ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿ ಗಂಭೀರಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಬದುಕಿ ಉಳಿಯಲೇ ಇಲ್ಲ. ಮುಂಡಗೋಡ ತಾಲೂಕಾಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದ್ದ ಬಾಲಕಿ ಮೃತಪಟ್ಟಿದ್ದಾಳೆ ಅಂತಾ ಕಿಮ್ಸ್ ವೈದ್ಯರು ದೃಢಪಡಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಹಳೂರು ಬಳಿಯ ಮಾರಿಕಾಂಬಾ ನಗರದ ಅಂಗನವಾಡಿಗೆ ಬಂದಿದ್ದ, ಅಂಗನವಾಡಿ ಹೊರಗೆ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮ ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಬಾಲಕಿಗೆ ಹಾವು ಕಚ್ಚಿತ್ತು. ಆದ್ರೆ ಯಾವ ಹಾವು ಏನು ಅಂತಾ ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ,...
Top Stories
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
Category: ಉತ್ತರ ಕನ್ನಡ
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಮುಂಡಗೋಡಿನ ಅಂಗನವಾಡಿಯೊಂದರಲ್ಲಿ ಭಾರಿ ಅನಾಹುತ ಸಂಭವಿಸಿದೆ. ಅಂಗನವಾಡಿಯ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮನಿಗೆ ಹಾವು ಕಚ್ಚಿದೆ. ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ಘಟನೆ ನಡೆದಿದ್ದು, ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಪುಟ್ಟ ಬಾಲಕಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ಮೂತ್ರ ವಿಸರ್ಜನೆಗೆ ಅಂತಾ ಹೋಗಿದ್ದ ಬಾಲಕಿಯ ಕಾಲಿನಲ್ಲಿ ರಕ್ತಸ್ರಾವ ಕಂಡ ಅಂಗನವಾಡಿ ಸಿಬ್ಬಂದಿಗಳು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ...
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಮುಂಡಗೋಡ ತಾಲೂಕಿನ ಇಂದೂರು ಸೊಸೈಟಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ತಾಲೂಕಿನಲ್ಲೇ ಭಾರೀ ಸದ್ದು ಮಾಡಿದ್ದ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ಚುನಾವಣೆ, ನಿಜಕ್ಕೂ ಯಾರೂ ನಿರೀಕ್ಷಿಸದ ಅಚ್ಚರಿ ಫಲಿತಾಂಶ ನೀಡಿದೆ. ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಶಿವರಾಮ್ ಹೆಬ್ಬಾರರ ಪರಮಾಪ್ತ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರ ಸೋಲಿನೊಂದಿಗೆ ಭಾರೀ ಅಚ್ಚರಿಗೆ ಕಾರಣವಾಗಿದೆ. ಅಸಲು, ತೀವ್ರ ತುರುಸು ಪಡೆದಿದ್ದ ಇಂದೂರು ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ “ಮಹಾದಂಡನಾಯಕ” ರವಿಗೌಡ ಪಾಟೀಲ್ ಸೋಲು ಕಂಡಿದ್ದರೂ, ಇನ್ನುಳಿದ ಬಹುತೇಕ ಕಾಂಗ್ರೆಸ್...
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಭಾರೀ ಕುತೂಹಲ ಕೆರಳಿಸಿದ್ದ ಇಂದೂರು ಹಾಗೂ ಚಿಗಳ್ಳಿ ಸೊಸೈಟಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಶಿವರಾಮ್ ಹೆಬ್ಬಾರರ ಪರಮಾಪ್ತ ರವಿಗೌಡ ಪಾಟೀಲರು ಹಾಗೂ ಮತ್ತೋರ್ವ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎಲ್.ಟಿ. ಪಾಟೀಲ್ ಸ್ಪರ್ಧಿಸಿದ್ದ ಈ ಎರಡೂ ಕ್ಷೇತ್ರಗಳು ಎಲ್ಲರ ಗಮನ ಸೆಳೆದಿತ್ತು. ಆದ್ರೆ, ಅಚ್ಚರಿಯೆಂಬಂತೆ ಇಂದೂರು ಸೊಸೈಟಿಯಲ್ಲಿ ರವಿಗೌಡ ಪಾಟೀಲರು ಸೋಲು ಕಂಡಿದ್ದಾರೆ. ಚಿಗಳ್ಳಿಯಲ್ಲಿ ಎಲ್ಟಿ ಪಾಟೀಲರು ಜಯಭೇರಿ ಬಾರಿಸಿದ್ದಾರೆ. ಅಂದಹಾಗೆ, ಇಂದೂರು ಸೊಸೈಟಿಯಲ್ಲಿ ಸ್ಪರ್ಧಿಸಿದ್ದ ರವಿಗೌಡ ಪಾಟೀಲರು ಎದುರಾಳಿ ದೇವು...
