ಮತ್ತೋರ್ವ ಬೈಕ್ ಸವಾರನಾಗಿದ್ದಾನೆ. ಇನ್ನು ಘಟನೆಯಲ್ಲಿ ಮುಂಡಗೋಡಿನ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ...
ಅರಶಿಣಗೇರಿ ವ್ಯಕ್ತಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಭೀಕರ ಹತ್ಯೆ, ಮೊನ್ನೆಯಷ್ಟೆ ಮತದಾನಕ್ಕೆ ಬಂದಿದ್ದ ಶರೀಫಸಾಬ್ ಕೊಲೆಯಾಗಿದ್ದು ಯಾಕೆ..?
ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ವ್ಯಕ್ತಿಯನ್ನು ಹುಬ್ಬಳ್ಳಿ ಸಮೀಪದ ಹಳ್ಯಾಳ ಗ್ರಾಮದಲ್ಲಿ ಭೀಕರ ಕೊಲೆ ಮಾಡಲಾಗಿದೆ. ತಲೆ ಮೇಲೆ ಪಾಟಿ ಗಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಅರಶಿಣಗೇರಿಯ ಶರೀಫ್ ಸಾಬ್ ಮಾಬುಸಾಬ್ ಕಮಡೊಳ್ಳಿ ಎಂಬುವವನನ್ನು ಭೀಕರವಾಗಿ ಕೊಂದು ಹಾಕಲಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಯನ್ನು ಶಶಿಧರ ಚೆನ್ನೋಜಿ ಅಂತಾ ತಿಳಿದು ಬಂದಿದೆ. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲಿ ಕೊಲೆ ಮಾಡಲಾಗಿದೆ. ಅಂದಹಾಗೆ,...
ಕೊಪ್ಪ, ಹುನಗುಂದದಲ್ಲಿ ಸಂಭ್ರಮದ ಬಸವ ಜಯಂತಿ, ಕೊಪ್ಪದಲ್ಲಿ 12 ಅಡಿ ಬಸವೇಶ್ವರ ಪುತ್ಥಳಿ ಪ್ರತಿಷ್ಟಾಪನೆ..!
ಮುಂಡಗೋಡ ತಾಲೂಕಿನಲ್ಲಿ ಸಂಭ್ರಮದ ಬಸವ ಜಯಂತಿ ಆಚರಿಸಲಾಯಿತು. ತಾಲೂಕಿನ ಇಂದೂರು ಕೊಪ್ಪ ಗ್ರಾಮದಲ್ಲಿ ಬಸವೇಶ್ವರರ ನೂತನ ಪುತ್ಥಳಿ ಪ್ರತಿಷ್ಟಾಪಿಸಲಾಯಿತು. ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರರ 12 ಅಡಿಯ ಪುತ್ಥಳಿ ಅನಾವರಣ ಮಾಡಲಾಯಿತು. ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಪ್ರಾರಂಭವಾದ ಬಸವ ಜಯಂತಿ ಹಾಗೂ ಪುತ್ಥಳಿ ಪ್ರತಿಷ್ಟಾಪನೆ ಕಾರ್ಯದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ರು. ಹುನಗುಂದದಲ್ಲಿ..! ಇನ್ನು ತಾಲೂಕಿನ ಹುನಗುಂದದಲ್ಲಿ ಬಸವೇಶ್ವರ ಜಯಂತಿಯ ಅಂಗವಾಗಿ ಗ್ರಾಮದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಅಲಂಕೃತಗೊಂಡ ಚಕ್ಕಡಿಗಳಲ್ಲಿ ಬಸವೇಶ್ವರ ರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ಈ...
