Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!

ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!

ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಖಡಕ್ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಾಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ,...

Post
ಕಾತೂರು ಬಳಿ ಲಾರಿ ಚಾಲಕನನ್ನು ಅಪಹರಿಸಿ 22 ಸಾವಿರ ಹಣ ದೋಚಿದ ಖದೀಮರು..!

ಕಾತೂರು ಬಳಿ ಲಾರಿ ಚಾಲಕನನ್ನು ಅಪಹರಿಸಿ 22 ಸಾವಿರ ಹಣ ದೋಚಿದ ಖದೀಮರು..!

ಮುಂಡಗೋಡ: ತಾಲೂಕಿನ ಕಾತೂರು ಸಮೀಪದಲ್ಲಿ ಲಾರಿ ಚಾಲಕನನ್ನು ಅಪಹರಿಸಿ ಅವನಲ್ಲಿದ್ದ 22 ಸಾವಿರ ಹಣ ದೋಚಿಕೊಂಡು ಹೋದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಅಬ್ದುಲ್ ಪೀರಸಾಬ್ ಶೇಖ್ ಎಂಬುವ ಲಾರಿ ಚಾಲಕನೇ ಹಣ ಕಳೆದುಕೊಂಡವನಾಗಿದ್ದಾನೆ. ಹುಬ್ಬಳ್ಳಿಯಿಂದಲೇ ಬೊಲೆರೋ ವಾಹನದಲ್ಲಿ ಹಿಂಬಾಲಿಸಿದ್ದ ನಾಲ್ಕು ಜನ ದುಷ್ಕರ್ಮಿಗಳು, ಲಾರಿ ಚಾಲಕ ಮೂತ್ರ ವಿಸರ್ಜನೆಗೆಂದು ಲಾರಿ ನಿಲ್ಲಿಸಿದಾಗ ಏಕಾಏಕಿ ಬಂದು ಅಟ್ಯಾಕ್ ಮಾಡಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿ ತಮ್ಮ‌ ಬೊಲೆರೋ ವಾಹನದಲ್ಲೇ ಲಾರಿ ಚಾಲಕನನ್ನು...

Post
ನೆರೆಯಿಂದ ಹಾನಿಗೊಳಗಾದ ಜಿಲ್ಲೆಯ ರಸ್ತೆಗಳಿಗೆ ರೂ. 200 ಕೋಟಿ ಭರವಸೆ ನೀಡಿದ ಸಿಎಂ..!

ನೆರೆಯಿಂದ ಹಾನಿಗೊಳಗಾದ ಜಿಲ್ಲೆಯ ರಸ್ತೆಗಳಿಗೆ ರೂ. 200 ಕೋಟಿ ಭರವಸೆ ನೀಡಿದ ಸಿಎಂ..!

ಅಂಕೋಲಾ: ನೆರೆಯಿಂದ ಹಾನಿಗೊಳಗಾದ ಉತ್ತರ ಕನ್ನಡ ಜಿಲ್ಲೆಯ ರಸ್ತೆಗಳಿಗೆ 200 ಕೋಟಿ ರೂ. ಬಿಡುಗಡೆಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ನೆರೆ ವೀಕ್ಷಣೆ ಬಳಿಕ ಅಂಕೋಲಾದಲ್ಲಿ ಸಭೆ ನಡೆಸಿದ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ರು. ಪಿಡಬ್ಲುಡಿ ಇಲಾಖೆಯಿಂದ 100 ಕೋಟಿ ರೂ., ಆರ್‌ಡಿಪಿಆರ್‌ ವತಿಯಿಂದ 100 ಕೋಟಿ ರೂ. ಹಣ ತುರ್ತು ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ. 10 ಸಾವಿರ ತಕ್ಷಣಕ್ಕೆ..! ಮನೆ ಕಳೆದುಕೊಂಡ ಅತಿಕ್ರಮಣದಾರರೂ ಸೇರಿ, ಮನೆ ಹಾನಿಗೆ ಕಳೆದ ಬಾರಿಯಂತೆ 10 ಸಾವಿರ...

Post
ಅಂಕೋಲಾದಲ್ಲಿ ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ಸಿಎಂ..!

ಅಂಕೋಲಾದಲ್ಲಿ ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ಸಿಎಂ..!

ಅಂಕೋಲಾ: ಇಲ್ಲಿನ ತಾಲೂಕು ಕಚೇರಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು, ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಛರೆನ್ಸ್ ನಡೆಸಿದರು. ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿಗೆ ಮಾಹಿತಿ ನೀಡಿದ ಸಿಎಂ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿನ ಪ್ರವಾಹದ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ್ರು. ಈ ವೇಳೆ ಸಿಎಂ ಗೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು‌.

Post
ಯಲ್ಲಾಪುರದ ಕಳಚೆ ಭಾಗದಲ್ಲಿ ಅತಿವೃಷ್ಠಿ ಹಾನಿ ವೀಕ್ಷಿಸಿದ ಸಿಎಂ..!

ಯಲ್ಲಾಪುರದ ಕಳಚೆ ಭಾಗದಲ್ಲಿ ಅತಿವೃಷ್ಠಿ ಹಾನಿ ವೀಕ್ಷಿಸಿದ ಸಿಎಂ..!

ಯಲ್ಲಾಪುರ : ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಕಳಚೆ ಭಾಗದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಶಿವರಾಮ ಹೆಬ್ಬಾರ್, ಮುಖ್ಯಮಂತ್ರಿಗಳಿಗೆ ಹಾನಿಗೊಳಗಾದ ಪ್ರದೇಶಗಳ ಸಂಪೂರ್ಣ ಮಾಹಿತಿ ನೀಡಿದರು, ಸಂತ್ರಸ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು ಹಾಗೂ ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಪುನರ್ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರದಲ್ಲೇ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ತುರ್ತಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ಕರೆದುಕೊಂಡ...

Post
ಕುಸಿದು ಬಿದ್ದ ಗುಳ್ಳಾಪುರ ಸೇತುವೆ; ಭಯಾನಕವೆಂದ ಸಿಎಂ ಬೊಮ್ಮಾಯಿ..!

ಕುಸಿದು ಬಿದ್ದ ಗುಳ್ಳಾಪುರ ಸೇತುವೆ; ಭಯಾನಕವೆಂದ ಸಿಎಂ ಬೊಮ್ಮಾಯಿ..!

ಯಲ್ಲಾಪುರ: ಭಾರೀ ಮಳೆಯಿಂದ ಗುಳ್ಳಾಪುರ ಸೇತುವೆ ಕುಸಿದು ಹಾನಿಯಾಗಿದ್ದ ಸ್ಥಳಕ್ಕೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದ್ರು‌. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಶಿರಸಿ, ಯಲ್ಲಾಪುರ ಸೇರಿದಂತೆ ಹಲವೆಡೆ ಬಹಳಷ್ಟು ಹಾನಿಯಾಗಿದೆ, ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿದ್ದೇನೆ.. ಪಶ್ಚಿಮ ಘಟ್ಟ ಬಹಳ ಸೂಕ್ಷ್ಮವಾದ ಪ್ರದೇಶ. ತುಂಬಾ ಮಳೆ ಬೀಳೋ ಪ್ರದೇಶ ಕೂಡ ಹೌದು. ಇಲ್ಲಿನ ಮಣ್ಣು ಬಹಳ ಬೇಗ ಕುಸಿತಕ್ಕೆ ಒಳಗಾಗುತ್ತಿದೆ ಇಲ್ಲಿನ ಸೇತುವೆ ಕುಸಿತ ತುಂಬಾ ಭಯಾನಕವಾಗಿದೆ ಅಂತಾ ತಿಳಿಸಿದ್ರು....

Post
ಅರಬೈಲು ಘಟ್ಟದ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ..!

ಅರಬೈಲು ಘಟ್ಟದ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ..!

ಯಲ್ಲಾಪುರ: ಭಾರೀ ಮಳೆಯಿಂದ ಪ್ರವಾಹದ ಸಂಕಷ್ಟದಲ್ಲಿ ಸಿಲುಕಿದ್ದ ಉತ್ತರ ಕನ್ನಡ ಜಿಲ್ಲೆಗೆ ಇಂದು ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಭಾರೀ ಮಳೆಯಿಂದ ಯಲ್ಲಾಪುರ ತಾಲೂಕಿನ ಹಲವು ಕಡೆ ತೀವ್ರ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. ಸಾಕಷ್ಟು ಹಾನಿ ಸಂಭವಿಸಿತ್ತು. ಅದ್ರಂತೆ ಯಲ್ಲಾಪುರ ತಾಲೂಕಿನ ಅರಬೈಲು ಘಟ್ಟ ಪ್ರದೇಶದಲ್ಲಿ ಜುಲೈ 23 ರಂದು ಹೆದ್ದಾರಿ ಕುಸಿತವಾಗಿತ್ತು. ಹೀಗಾಗಿ, ಗುಡ್ಡ ಕುಸಿತವಾದ ಪ್ರದೇಶವನ್ನು ಸಿಎಂ ಬಸವರಾಜ್ ಬೊಮ್ಮಾಯಿ ವೀಕ್ಷಿಸಿದ್ರು. ಅಂದಹಾಗೆ, ಅರಬೈಲು ಘಟ್ಟದಲ್ಲಿ ಸುಮಾರು 10 ಕ್ಕೂ ಹೆಚ್ಚು...