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಮುಂಡಗೋಡ: ಪಟ್ಟಣದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (LSMP)ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 9 ಸದಸ್ಯರು ಆಯ್ಕೆಗೊಂಡಿದ್ದಾರೆ. ಇದ್ರೊಂದಿಗೆ ತೀವ್ರ ಜಿದ್ದಾ ಜಿದ್ದಿನ ಕಣವಾಗಿದ್ದ ಸೊಸೈಟಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಪಾರುಪತ್ಯವಾದಂತಾಗಿದೆ. ಅಂದಹಾಗೆ, ಒಟ್ಟೂ12 ನಿರ್ದೇಶಕರ ಸ್ಥಾನಗಳಿಗಾಗಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಈ ಮೊದಲೇ ಇಬ್ಬರು ಅವಿರೋಧ ಆಯ್ಕೆಯಾಗಿದ್ದರು. ಹೀಗಾಗಿ, ಇನ್ನುಳಿದ 10 ನಿರ್ದೇಶಕರ ಆಯ್ಕೆಗೆ ಶುಕ್ರವಾರ ಚುನಾವಣೆ ನಡೆದಿತ್ತು. ಒಟ್ಟ 12ಸ್ಥಾನದ ನಿರ್ದೇಶಕರ ಸ್ಥಾನದಲ್ಲಿ 9 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾದರೆ,...
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ಮುಂಡಗೋಡ: ತಾಲೂಕಿನ ಬೆಡಸಗಾಂವ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ ಮುಗಿದಿದೆ. ಇನ್ನೇನು ಚುನಾವಣೆಯ ಮತ ಎಣಿಕೆ ಕಾರ್ಯ ಮಾತ್ರ ಬಾಕಿ ಉಳಿದಿದೆ. ಹೀಗಿರೋವಾಗಲೇ ಧಾರವಾಡ ಹೈಕೋರ್ಟ್ ಪೀಠ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ತಡೆಯಾಜ್ಞೆ ನೀಡಿದೆ. ಏನಾಯ್ತು..? ಅಂದಹಾಗೆ, ಈಗ ತಾಲೂಕಿನೆಲ್ಲೆಡೆ ವ್ಯವಸಾಯ ಸೇವಾ ಸಹಕಾರಿ ಸಂಘಗಳ ಚುನಾವಣೆ ನಡೀತಿದೆ. ಇಡೀ ತಾಲೂಕಿನಲ್ಲಿ ಈ ಚುನಾವಣೆ ಅನ್ನೋದು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ಈ ಕಾರಣಕ್ಕಾಗಿ, ಹೇಗಾದ್ರೂ ಸರಿ ಅಧಿಕಾರದ ಚುಕ್ಕಾಣಿ ನಮ್ಮ...
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!
ಮುಂಡಗೋಡ ತಾಲೂಕಿನ ಶಿಂಗನಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಅಡಿಕೆ ಕಳ್ಳರು ಕರಾಮತ್ತು ತೋರಿಸಿದ್ದಾರೆ. ಮನೆಯ ಅಂಗಳದಲ್ಲಿ ರಾಶಿ ಮಾಡಿದ್ದ ಸುಮಾರು 8 ಕ್ವಿಂಟಾಲ್ ಅಡಿಕೆಯನ್ನು ಅನಾಮತ್ತಾಗಿ ಕದ್ದೊಯ್ದಿದ್ದಾರೆ. ಹಾಗೆ ಕದ್ದು ಒಯ್ದಿರೋ ಅಡಿಕೆಯ ಅಂದಾಜು ಮೌಲ್ಯ ಏನಿಲ್ಲವೆಂದ್ರೂ ಮೂರೂವರೇ ಲಕ್ಷಕ್ಕೂ ಹೆಚ್ಚು. ಹೀಗಾಗಿ , ಈ ಭಾಗದ ಜನ ಕಂಗಾಲಾಗಿದ್ದಾರೆ. ಅಂದಹಾಗೆ, ಸಿಂಗನಳ್ಳಿಯ ರೈತ ಪ್ರಭು ಪಾಟೀಲ್ ಎಂಬುವವರ ಅಡಿಕೆ ಕಳ್ಳತನವಾಗಿದೆ. ಇವರ ಮನೆ ಪಕ್ಕದಲ್ಲೇ ಕಣ ಮಾಡಿ ಅಡಿಕೆ ಒಣಗಲು ಇಡಲಾಗಿತ್ತು. ಇದನ್ನು ಗಮನಿಸಿರೋ ಅಡಿಕೆ ಕಳ್ಳರು...
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!
ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಮನೆ ಕಳ್ಳತನವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಎರಡು ಮನೆಗಳಿಗೆ ಕಳ್ಳರು ನುಗ್ಗಿದ್ದು ಒಂದು ಮನೆಯಿಂದ 25 ಸಾವಿರ ನಗದು ಹಾಗೂ ಅರ್ದ ತೊಲೆ ಚಿನ್ನ ಎಗರಿಸಿಕೊಂಡು ಹೋಗಿದ್ದಾರೆ. ಮತ್ತೊಂದು ಮನೆಯ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಅಂದಹಾಗೆ, ಹುನಗುಂದದ ದೇವಕ್ಕ ಹನ್ಮಂತಪ್ಪ ವಡ್ಡರ ಎಂಬುವವರ ಮನೆಗೆ ನುಗ್ಗಿರೋ ಕಳ್ಳರು 25ಸಾವಿರ ಹಣ, ಹಾಗೂ ಅರ್ಧ ತೊಲೆ ಚಿನ್ನ ಕದ್ದೊಯ್ದಿದ್ದಾರೆ. ಹಾಗೆಯೇ, ಅದೇ ಮನೆಯ ಹತ್ತಿರದ ಹಸನ್ ಸಾಬ್ ನಬಿಸಾಬ್ ಮೊರಬ ಎಂಬುವವರ ಮನೆಗೆ...
ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಠಕ್ಕರ್ ಕೊಟ್ಟ ಕಾಂಗ್ರೆಸ್, ಹಲವು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಮುಂಡಗೋಡ ತಾಲೂಕಿನ ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಕಾಂಗ್ರೆಸ್ ಠಕ್ಕರ್ ಕೊಟ್ಟಿದೆ. ಚಿಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ನಿಂದ “ಅಪರೇಶನ್ ಹಸ್ತ” ನಡೆದು ಹೋಗಿದೆ ಪರಿಣಾಮ ಹಲವು ಬಿಜೆಪಿಗರು ಅನಾಯಾಸವಾಗಿ “ಕೈ” ವಶವಾಗಿದ್ದಾರೆ. ಚಿಗಳ್ಳಿಯ ಸಹಕಾರಿ ಧುರೀಣ, ಬಿಜೆಪಿ ಮುಖಂಡ ಅಶೋಕ ಶಿರ್ಮಾಪುರ, ಮಹಾದೇವ ಬಯಲವಾಡ, ಚಂದ್ರು ಅಜ್ಜಳ್ಳಿ, ಸಂಪತ್ ಕೆಮೋಜ್ಜಿ, ರಾಮಚಂದ್ರ ನಿಂಬಾಯಿ, ನಾಮದೇವ ಜಾಧವ, ನಾಗಣ್ಣ ಹಂಚಿನಮನಿ, ಬಾಬುರಾಯ್ ಆಲದಕಟ್ಟಿ ಸೇರಿದಂತೆ ಹಲವರು, ಕಾಂಗ್ರೆಸ್...
ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!
ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅಕ್ಷರಶಃ ಸಂಭ್ರಮಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಇನ್ನೇನು ಬಿಜೆಪಿಯಿಂದ ಉಚ್ಚಾಟನೆಯೋ ಅಥವಾ ಇನ್ಯಾವುದೋ ಕಠಿಣ ಕ್ರಮದ ಮಾತು ಹೊರಬಿದ್ದ ಗಳಿಗೆಯಿಂದ ಹೆಬ್ಬಾರ್ ಪಡಸಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಯಾಕಂದ್ರೆ, ಇಲ್ಲಿ ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು, ಎರಡೂ ಒಂದೇಯಾಗುವ ಸಮಯ ಬಹುತೇಕ ಹತ್ತಿರವಾಗಿದೆ ಅಂತಲೇ ಹೆಬ್ಬಾರ್ ಬಳಗದಲ್ಲಿ ಚರ್ಚೆಯಾಗ್ತಿದೆ. STS ಹಾಗೂ ಹೆಬ್ಬಾರ್ ಮೇಲೆ ಕ್ರಮ..! ಅಸಲು, ವಿಜಯಪುರ ಶಾಸಕ, ಬಿಜೆಪಿಯ ಫೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ...