ಮುಂಡಗೋಡ ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನಿಂದ ಕಳೆದ ರವಿವಾರ ಆಗಷ್ಟ 13 ರಂದು ನಾಪತ್ತೆಯಾಗಿದ್ದ ವ್ಯಕ್ತಿ ತಾಲೂಕಿನ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇಂದು ಬೆಳಿಗ್ಗೆಯಷ್ಟೇ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದ ಕುಟುಂಬಸ್ಥರು ಹುಡುಕಿ ಕೊಡುವಂತೆ ಮನವಿ ಮಾಡಿದ್ದರು. ಆದ್ರೀಗ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಕಂಬಾರಗಟ್ಟಿ ಪ್ಲಾಟಿನ ಬಸವರಾಜ್ ಮಲ್ಲಪ್ಪ ಇಳಿಗೇರ್ (49), ಎಂಬುವವನೇ ಶವವಾಗಿ ಪತ್ತೆಯಾಗಿದ್ದು, ಇಂದು ಶವ ಜಲಾಶಯದಲ್ಲಿ ತೇಲಾಡುತ್ತಿರೋದನ್ನು ಕಂಡ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ...
Top Stories
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
Category: ಉತ್ತರ ಕನ್ನಡ
ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ರೂಮರ್ರು.. ಅಷ್ಟಕ್ಕೂ, ಹೆಬ್ಬಾರ್ ಸಾಹೇಬ್ರು ಮತ್ತೆ “ಘರ್ ವಾಪಸಿ” ಅಗ್ತಾರಾ..? ಏನಿದೆ ಲೆಕ್ಕಾಚಾರ..?
ಯಲ್ಲಾಪುರ ವಿಧಾನಸಭಾ ಕ್ಷೇತ್ರ ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಸುದ್ದಿಯಾಗ್ತಿದೆಯಾ..? ರಾಜ್ಯ ರಾಜಕಾರಣದಲ್ಲಿ ಸದ್ಯ ಯಲ್ಲಾಪುರ ಕ್ಷೇತ್ರವನ್ನು ಬಹುಶಃ ಓರೇಗಣ್ಣಿನಿಂದ ನೋಡುವಂತಹ ಊಹಾಪೋಹಗಳು ಜಾರಿಯಲ್ಲಿವೆ. ಯಾಕಂದ್ರೆ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ವಲಸಿಗರ ಟೀಂ ನಲ್ಲಿ ಕೆಲವರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗೋದು ಪಕ್ಕಾ ಎನ್ನುವಂತಹ ಮಾತುಗಳು ಕೇಳಿ ಬರ್ತಿವೆ. ಅದ್ರಲ್ಲೂ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕರೂ ಕಾಂಗ್ರೆಸ್ ಗೆ ಸೇರ್ತಾರೆ ಅನ್ನೋ ಸುದ್ದಿಗಳು ಹರಿದಾಡ್ತಿದೆ. ಆದ್ರೆ, ಇದೇಲ್ಲ ಜಸ್ಟ್ ರೂಮರ್ರು ಅಂತಾ ಶಾಸಕರ ಆಪ್ತ ವಲಯ ಸರಾಸಗಾಟಾಗಿ ತಳ್ಳಿ ಹಾಕ್ತಿದೆ....
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಇಬ್ಬರು ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ನಂಬರ್ ಒಂದರ ಬಳಿ ಇಬ್ಬರನ್ನು ಹೆಡೆಮುರಿ ಕಟ್ಟಿದ್ದಾರೆ. 948 ಗ್ರಾಂ ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಡಗೋಡ ನೆಹರು ನಗರದ ಸಂದೇಶ ಸಂಗಪ್ಪ ಕೋಕರೆ, ತಾಲೂಕಿನ ಮಜ್ಜಿಗೇರಿಯ ರಿಯಾಜ್ ಅಹ್ಮದ್ ಹಜರೆಸಾಬ್ ಮುಗಳಿಕಟ್ಟಿ ಎಂಬುವ ಇಬ್ಬರು...
ಇಂದಿರಾನಗರ ಬಳಿ ಬೈಕಿಗೆ ಕಾರ್ ಡಿಕ್ಕಿ, ಕೊಪ್ಪ ಗ್ರಾಮದ ಬೈಕ್ ಸವಾರನಿಗೆ ಗಾಯ..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಇಂದಿರಾನಗರ ಬಳಿ ಕಾರು ಬೈಕ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಪಾದದ ಮಾಂಸ ಹೊರ ಬಿದ್ದಿದೆ. ಹೀಗಾಗಿ, ಸದ್ಯ ಗಾಯಾಳುವನ್ನು ತಾಲೂಕಾಸ್ಪತ್ರೆಗೆ ಸಾಗಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಕೈಗೊಂಡಿದ್ದಾರೆ. ಕೊಪ್ಪ (ಇಂದೂರು) ಗ್ರಾಮದ ಬಸವರಾಜ್ ಹಡಪದ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರನಾಗಿದ್ದಾನೆ. ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೋಗುತ್ತಿದ್ದ ಕಾರ್, ಬೈಕ್ ಗೆ ಡಿಕ್ಕಿಯಾಗಿದೆ. ಹೀಗಾಗಿ, ಕಾರಿನ ಮುಂಬಾಗ ಕೂಡ...
ಬಾಚಣಕಿಯಲ್ಲಿ ರಾಷ್ಟ್ರಧ್ವಜಕ್ಕೆ ಭಾರೀ ಅಪಮಾನ, ಪಂಚಾಯತಿ ಅಧಿಕಾರಿಗಳ ಬೇಜವಾಬ್ದಾರಿಯಲ್ಲಿ ಧ್ವಜಕ್ಕೆ ಇದೇಂತಾ ಗತಿ..? ಏನ್ ಮಾಡ್ತಿದ್ದಿರಿ ಅಧಿಕಾರಿಗಳೆ..?
ಇಡೀ ದೇಶ ಇವತ್ತು ರಾಷ್ಟ್ರಭಕ್ತಿಯ ಸಿಹಿ ಸಂಭ್ರಮದಲ್ಲಿದೆ. 77 ನೇಯ ಸ್ವತಂತ್ರ ದಿನಾಚರಣೆಯ ಮಹಾ ಸಂಭ್ರಮದಲ್ಲಿ ಎಲ್ಲೆಲ್ಲೂ ತ್ರಿವರ್ಣ ಧ್ವಜ ಹಾರಾಡುತ್ತಿವೆ. ಆದ್ರೆ, ಮುಂಡಗೋಡ ತಾಲೂಕಿನ ಇದೊಂದು ಗ್ರಾಮದಲ್ಲಿ ಸರ್ಕಾರದ ಆದೇಶವಿದ್ದರೂ ರಾಷ್ಟ್ರಧ್ವಜಕ್ಕೆ ಭಾರೀ ಅಪಮಾನ ಮಾಡಲಾಗಿದೆ. ಧ್ವಜ ಸ್ತಂಬ ಕಟ್ಟಿ, ಹೆಮ್ಮೆಯ ಧ್ವಜವನ್ನೂ ಕಂಬಕ್ಕೆ ಏರಿಸಿಟ್ಟು, ಇನ್ನೇನು ಧ್ವಜಾರೋಹಣ ಮಾಡಬೇಕಿದ್ದವರು ಭಾರೀ ಅಪಮಾನ ಮಾಡಿದ್ದಾರೆ. ಧ್ವಜ ಹಾರಿಸದೇ ಇಡೀ ಧ್ವಜ ಸ್ತಂಬವನ್ನೇ ಕಿತ್ತು ಹಾಕಿ ಏನೂ ಆಗಿಲ್ಲದವರಂತೆ ಬೆಪ್ಪಗೆ ಕುಳಿತಿದ್ದಾರೆ. ನಡೆದದ್ದು ಎಲ್ಲಿ..? ಅಂದಹಾಗೆ...
ಧ್ವಜಾರೋಹಣಕ್ಕೆ ಹೋಗುತ್ತಿದ್ದ ಶಾಲಾ ಶಿಕ್ಷಕ ಬೈಕ್ ಅಪಘಾತದಲ್ಲಿ ಸಾವು..!
ಕುಮಟಾ : ಧ್ವಜಾರೋಹಣಕ್ಕೆಂದು ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರು ದಾರುಣ ಸಾವು ಕಂಡಿದ್ದಾರೆ. ಬೋಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಮಟಾ ತಾಲೂಕಿನ ಹಳಕಾರ ಕ್ರಾಸ್ ಸಮೀಪ ಘಟನೆ ನಡೆದಿದ್ದು, ಅಪಘಾತದಲ್ಲಿ ಹೆಗಡೆ ಗ್ರಾಮದ ಮೇಲಿನಕೇರಿ ನಿವಾಸಿಯಾಗಿದ್ದ ಗೋಪಾಲ ಪಟಗಾರ (50) ಮೃತಪಟ್ಟ ಶಿಕ್ಷಕರಾಗಿದ್ದಾರೆ. ಇವರು ಗುಡೆಅಂಗಡಿ ಶಾಲೆ ಶಿಕ್ಷಕರಾಗಿದ್ದು, ಧ್ವಜಾರೋಹಣಕ್ಕಾಗಿ ಬೆಳಿಗ್ಗೆ ಹೆಗಡೆಯ ಮೇಲಿನ ಕೇರಿಯಲ್ಲಿರುವ ತಮ್ಮ ಮನೆಯಿಂದ ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದಾಗ ಎದುರಿನಿಂದ ಅತೀ ವೇಗದಿಂದ ಬಂದ...
ಮುಂಡಗೋಡ ತಾಲೂಕಿನಲ್ಲಿ ಸಂಭ್ರಮದ ಧ್ವಜಾರೋಹಣ, ಹೇಗಿತ್ತು ಗೊತ್ತಾ ಸಂಭ್ರಮ..!
ಮುಂಡಗೋಡ ತಾಲೂಕಿನೆಲ್ಲೆಡೆ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಜೋರಾಗಿತ್ತು. ಬೆಳಿಗ್ಗೆಯಿಂದ ತಾಲೂಕಿನ ಪ್ರತೀ ಗ್ರಾಮಗಳಲ್ಲೂ ಧ್ವಜಾರೋಹಣ ಕಾರ್ಯಕ್ರಮಗಳು ನಡೆದವು. ಶಾಲಾ, ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮುಂಡಗೋಡಿನಲ್ಲಿ..! ಇನ್ನು ತಾಲೂಕಾಡಳಿತದಿಂದ ತಾಲೂಕಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಿತು. ತಹಶೀಲ್ದಾರ್ ಶಂಕರ್ ಗೌಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ರು.ಮಾಜಿ ಶಾಸಕ ವಿ.ಎಸ್.ಪಾಟೀಲ್, ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್, ಸಿಪಿಐ ಬರಮಪ್ಪ ಲೋಕಾಪುರ್ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ತಾಲೂಕಿನ ಹಲವು ಸಾಧಕರಿಗೆ ತಾಲೂಕಾಡಳಿತದ ಪರವಾಗಿ ಸನ್ಮಾನಿಸಲಾಯಿತು. ಪೊಲೀಸ್...
ಮುಂಡಗೋಡಿನಲ್ಲಿ ಸಿಕ್ತು ಬಳೆಯ ಚೀಲ, ಮಾಲೀಕರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಅಟೋ ಚಾಲಕ..!
ಮುಂಡಗೋಡ: ಬಸ್ಸಿನಲ್ಲಿ 50 ಸಾವಿರ ಮೌಲ್ಯದ ಬಳೆ ಇದ್ದ ಬ್ಯಾಗ್ ಕಳೆದುಕೊಂಡಿದ್ದ ಮಹಿಳೆಗೆ ಪೊಲೀಸರ ಮೂಲಕ ವಾಪಸ್ ನೀಡಲಾಗಿದೆ. ಮುಂಡಗೋಡಿನ ಆಟೋ ಚಾಲಕನ ಸಮಯ ಪ್ರಜ್ಞೆ ಹಾಗೂ ಪ್ರಮಾಣಿಕತೆಯಿಂದ ಒಂದೊಳ್ಳೆ ಕೆಲಸವಾಗಿದೆ. ಅಂದಹಾಗೆ, ನಿನ್ನೆ ಶನಿವಾರ ಬನವಾಸಿಯ ಶಾರದಾ ಪಕ್ಕೀರಪ್ಪ ಬಜಂತ್ರಿ, ಎಂಬುವವರು ಬಸ್ಸಿನಲ್ಲಿ ತಮ್ಮ ಚೀಲವನ್ನು ಕಳೆದುಕೊಂಡಿದ್ದರು. ಹಾಗೆ ಕಳೆದುಕೊಂಡಿದ್ದ ಚೀಲದಲ್ಲಿ ಬರೋಬ್ಬರಿ 50 ಸಾವಿರ ರೂ. ಮೌಲ್ಯದ ಬಳೆ ಇತ್ತು. ಮುಂಡಗೋಡಿನ ಪಟ್ಟಣ ಪಂಚಾಯತಿ ಎದುರು ಅದ್ಯಾರೋ ಏನೋ ಆ ಚೀಲವನ್ನು ಇಳಿಸಿ ಬಿಟ್ಟಿದ್ದರು....
ಮುಂಡಗೋಡ ತಾಲೂಕಿನ 7 ಗ್ರಾಪಂ ಗಳ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ಸಂಪೂರ್ಣ ವಿವರ..!
ಮುಂಡಗೋಡ ತಾಲೂಕಿನ 7 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ನಡೆದಿರೋ ಆಯ್ಕೆ ಪ್ರಕ್ರಿಯೆ ಹಲವು ಕುತೂಹಲಗಳ ನಡುವೆ, ಜಿದ್ದಾಜಿದ್ದಿನ ಮದ್ಯೆ ಕೊನೆಗೂ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆಗಳು ನಡೆದು ಫಲಿತಾಂಶ ಹೊರಬಿದ್ದಿದೆ. ಹಾಗಿದ್ರೆ, ಯಾವ್ಯಾವ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆದಿದೆ..? ಹಾಗಿದ್ರೆ ನೂತನ ಅಧ್ಯಕ್ಷ ಉಪಾಧ್ಯಕ್ಷರುಗಳು ಯಾರ್ಯಾರು..? ಇಲ್ಲಿದೆ ಫುಲ್ ಡಿಟೇಲ್ಸ್..! ಇಂದೂರು ಗ್ರಾಪಂ..! ಕುತೂಹಲಕ್ಕೆ ಕಾರಣವಾಗಿದ್ದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯ...
ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ನೂತನ ಅಧ್ಯಕ್ಷರು ಯಾರ್ಯಾರು ಗೊತ್ತಾ..?
ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಾಗಿದೆ. ಹುನಗುಂದ ಗ್ರಾಪಂ..! ಪಬ್ಲಿಕ್ ಫಸ್ಟ್ ನ್ಯೂಸ್ ನಿನ್ನೆಯೇ ನುಡಿದಿದ್ದ ಭವಿಷ್ಯ ನಿಜವಾಗಿದೆ. ಕಾಂಗ್ರೆಸ್ ಬೆಂಬಲಿತರೇ ಹೆಚ್ಚಿದ್ದ ಹುನಗುಂದ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಷರೀಪಸಿಂಗ್ ಶಿಗ್ಗಟ್ಟಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಕಾಂಗ್ರೆಸ್ ಬೆಂಬಲಿತ ಜ್ಯೋತಿ ಮರಿಯಪ್ಪ ಮೇತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಂದಿಕಟ್ಟಾ ಗ್ರಾಪಂ..! ಇನ್ನು ನಂದಿಕಟ್ಟಾ ಗ್ರಾಮ ಪಂಚಾಯತನಲ್ಲಿ ಕಾಂಗ್ರೆಸ್ ಬೆಂಬಲಿತ ಸಂತೋಷ ಪರಶುರಾಮ್ ಭೋಸಲೇ...