ರೈತರೇ ಗಮನಿಸಿ: ಬೆಳೆ ಹಾನಿ ಪರಿಹಾರ ಕುರಿತ ಸಮಸ್ಯೆಗಳ ಪರಿಹಾರಕ್ಕೆ ಸಂಪರ್ಕಿಸಿ: ಅಪರ ಜಿಲ್ಲಾಧಿಕಾರಿ
ಕಾರವಾರ: ಬೆಳೆ ಹಾನಿ ಕುರಿತು ಬಿಡುಗಡೆಯಾದ ಪರಿಹಾರದ ಅನುದಾನ ರೈತರ ಖಾತೆಗೆ ಜಮಾ ಆದ ಬಗ್ಗೆ ಪರಿಶೀಲಿಸುವ ಕುರಿತು, ಹಾಗೂ ಅನುದಾನ ಜಮಾ ಆಗದೇ ಇರುವ ತಾಂತ್ರಿಕ ತೊಂದರೆಗಳನ್ನು ಹಾಗೂ ಬ್ಯಾಂಕ್ ಖಾತೆಯ ಕೆಲವೊಂದು ನ್ಯೂನತೆಗಳನ್ನು ಪರಿಹರಿಸುವ ಬಗ್ಗೆ ಜಿಲ್ಲೆಯ ಬರ ಪೀಡಿತ 11 ತಾಲ್ಲೂಕುಗಳಲ್ಲಿಯ ತಹಶೀಲ್ದಾರ ಕಚೇರಿಗಳಲ್ಲಿ ರೈತರ ಸಲಹಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಂಬಂದಿಸಿದ ತಹಶೀಲ್ದಾರ ಕಚೇರಿಯನ್ನು ಈ ಕೆಳಗಿನ ದೂರವಾಣಿಗಳಲ್ಲಿ ಕಚೇರಿ ಸಮಯದಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದ್ದು,ತಾಲ್ಲೂಕಿನ ಹೆಸರು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಇಲ್ಲಿದೆ....
ಹೃದಯಾಘಾತದಿಂದ ಹುನಗುಂದದ ಮತ್ತೋರ್ವ ಯುವಕ ಸಾವು, ಒಂದೇ ದಿನ ಇಬ್ಬರು ಯುವಕರ ಸಾವು..! ಗ್ರಾಮದಲ್ಲಿ ಸೂತಕದ ಛಾಯೆ..!!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮಕ್ಕೆ ಈ ಅಮವಾಸ್ಯೆ ಅಕ್ಷರಶಃ ಕರಾಳ ಅಮವಾಸ್ಯೆ ಆದಂತಾಗಿದೆ. ಇವತ್ತೊಂದೇ ದಿನ ಗ್ರಾಮದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ತುಮಕೂರು ಸಮೀಪ ಯುವಕನೋರ್ವ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ, ಆತನ ಶವಸಂಸ್ಕಾರಕ್ಕೆ ಬಂದು ಹೆಂಡತಿ ಮನೆಗೆ ತೆರಳಿದ್ದ ಮತ್ತೋರ್ವ ಯುವಕ ಹೃದಯಾಘಾತದಿಂದ ಸಂಜೆ ಮೃತಪಟ್ಟಿದ್ದಾನೆ. ಹೀಗಾಗಿ, ಹುನಗುಂದ ಗ್ರಾಮದಲ್ಲಿ ಅಕ್ಷರಶಃ ಸೂತಕದ ವಾತಾವರಣ ನಿರ್ಮಾಣವಾಗಿದೆ. ಗಂಗಾಧರ ಸಂಗಪ್ಪ ಬಗಡಗೇರಿ(38) ಇವತ್ತು ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈತ ನಿನ್ನೆಯಷ್ಟೇ ಮೃತಪಟ್ಟಿದ್ದ ಹುನಗುಂದ ಗ್ರಾಮದ ಸ್ನೇಹಿತ ರಾಜು...
ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿ, ಆಸ್ಪತ್ರೆಗೆ ದಾಖಲು..!
ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿಯಾಗಿದೆ. ಪರಿಣಾಮ ಶಿರಸಿಯ ಟಿಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆ ಮಾಡುತ್ತಿದ್ದ ವೇಳೆ ಜೇನುನೋಣಗಳು ಏಕಾಏಕಿ ದಾಳಿ ಮಾಡಿವೆ ಅಂತಾ ಮಾಹಿತಿ ಬಂದಿದೆ. ಹೀಗಾಹಿ ಶಾಸಕ ಭೀಮಣ್ಣ ನಾಯ್ಕ್ ಗೆ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶಾಸಕರ ಜೊತೆಗಿದ್ದ ಹಲವರ ಮೇಲೂ ಜೇನು ನೋಣಗಳಿ ದಾಳಿ ಮಾಡಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಅನ್ನೋ ಮಾಹಿತಿ ಇದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಜೆವರೆಗಿನ ಮತದಾನದ ವಿವರ..!
ಉತ್ತರ ಕನ್ಮಡ ಜಿಲ್ಲೆಯಲ್ಲಿ ಸಂಜೆಯವರೆಗೆ ಜಿಲ್ಲೆಯಲ್ಲಿ ಶೇ. 73.52 ರಷ್ಟು ಮತದಾನವಾಗಿದೆ. ಕ್ಷೇತ್ರವಾರು ಮತದಾನದ ವಿವರ ಶಿರಸಿ ಕ್ಷೇತ್ರ- 76.6% ಯಲ್ಲಾಪುರ ಕ್ಷೇತ್ರ-79.95% ಖಾನಾಪುರ ಕ್ಷೇತ್ರ-71.87% ಹಳಿಯಾಳ ಕ್ಷೇತ್ರ-72.35% ಕುಮಟಾ ಕ್ಷೇತ್ರ-70.1 % ಭಟ್ಕಳ ಕ್ಷೇತ್ರ-73% ಕಾರವಾರ ಕ್ಷೇತ್ರ-70.61% ಕಿತ್ತೂರ ಕ್ಷೇತ್ರ- 75.25% ಇದು ಈ ಕ್ಷಣದವರೆಗಿನ ಮತದಾನ ಪ್ರಮಾಣವಾಗಿದ್ದು, ಇನ್ನು ಮತದಾನ ಪ್ರಮಾಣದ ನಿಖರ ವಿವರ ನಾಳೆ ಹೊರಬೀಳಲಿದೆ ಅನ್ನೊ ಮಾಹಿತಿ ಜಿಲ್ಲಾಡಳಿತದಿಂದ ಲಭ್ಯವಾಗಿದೆ.
ಕೊನೆಗೂ ಮತದಾನಕ್ಕೆ ಒಪ್ಪಿಕೊಂಡ ಬಸಾಪುರ ಗ್ರಾಮಸ್ಥರು, ಶಿರಸಿ ಎಸಿ ಭರವಸೆ ಬಳಿಕ ಮತಗಟ್ಟೆಗೆ ಎಂಟ್ರಿ..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರ ಗ್ರಾಮಸ್ಥರು ಕೊನೆಗೂ ಮತದಾನಕ್ಕೆ ಒಪ್ಪಿಕೊಂಡಿದ್ದಾರೆ. ವಿವಿಧ ಬೇಡಿಕೆಗೆ ಆಗ್ರಹಿಸಿ ಇಡೀ ಗ್ರಾಮಕ್ಕೆ ಗ್ರಾಮವೇ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ ಮಾಡಿದ್ರು. ಹೀಗಾಗಿ, ಪಬ್ಲಿಕ್ ಫಸ್ಟ್ ನ್ಯೂಸ್ ಈ ಕುರಿತು ವಿಸ್ತೃತ ವರದಿ ಬಿತ್ತರಿಸಿತ್ತು. ಬೆಳಿಗ್ಗೆಯಿಂದಲೂ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿ, ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು, ತಹಶೀಲ್ದಾರ್ ಮುಖಾಂತರ ಮನವಿ ಅರ್ಪಿಸಿದ್ದರು. ಆದ್ರೆ, ತಹಶೀಲ್ದಾರ್ ಸಾಹೇಬ್ರು ಗ್ರಾಮಸ್ಥರ ಮನವಿ ಸ್ವೀಕರಿಸಿ ಮತದಾನ ಮಾಡುವಂತೆ ಗ್ರಾಮಸ್ಥರಿಗೆ ಮನವಿ ಮಾಡಿ...
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮದ್ಯಾನ 1 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಮದ್ಯಾನ 1 ಗಂಟೆಗೆ ಜಿಲ್ಲೆಯಲ್ಲಿ ಶೇ. 43.31 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ ಮದ್ಯಾನ 1 ಗಂಟೆಗೆ ಶಿರಸಿ ಕ್ಷೇತ್ರ- 49.51% ಯಲ್ಲಾಪುರ ಕ್ಷೇತ್ರ-47.63% ಖಾನಾಪುರ ಕ್ಷೇತ್ರ-45.96% ಹಳಿಯಾಳ ಕ್ಷೇತ್ರ-44.79% ಕುಮಟಾ ಕ್ಷೇತ್ರ-45.64 % ಭಟ್ಕಳ ಕ್ಷೇತ್ರ-43.52% ಕಾರವಾರ ಕ್ಷೇತ್ರ-43.67% ಕಿತ್ತೂರ ಕ್ಷೇತ್ರ- 40.42%