Post
ಉತ್ತರ ಕನ್ನಡ ಜಿಲ್ಲೆಗೆ ನೂತನ ಸಿಎಂ ಎಂಟ್ರಿ, ಭರ್ಜರಿ ಮಳೆಯ ನಡುವೆಯೇ ಬೊಮ್ಮಾಯಿಗೆ ಸ್ವಾಗತ..!

ಉತ್ತರ ಕನ್ನಡ ಜಿಲ್ಲೆಗೆ ನೂತನ ಸಿಎಂ ಎಂಟ್ರಿ, ಭರ್ಜರಿ ಮಳೆಯ ನಡುವೆಯೇ ಬೊಮ್ಮಾಯಿಗೆ ಸ್ವಾಗತ..!

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಗೆ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದ್ದಾರೆ. ಯಲ್ಲಾಪುರದ ಕಿರವತ್ತಿಯಲ್ಲಿ ನೂತನ ಸಿಎಂ ಗೆ ಭರ್ಜರಿ ಸ್ವಾಗತ ಕೋರಲಾಯಿತು. ಸಿಎಂ ಆದ ಬಳಿಕ ಮೊದಲು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರೋ ನೂತನ ಸಿಎಂ ಬೊಮ್ಮಾಯಿ, ಕಿರವತ್ತಿಯಿಂದ ನೇರವಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ಅಗಮಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ನೀಡಿರೋ ಡಯಾಲಿಸಿಸ್ ಕೇಂದ್ರದ ಉದ್ಘಾಟನೆ ನೆರವೇರಿಸಿ ಆನಂತರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬೊಮ್ಮಾಯಿ ತೆರಳಲಿದ್ದಾರೆ. ಇನ್ನು ನೂತನ...

Post
ಪಾಳಾ ಬಳಿ ಬಸ್- ಲಾರಿ ನಡುವೆ ಮುಖಾಮುಕಿ ಡಿಕ್ಕಿ..!

ಪಾಳಾ ಬಳಿ ಬಸ್- ಲಾರಿ ನಡುವೆ ಮುಖಾಮುಕಿ ಡಿಕ್ಕಿ..!

ಮುಂಡಗೋಡ: ತಾಲೂಕಿನ ಪಾಳಾ ಬಳಿಯ ಗೋಟಗೋಡಿಕೊಪ್ಪ ಕ್ರಾಸ್ ಬಳಿ KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ. ಲಾರಿ ಚಾಲಕನ ನಿರ್ಲಕ್ಷದಿಂದಲೇ ಅಪಘಾತವಾಗಿದೆ ಅಂತಾ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಮು‌ಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Post
ಅಧಿಕಾರ ಕೊಟ್ರೆ ನಿಭಾಯಿಸ್ತಿನಿ, ಇಲ್ಲಾಂದ್ರೆ ಶಾಸಕನಾಗೇ ಕೆಲಸ ಮುಂದುವರೀಸ್ತಿನಿ; ಮಾಜಿ ಸಚಿವ ಹೆಬ್ಬಾರ್

ಅಧಿಕಾರ ಕೊಟ್ರೆ ನಿಭಾಯಿಸ್ತಿನಿ, ಇಲ್ಲಾಂದ್ರೆ ಶಾಸಕನಾಗೇ ಕೆಲಸ ಮುಂದುವರೀಸ್ತಿನಿ; ಮಾಜಿ ಸಚಿವ ಹೆಬ್ಬಾರ್

ಮುಂಡಗೋಡ: ಬಿಜೆಪಿ ನಂಗೆ ಒಂದು ವರ್ಷ ಐದು ತಿಂಗಳ ಕಾಲ ಸಚಿವನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು ಹೀಗಾಗಿ, ನಾನು ನನ್ನ ಪಕ್ಷಕ್ಕೆ, ಕ್ಷೇತ್ರದ ಮತದಾರನಿಗೆ ಯಾವಾಗ್ಲೂ ಚಿರ ಋಣಿಯಾಗಿರ್ತೆನೆ ಅಂತಾ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ರು. ಮುಂಡಗೋಡಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವ್ರು, ನನ್ನ ಕ್ಷೇತ್ರದ ಜನರ ಸೇವೆ ಮಾಡಲು ಅನುವು ಮಾಡಿ ಕೊಟ್ಟಿದ್ದ ಯಡಿಯೂರಪ್ಪನವರಿಗೆ ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ತಿಳಿಸಿದ್ರು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ..! ಇನ್ನು, ನೂತನ ಸಚಿವ ಸಂಪುಟದಲ್ಲಿ ಮತ್ತೆ...

error: Content is protected !!