ಹುಬ್ಬಳ್ಳಿ: ನಗರದಲ್ಲಿ ಮತ್ತೆ ಪೊಲೀಸರ ಗನ್ ಸದ್ದು ಮಾಡಿದೆ. ಮನೆಯೊಂದರಲ್ಲಿ ದರೋಡೆ ಮಾಡಿದ್ದ ಇಬ್ಬರು ಅಂತರರಾಜ್ಯ ದರೋಡೆಕೋರರಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಅಂತರರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಬರ್ ಕಾಲಿಗೆ ಹುಬ್ಬಳ್ಳಿಯ ಉಪನಗರ ಪೊಲೀಸರು ಗುಂಡು ಹಾರಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸದ ಬಳಿ ಆರೋಪಿಗಳು ದರೋಡೆ ಮಾಡಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ, ಮೂವರು ಪೊಲೀಸ್ ಸಿಬ್ಬಂದಿಗೆ...
Top Stories
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
Category: ಹುಬ್ಬಳ್ಳಿ ಧಾರವಾಡ
ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು, 24 ವರ್ಷದ ಹುಡುಗನ ಬರ್ಬರ ಹತ್ಯೆ..! ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸ್ರು..!
ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಹಳೆ ವೈಷಮ್ಯಕ್ಕೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ ದುಷ್ಕರ್ಮಿಗಳು. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್‌ನಲ್ಲಿ ಘಟನೆ ನಡೆದಿದೆ ಆಕಾಶ ವಾಲ್ಮೀಕಿ(24) ಕೊಲೆಯಾದ ಯುವಕನಾಗಿದ್ದು, ಮೂವರಿಂದ ಯುವಕನ ಕೊಲೆಯಾಗಿದೆ ಅನ್ನೊ ಮಾಹಿತಿ ಇದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ಪಾರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಕಾಲಿಗೆ ಗುಂಡು..! ಅಂದಹಾಗೆ, ಆಕಾಶ್ ವಾಲ್ಮೀಕಿ ಕೊಲೆ ಆರೋಪಿಗಳನ್ನು ಬೆನ್ನತ್ತಿದ ಹುಬ್ಬಳ್ಳಿ ಪೊಲೀಸ್ರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ....
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿದ ಘಟನೆ ಹಳೇಹುಬ್ಬಳ್ಳಿ ಆನಂದ ನಗರದಲ್ಲಿ ಸಂಭವಿಸಿದ್ದು, ಗಾಯಾಳುಗಳನ್ನ ಕಿಮ್ಸ್‌ಗೆ ರವಾನೆ ಮಾಡಿದ್ದಾರೆ. ಆನಂದ ನಗರದ ಘೋಡಕೆ ಪ್ಲಾಟ್ ನಲ್ಲಿ ಘಟನೆ ಸಂಭವಿಸಿದ್ದು, ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32)ಗೆ ಇರಿದು ಪರಾರಿಯಾಗಿದ್ದಾರೆ. ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು ತೀರ್ವವಾಗಿ ಗಾಯಗೊಂಡು ಕಿಮ್ಸ್‌ಗೆ ದಾಖಲಾಗಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ. ಇದ್ರೊಂದಿಗೆ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಡಿಸೆಂಬರ್ 22ರಂದು ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರನ್ನು ಕಿಮ್ಸ್‌ಗೆ ದಾಖಲಿಸಲಾಗಿತ್ತು. ಈ ವರೆಗೆ ಮೂವರು ಮೃತಪಟ್ಟಿದ್ದು, ಆರು ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್ 22...
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ಹುಬ್ಬಳ್ಳಿಯಲ್ಲಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿ 9 ಜನ ಗಂಭೀರವಾಗಿದ್ದ ಪ್ರಕರಣದಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಾಲಾಧಾರಿಗಳು ಸಾವು ಕಂಡಿದ್ದಾರೆ. ನಿಜನಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ ಪ್ರಕಾಶ್ ಸವದತ್ತಿ (17) ಸಾವು ಕಂಡಿರೋ ಅಯ್ಯಪ್ಪ ಮಾಲಾಧಾರಿಗಳು. ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್ ಸೋರಿಕೆ ಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ...
ಈ ಬಾರಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಅನ್ನೋದು ನಮ್ಮ ಉದ್ದೇಶ- ಸಿಎಂ ಸಿದ್ಧರಾಮಯ್ಯ
ಹುಬ್ಬಳ್ಳಿ :ಈ ಬಾರಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಅನ್ನೋದು ನಮ್ಮ ಉದ್ದೇಶ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ನಾಳೆಯಿಂದ ಅಧಿವೇಶನ ಎರಡು ವಾರ ನಡೆಯಬೇಕು ಅಂತ ನಮ್ಮ ಉದ್ದೇಶ ಆಗಿದೆ. ಆದರೆ ವಿಪಕ್ಷ ಹೇಗೆ ಸಹಕಾರ ನೀಡುತ್ತೆ ನೋಡೋಣ ಎಂದರು. ಆರ್ಥಿಕ ಸಂಕಷ್ಟ ಇಲ್ಲೆ ಇಲ್ಲ ಬಿಜೆಪಿ ಸುಳ್ಳು ಹೇಳುತ್ತಿದ್ದು. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ವಿರೋಧ ಮಾಡತ್ತಾರೆ ಬೇರೆ ಕಡೆ...
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೇ ಗುಂಡಿನ ಸದ್ದು ಕೇಳಿಸಿದೆ. ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ, ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಖತರ್ನಾಕ ಖದೀಮರ ಕಾಲಿಗೆ ಗುಂಡು ಹಾರಿಸಲಾಗಿದೆ. ಪರಿಣಾಮ ಇಬ್ಬರು ಆಸ್ಪತ್ರೆ ಪಾಲಾಗಿದ್ದಾರೆ. ಅಂದಹಾಗೆ, ಮಂಗಳೂರು ಮೂಲದ ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೋಡಲಾಗ್ತಿದೆ. ಅಂದಹಾಗೆ, ಮಂಗಳೂರು ಮೂಲದ...
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಆನಂದ ನಗರದ ಮದನಿ ಮಸೀದಿ ಬಳಿ ನಡೆದಿದೆ. ವಿನಾಯಕ ಚಿತ್ರಗಾರ (21)ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಸಮೀರ, ಇರ್ಫಾನ್, ದೀಪಕ್, ಬಬ್ಲು ಮತ್ತಿತರರು ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರಾವಾಗಿ ಗಾಯಗೊಂಡ ವಿನಾಯಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ್ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶ ಗೊಂಡ ಸಮೀರ್ ವಿನಾಯಕ ನಿಗೆ ಚಾಕು ಇರಿದಿದ್ದಾನೆ. ಚಾಕುವಿನಿಂದ...
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಹುಬ್ಬಳ್ಳಿಯ ಯುವಕನೋರ್ವನ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುದೀಪ್, ಕಿರಣ್ ಪೊಲೀಸರ ಗುಂಡು ತಿಂದ ಆರೋಪಿಗಳಾಗಿದ್ದಾರೆ. ಆಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಶಿವರಾಜ್ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಆದ್ರೆ ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಬಂಧಿಸಲು ತೆರಳಿದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಂಕತರ ಮೇಲೆ ಫೈರಿಂಗ್ ಮಾಡಿದ್ದು, ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಗುಂಡು ತಗುಲಿದ್ದರಿಂದ...
ಧಾರವಾಡದ ವಿವಿಧೆಡೆ ಭಾರೀ ಮಳೆ: ಸಿಡಿಲಿಗೆ ಓರ್ವ ರೈತ ಬಲಿ..!
ಧಾರವಾಡ ತಾಲೂಕಿನ ಹಲವೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಸಿಡಿಲಿಗೆ ಓರ್ವ ರೈತ ಬಲಿಯಾಗಿರುವ ಘಟನೆ ಧಾರವಾಡ ತಾಲೂಕಿನ ಹನುಮನಹಾಳ ಗ್ರಾಮದಲ್ಲಿ ನಡೆದಿದೆ. ಭೀಮನಗೌಡ ಮಲ್ಲನಗೌಡ ಪಾಟೀಲ (65) ಎಂಬುವವರೇ ಸಿಡಿಲಿಗೆ ಬಲಿಯಾದವರು. ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ತಮ್ಮ ಹೊಲಕ್ಕೆ ಹೋಗಿ ಶೇಂಗಾ ಸೋಸುವ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ವಿಪರೀತ ಮಳೆಯಾಗಲು ಆರಂಭಿಸಿದ್ದರಿಂದ ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ಮರಳಿ ಮನೆ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಅವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಗರಗ...