ಧಾರವಾಡ ತಾಲೂಕಿನ ಹಲವೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಸಿಡಿಲಿಗೆ ಓರ್ವ ರೈತ ಬಲಿಯಾಗಿರುವ ಘಟನೆ ಧಾರವಾಡ ತಾಲೂಕಿನ ಹನುಮನಹಾಳ ಗ್ರಾಮದಲ್ಲಿ ನಡೆದಿದೆ. ಭೀಮನಗೌಡ ಮಲ್ಲನಗೌಡ ಪಾಟೀಲ (65) ಎಂಬುವವರೇ ಸಿಡಿಲಿಗೆ ಬಲಿಯಾದವರು. ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ತಮ್ಮ ಹೊಲಕ್ಕೆ ಹೋಗಿ ಶೇಂಗಾ ಸೋಸುವ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ವಿಪರೀತ ಮಳೆಯಾಗಲು ಆರಂಭಿಸಿದ್ದರಿಂದ ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ಮರಳಿ ಮನೆ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಅವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಗರಗ...
Top Stories
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
Category: ಹುಬ್ಬಳ್ಳಿ ಧಾರವಾಡ
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ಹುಬ್ಬಳ್ಳಿ,: ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ಸಾಬ್ (60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ ದುರ್ದೈವಿಗಳು. ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಜಾಪರಸಾಬ್ ಓಮಿನ್ ಕಾರ್ನಲ್ಲಿ ಕುಟುಂಬದವರ ಜೊತೆ ಪಾರ್ಶವಾಯು ಔಷಧಿ ತರಲು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಳಗಾ ಗ್ರಾಮದಲ್ಲಿನ ಸೇಂಟ್ ಮೇರಿ ಆಸ್ಪತ್ರೆಗೆ ಹೋಗಿದ್ದರು. ಔಷಧಿ ಪಡೆದು...
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಧಾರವಾಡ: ಹಣ ಕೊಟ್ಟು ವರ್ಗಾವಣೆ ಮಾಡಿಕೊಂಡು ಬಂದ ಪೊಲೀಸ್ ಅಧಿಕಾರಿಗಳು ಕಳ್ಳ, ಕಾಕರಿಂದ, ಬಡ್ಡಿ ದಂಧೆಕೋರರಿಂದ ಹಾಗೂ ವೇಶ್ಯಾವಾಟಿಕೆ ಮಾಡಿಸುವವರಿಂದಲೂ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧ ಕೃತ್ಯಗಳು ಆಗಲು ಎರಡು ಕಾರಣಗಳಿವೆ. ಒಬ್ಬರು ಹುಟ್ಟುತ್ತಲೇ ಕ್ರೈಂ ಮಾಡಿಕೊಂಡು ಬಂದವರು ಮತ್ತೊಬ್ಬರು ಬಡ್ಡಿ ದಂಧೆಕೋರರಿಂದ ಕ್ರೈಂಗಳು ಆಗುತ್ತಿವೆ. ಬಡ್ಡಿ ದಂಧೆ ಮಾಡುವವರು ಫೈನಾನ್ಸ್ ಕಂಪೆನಿಯಿಂದ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ಫೈನಾನ್ಸ್ ಕಂಪೆನಿಗಳು...
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ಭರ್ಜರಿ ಯುದ್ಧ ಸಾರಿದ್ದಾರೆ. ಪರಿಣಾಮ 25 ಮೀಟರ್ ಬಡ್ಡಿ ದಂಧೆಕೋರರನ್ನು ಹೆಡೆಮುರಿ ಕಟ್ಟಿದ್ದಾರೆ. ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಮೀಟರ್ ಬಡ್ಡಿ ಹಾವಳಿಯ ಬಗ್ಗೆ ನೋವು ತೋಡಿಕೊಂಡಿದ್ದರಲ್ಲದೇ ನೆಮ್ಮದಿ ನಿಟ್ಟುಸಿರು ಬಿಡುವಂತೆ ಮಾಡುವಂತೆ ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ತಮ್ಮ ಠಾಣೆ ವ್ಯಾಪ್ತಿಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಪತ್ತೆಗೆ ಮುಂದಾಗಿ ಹುಬ್ಬಳ್ಳಿ,...
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಧಾರವಾಡ: ಮಹಿಳೆ ಜೊತೆ ಪೋನಿನಲ್ಲಿ ಮಾತನಾಡಿದ್ದಾನೆಂದು ಸಂಶಯ ಪಟ್ಟು ಟಂಟಂ ಚಾಲಕನ ಮೇಲೆ ಒಂದೇ ಕುಟುಂಬದವರಿಂದ ಹಲ್ಲೆ ನಡೆದಿದೆ. ಧಾರವಾಡ ತಾಲೂಕಿನ ವೆಂಕಟಾಪೂರ ಗ್ರಾಮದ ಮಾವಿನ ತೋಟದಲ್ಲಿ ಘಟನೆ ನಡೆದಿದೆ. ಇಮಾಮ್ ಸಾಬ್ ದೇವರಮನೆ (34) ಎನ್ನುವ ಟಂಟಂ ಚಾಲಕನ ಮೇಲೆ, ಸುಮಾರು 10 ಜನರಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ತೀವ್ರ ಹಲ್ಲೆಗೆ ಒಳಗಾದ ಇಮಾಮಸಾಬ್ ನ ಎರಡು ಕೈ ಮುರಿತಗೊಂಡಿವೆ. ಎಲುಬು ಮುರಿಯುವಂತೆ ಹೊಡೆದು ಕೈ ಮುರಿದಿರುವ ದುಷ್ಕರ್ಮಿಗಳು. ಕೊಟೂರು ಗ್ರಾಮದ ಅಗಸಿಮನಿ ಎಂಬ ಕುಟುಂಬದ...
ಅರಶಿಣಗೇರಿ ವ್ಯಕ್ತಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಭೀಕರ ಹತ್ಯೆ, ಮೊನ್ನೆಯಷ್ಟೆ ಮತದಾನಕ್ಕೆ ಬಂದಿದ್ದ ಶರೀಫಸಾಬ್ ಕೊಲೆಯಾಗಿದ್ದು ಯಾಕೆ..?
ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ವ್ಯಕ್ತಿಯನ್ನು ಹುಬ್ಬಳ್ಳಿ ಸಮೀಪದ ಹಳ್ಯಾಳ ಗ್ರಾಮದಲ್ಲಿ ಭೀಕರ ಕೊಲೆ ಮಾಡಲಾಗಿದೆ. ತಲೆ ಮೇಲೆ ಪಾಟಿ ಗಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಅರಶಿಣಗೇರಿಯ ಶರೀಫ್ ಸಾಬ್ ಮಾಬುಸಾಬ್ ಕಮಡೊಳ್ಳಿ ಎಂಬುವವನನ್ನು ಭೀಕರವಾಗಿ ಕೊಂದು ಹಾಕಲಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಯನ್ನು ಶಶಿಧರ ಚೆನ್ನೋಜಿ ಅಂತಾ ತಿಳಿದು ಬಂದಿದೆ. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲಿ ಕೊಲೆ ಮಾಡಲಾಗಿದೆ. ಅಂದಹಾಗೆ,...
ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!
ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಗಿದೆ. ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು ಗಂಟೆಯವರೆಗೆ ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ಜಸ್ಟಿಸ್ ಟೂ ನೇಹಾ ಹಿರೇಮಠ ಎಂದು ತಮ್ಮ ಅಂಗಡಿಗಳಿಗೆ ಬೋರ್ಡ್‌ಗಳನ್ನ ಹಾಕಿ ಬಂದ್‌ಗೆ ಅಭೂತಪೂರ್ವ ಬೆಂಬಲ...
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಹಿನ್ನೆಲೆ, ಹಿಂದು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, ಪೊಲೀಸ್ ಸರ್ಪಗಾವಲು..!
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಕೇಸ್ ಗೆ ಸಂಬಂಧಿಸಿದಂತೆ, ಇಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಹೀಗಾಗಿ, ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ರಾಜೀವ ಅವರ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿವಿಬಿ ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ. ಇನ್ನು ಬಂದೊಬಸ್ತಗಾಗಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, 3 ಸಿಪಿಐ, 5 ಪಿಎಸ್ಐ...
ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ, ಯುವಕನ ಬಂಧನ..! ಪ್ರತಿಭಟನೆ
ಹುಬ್ಬಳ್ಳಿ:ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರುವ ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ...
ರಾಮಮಂದಿರ ವಿರುದ್ಧ ವಿವಾದಿತ ಸ್ಟೇಟಸ್ ಗಲಾಟೆ, ಗರಗ ಠಾಣೆ ಪಿಎಸ್ಐ ತಲೆದಂಡ..!
ಧಾರವಾಡ ತಾಲೂಕಿನ ಗರಗ ಠಾಣಾ ವ್ಯಾಪ್ತಿಯ ತಡಕೋಡ ಗ್ರಾಮದಲ್ಲಿ ನಡೆದಿದ್ದ ವಿವಾದಿತ ಸ್ಟೇಟಸ್ ಗಲಾಟೆ ವಿಚಾರವಾಗಿ ಗರಗ ಠಾಣೆ ಪಿಎಸ್‌ಐ ತಲೆದಂಡವಾಗಿದೆ. ಪಿಎಸ್‌ಐ ಪ್ರಕಾಶ ಡಿ. ಅಮಾನತು ಮಾಡಿ ಉತ್ತರ ವಲಯ ಐಜಿ ವಿಕಾಸ ಕುಮಾರ್ ಆದೇಶ ಹೊರಡಿಸಿದ್ದಾರೆ. ಗರಗ ಪೊಲೀಸ್ ಠಾಣೆ ವ್ಯಾಪ್ತಿಯ ತಡಕೋಡದಲ್ಲಿ ರಾಮಮಂದಿರ ವಿರುದ್ಧ ಸ್ಟೇಟಸ್ ಹಾಕಿದ್ದ ಸದ್ದಾಂ ಹುಸೇನ್ ಬಂಧನದ ಬಳಿಕ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಘಟನೆಯಲ್ಲಿ ಸದ್ದಾಂ ಮನೆಯ ಎದುರು ಜಮಾಯಿಸಿದ್ದ ಜನರು ಗಲಾಟೆ ಮಾಡಿದ್ದರು. ಗಲಾಟೆ ಬಳಿಕ ಗ್ರಾಮದಲ್ಲಿ...