ಹುಬ್ಬಳ್ಳಿ: ಮಾಸ್ಟರ್ ಗೇಮ್ ಆಫ್ ಕರ್ನಾಟಕ ವತಿಯಿಂದ ಧಾರವಾಡದಲ್ಲಿ ಇತ್ತೀಚಿಗೆ ನಡೆದ ಓಪನ್ ಮಾಸ್ಟರ್ ಗೇಮ್ ನಲ್ಲಿ ನಿಂಗಪ್ಪ ಪುಟ್ಟಣ್ಣವರು, ಮಾರುತಿ ಬಸವರಾಜ್ ಅವರು ಉತ್ತಮ ಸಾಧನೆ ಮಾಡಿ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಗೆ ಆಯ್ಕೆಯಾಗಿದ್ದಾರೆ. ರೈಲ್ವೆ ಹೆಡ್ ಕಾನ್ಸ್ಟೇಬಲ್(RPF) ನಿಂಗಪ್ಪ ಪುಟ್ಟಣ್ಣವರು 60 ಮೀಟರ್,100 ಮೀಟರ್, 200 ಮೀಟರ್, 300 ಮಿಟರ್, 400 ಮಿಟರ್, ಲಾಂಗ್ ಜಂಪ್ ಮತ್ತು ಪುರುಷರ ರಿಲೇ 400 ಮಿಟರ್ ಮತ್ತು ಮಿಕ್ಸ್ ರಿಲೇ 400 ಮಿಟರ್ ಸ್ಪರ್ಧೆಯಲ್ಲಿ ಒಟ್ಟು ಏಳು...
Top Stories
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
Category: ಹುಬ್ಬಳ್ಳಿ ಧಾರವಾಡ
ಕಲಘಟಗಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸಿ.ಎಂ. ನಿಂಬಣ್ಣವರ್ ವಿಧಿವಶ..!
ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ.ನಿಂಬಣ್ಣವರ್(76) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಂಬಣ್ಣವರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವ್ರು, 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.
ಬಸ್ ನಲ್ಲಿ ಪ್ರೀ ಯಾಗಿ ಪ್ರಯಾಣಿಸಲು ಬುರ್ಕಾ ಧರಿಸಿದ ವ್ಯಕ್ತಿ, ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..?
ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ ಶಕ್ತಿ ಯೋಜನೆಯ ಲಾಭ ಪಡೆಯುವ ಉದ್ದೇಶದಿಂದ ಹಿಂದೂ ವ್ಯಕ್ತಿಯೊಬ್ಬ ಮುಸ್ಲಿಂ ಮಹಿಳೆಯರ ಬುರ್ಖಾ ಧರಿಸಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇನ್ನು ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾದ ಶಕ್ತಿ ಯೋಜನೆ ಲಾಭ ಪಡೆಯಲು ಹಲವು ಪುರುಷರು ಇದೇ ಮಾರ್ಗವನ್ನು ಅನುಸರಿಸುತ್ತಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಇನ್ನು ಈ ಕುರಿತು ಸಾರ್ವಜನಿಕರು ಬುರ್ಖಾ ಧರಿಸಿದ್ದರೂ ಬಸ್ ನಿಲ್ದಾಣದಲ್ಲಿ ಒಬ್ಬಂಟಿಯಾಗಿ ಕುಳಿತಿದ್ದರಿಂದ ಪ್ರಶ್ನೆ ಮಾಡಿದಾಗ...
ಶೆಟ್ಟರ್ ನೇತೃತ್ವದಲ್ಲಿ ಆಪರೇಷನ್ ಹಸ್ತ: ಕಾಂಗ್ರೆಸ್ಸಿಗೆ ಬರ್ತಾರೆ ಮಾಜಿ ಶಾಸಕ ಚಿಕ್ಕನಗೌಡರ..?
ಹುಬ್ಬಳ್ಳಿ: ; ಬಿಜೆಪಿ ಮಾಜಿ ಶಾಸಕ ಯಡಿಯೂರಪ್ಪ ಸಂಬಂಧಿ ಕಾಂಗ್ರೆಸ್ ಕೈ ಹಿಡಿಯುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿದೆ. ಹುಬ್ಬಳ್ಳಿ ಭಾಗದಲ್ಲಿ ಮತ್ತೋರ್ವ ಬಿಜೆಪಿ ಹುರಿಯಾಳು ಕಾಂಗ್ರೆಸ್ ಸೇರ್ಪಡೆಗೊಳ್ಳುವ ವಿಚಾರ ಸಾಕಷ್ಟು ದಟ್ಟವಾಗಿದ್ದು, ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಹೌದು…ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂಧಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ ಪರಾಜಿತರಾಗಿದ್ದರು. ಬಿಜೆಪಿ ಟಿಕೆಟ್ ಸಿಗದೆ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಚಿಕ್ಕನಗೌಡರ ಈಗ...
ಜಿನ್ನೂರಿನಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಮರ್ಡರ್ ಕೇಸ್ ಗೆ ಟ್ವಿಸ್ಟ್: ಅನೈತಿಕ ಸಂಬಂಧವೇ ಕೊಲೆಗೆ ಕಾರಣ..!
ಕಲಘಟಗಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಾವರಗೇರಿ ಯುವತಿಯೊಂದಿಗೆ ಇದೇ ಜೂನ್ 7 ಕ್ಕೆ ಹಸೆಮಣಿ ಏರಬೇಕಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರ ಹಿಂದೆ ಅನೈತಿಕ ಸಂಬಂಧದ ಕರಿನೆರಳಿದೆ. ಹಾಗಂತ ಪೊಲೀಸರ ತನಿಖೆಯಿಂದ ಬೆಚ್ಚಿ ಬೀಳಿಸುವ ಸಂಗತಿ ಹೊರಬಿದ್ದಿದೆ. ಹೌದು, ವಿವಾಹಿತ ಮಹಿಳೆ ಜೊತೆ ಯುವಕನ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ...
ಕಲಘಟಗಿಯಲ್ಲಿ ನೇಣು ಬಿಗಿದುಕೊಂಡು ಬಾಲ ಸಹೋದರಿಯರು ಆತ್ಮಹತ್ಯೆ..!
ಕಲಘಟಗಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜೂನ್ 7 ರಂದು ಮದುವೆಯಾಗಬೇಕಿದ್ದ ಹುಡುಗ, ