ಮುಂಡಗೋಡ: ಶ್ರೀರಾಮ ನವಮಿಯ ನಿಮಿತ್ತ ಶ್ರೀರಾಮ ಸೇನೆ ಮತ್ತು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಪ್ರಭು ಶ್ರೀರಾಮಚಂದ್ರರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಕಾರ್ಯಕರ್ತರು, ಶ್ರೀರಾಮಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಘೋಷ ಮೊಳಗಿಸಿದ್ರು.
Top Stories
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
Category: ಉತ್ತರ ಕನ್ನಡ
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ, ಉ.ಕನ್ನಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ. ಕಾರವಾರ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಗೆ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸೇರಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು, ಕಾರವಾರದ ಸಿದ್ದಿವಿನಾಯಕ ದೇವಸ್ಥಾನಕ್ಕೆ ಬೇಟಿ ನೀಡಿ ದರ್ಶನ ಪಡೆದ ಡಾ....
ಉತ್ತರ ಕನ್ನಡದಲ್ಲಿ ಇಂದು 3 ನಾಮಪತ್ರ ಸಲ್ಲಿಕೆ, ಮುಂಡಗೋಡಿನ ಚಿದಾನಂದ ಹರಿಜನ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂದಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಎರಡನೇ ದಿನವಾದ ಇಂದು, ಜಿಲ್ಲೆಯಲ್ಲಿ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿವೆ. ಪಕ್ಷೇತರ ಅಭ್ಯರ್ಥಿಗಳಾದ ಚಿದಾನಂದ ಹೆಚ್ ಹರಿಜನ, ಕೃಷ್ಣಾಜಿ ಪಾಟೀಲ್, ನಿರಂಜನ್ ಉದಯಸಿನ್ಹಾ ಸರ್‌ದೇಸಾಯಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇದ್ರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 7 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದ್ದು, 20 ರಂದು ನಾಮಪತ್ರಗಳ ಪರಿಶೀಲನೆ, 22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ...
ಮುಂಡಗೋಡ ಬಿಜೆಪಿಗೆ ನೂತನ ಪದಾಧಿಕಾರಿಗಳ ಆಯ್ಕೆ, ಯಾರ್ಯಾರು ಗೊತ್ತಾ..?
ವಿವೇಕ್ ಹೆಬ್ಬಾರ್ ಬಳಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಂತರ ಮುಂಡಗೋಡ ಬಿಜೆಪಿ ಮೈಕೊಡವಿ ಎದ್ದಿದೆ. ಒಂದಿಷ್ಟು ಯುವಕರ ಪಡೆ ಸ್ಥಳೀಯ ಬಿಜೆಪಿಯನ್ನ ಬಲಿಷ್ಟಗೊಳಿಸಲು, ಇನ್ನಿಲ್ಲದ ಕಾರ್ಯತಂತ್ರ ರೂಪಿಸುತ್ತಿದೆ. ಮಂಡಲಾಧ್ಯಕ್ಷ ಮಂಜುನಾಥ ಪಾಟೀಲ್ ನೇತೃತ್ವದಲ್ಲಿ ಇಡೀ ತಾಲೂಕಿನ ಬೂತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ನೂತನ ಪದಾಧಿಕಾರಿಗಳ ಆಯ್ಕೆ..! ಅಂದಹಾಗೆ, ಬಿಜೆಪಿ ತೊರೆದು ಕೈ ಪಡೆಗೆ ಜಿಗಿದ ಹಲವು ಬಿಜೆಪಿ ಪದಾಧಿಕಾರಿಗಳಿಂದ ತೆರವಾದ ಸ್ಥಾನಗಳಿಗೆ, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಮುಂಡಗೋಡಿನಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಖಂಡರುಗಳು...
ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ ನಿಧನ..!
ಮುಂಡಗೋಡ: ಪಟ್ಟಣದಲ್ಲಿ ಹೊಟೇಲ್ ನಡೆಸುತ್ತಿದ್ದ ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ (68) ದೈವಾಧೀನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಬೆಳಗಿನ ಜಾವ ಕೊನೆ ಉಸಿರೆಳೆದಿದ್ದಾರೆ. ಮೃತರು ಪತ್ನಿ, 7 ಜನ ಗಂಡು ಮಕ್ಕಳು, ಅಣ್ಣ ತಮ್ಮಂದಿರು, ಸಹೋದರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ..! ಸಲೈನ್ ಹಚ್ಚಿಕೊಂಡೇ ಪ್ರಚಾರಕ್ಕಿಳಿದಿರೋ ಕೈ ಅಭ್ಯರ್ಥಿ..!!
ಕುಮಟಾ: ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಪ್ರಚಾರದಲ್ಲಿರುವ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್, ಅನಾರೋಗ್ಯದ ನಡುವೆಯೂ ಪ್ರಚಾರ ಮುಂದುವರಿಸಿ ಕಾರ್ಯಕರ್ತರ ಹುರುಪು ಹೆಚ್ಚಿಸಿದ್ದಾರೆ. ಕಾಂಗ್ರೆಸ್‌ನಿಂದ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಪ್ರಚಾರಕ್ಕೆ ಇಳಿದಿದ್ದ ಡಾ.ಅಂಜಲಿ ನಿಂಬಾಳ್ಕರ್, ಈಗಾಗಲೇ ಬ್ಲಾಕ್ ಮಟ್ಟದ ಸಭೆಗಳನ್ನ ಪೂರ್ಣಗೊಳಿಸಿ ಜಿಲ್ಲಾ ಪಂಚಾಯತಿ ಮಟ್ಟದಲ್ಲಿ ಸಭೆಗಳನ್ನ ನಡೆಸುತ್ತಿದ್ದಾರೆ. ಸತತವಾಗಿ ವಿರಾಮವಿಲ್ಲದೆ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅವರಿಗೆ ಕೊಂಚ ಆರೋಗ್ಯದಲ್ಲಿ ಏರುಪೇರಾಗಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ವೈದ್ಯಕೀಯ ತಪಾಸಣೆಗೆ ಒಳಗಾಗಿ...
ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ, ಸಿಡಿಲು ಬಡಿದು 5 ಹಸುಗಳು ದಾರುಣ ಸಾವು..!
ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಮೊದಲ ದಿನದ ಮಳೆಯಲ್ಲೇ ಐದು ಹಸುಗಳು ದಾರುಣ ಸಾವು ಕಂಡಿವೆ. ಸಿಡಿಲು ಬಡಿದು ಗದ್ದೆಯಲ್ಲಿದ್ದ 5 ಹಸುಗಳು ಮೃತಪಟ್ಟಿವೆ. ಪಾಳಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲಕೊಪ್ಪ ಗ್ರಾಮದ ಪಕ್ಕೀರ ಗೌಡ ಕಡಬಗೇರಿ ಎಂಬುವವರ ಐದು ಹಸುಗಳು ಗದ್ದೆಯಲ್ಲಿ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿವೆ. ಇಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಲ್ಲಿ ಸಿಡಿಲ ಅರ್ಭಟದಿಂದ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ “ಕೈ”ಪಡೆಯಲ್ಲಿ ಬದಲಾವಣೆ ಬಿರುಗಾಳಿ, ಹೆಬ್ಬಾರ್ “ಬೆಂ”ಬಲದ ಅಲೆಯಲ್ಲಿ ಕೊಚ್ಚಿ ಹೋಗುವವರೇಷ್ಟು..?
ಮುಂಡಗೋಡ: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಪಡೆ ಸದ್ಯ ಬಿಜೆಪಿಯಿಂದ ಕಾಂಗ್ರೆಸ್ ಕಡೆ ಜಂಪ್ ಮಾಡಿದೆ. ಹೀಗಾಗಿ, ವಿಧಾನಸಭೆ ಚುನಾವಣೆ ಬಳಿಕ ಬಹುತೇಕ ಕೊಸರಾಟದಲ್ಲೇ ತೊಡಗಿದ್ದ ಮುಂಡಗೋಡ ಕಾಂಗ್ರೆಸ್ ಗೆ ಹೆಬ್ಬಾರ್ ಪಡೆಯ ಆಗಮನ ಆನೆ ಬಲ ತಂದಿದ್ದು, ಒಳಗೊಳಗಿನ ಅಸಮಾಧಾನ, ಕಚ್ಚಾಟಗಳಿಗೆ “ಪವರ್ ಬ್ರೇಕ್” ಬೀಳೋ ಸಾಧ್ಯತೆ ಇದೆ. ಹೀಗಾಗಿ, ಸೋತ ಮನೆಯಲ್ಲಿ ನಾ ಹೆಚ್ಚು ನೀ ಹೆಚ್ಚು ಅಂತಾ ಕತ್ತಿ ಮಸೆಯುತ್ತಿದ್ದ “ಐರನ್ನು” ಮುಖಂಡರುಗಳಿಗೆ ಈಗ ತಮ್ಮ ಸ್ಥಾನಮಾನಗಳದ್ದೇ ಚಿಂತೆ...
ಕೊಪ್ಪ ಕೆರೆಯ ಬಳಿ ಬೆಳ್ಳಂ ಬೆಳಿಗ್ಗೆ ಬೈಕ್ ಅಫಘಾತ, ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಕೊಪ್ಪದ ಕೆರೆ ಬಳಿ ಬೆಳ್ಳಂ ಬೆಳಿಗ್ಗೆ ಬೈಕ್ ಅಪಘಾತವಾಗಿದೆ. ಪರಿಣಾಮ ಮೂವರಿಗೆ ಗಂಭೀರ ಗಾಯವಾಗಿದೆ. ರಸ್ತೆ ಬದಿಯ ಕಲ್ಲಿಗೆ ಬೈಕ್ ಡಿಕ್ಕಿ ಹೊಡೆದು ಅಪಘಾತವಾಗಿದೆ. ಕೊಪ್ಪ ಇಂದಿರಾನಗರದ ಲಕ್ಷ್ಮಣ ರಾಮಣ್ಣ ಬೋವಿವಡ್ಡರ (36), ಬಸವರಾಜ್ ಹನ್ಮಂತಪ್ಪ ಕುಂಕೂರ್ (36), ಮುಂಡಗೋಡಿನ ಸಾದಿಕ್ ಜಲಾಲ್ ಸಾಬ್ ಹುಬ್ಬಳ್ಳಿ(36) ಗಂಭೀರ ಗಾಯಗೊಂಡಿದ್ದಾರೆ. ಅಪಘಾತವಾದ ತಕ್ಷಣವೇ ಗ್ರಾಮಸ್ಥರು ಗಾಯಗೊಂಡವರನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಬ್ಬಾರ್ ಬೆಂಬಲಿಗರು ಬಿಜೆಪಿ ತೊರೆಯುವ ಮುಹೂರ್ತ ಫಿಕ್ಸ್..! ನಾಳೆ ಗುರುವಾರ ಮದ್ಯಾನ ಕೈ ಸೇರ್ತಾರಂತೆ ಸಾವಿರಾರು ಕಾರ್ಯಕರ್ತರು..!!
ಮುಂಡಗೋಡ: ಕೊನೆಗೂ ಯಲ್ಲಾಪುರ ಮುಂಡಗೋಡ ಕ್ಷೇತ್ರದ ಹೆಬ್ಬಾರ್ ಬಳಗ ಕೈ ಪಡೆಗೆ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಗುರುವಾರ ಎಪ್ರಿಲ್ 11 ರಂದು, ಮದ್ಯಾನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರಂತೆ ಸಾವಿರಾರು ಬೆಂಬಲಿಗರು. ಆದ್ರೆ, ಸದ್ಯಕ್ಕೆ ಶಿವರಾಮ್ ಹೆಬ್ಬಾರ್ ಸುಪುತ್ರ ವಿವೇಕ್ ಹೆಬ್ಬಾರ್ ಕೈಗೆ ಸೇರ್ಪಡೆಯಾಗಲ್ಲವಂತೆ. ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರಿನ ರಾಜ್ಯ ನಾಯಕರ ಸಮ್ಮುಖದಲ್ಲಿ ವಿವೇಕ್ ಸೇರ್ಪಡೆ ಆಗ್ತಾರಂತೆ. ಪಟ್ಟಣ ಪಂಚಾಯತಿ 6 ಸದಸ್ಯರು “ಕೈ”ಗೆ..!? ಅಂದಹಾಗೆ, ನಾಳೆ ಗುರುವಾರ ಮುಂಡಗೋಡಿನಲ್ಲಿ ನಡೆಯುವ...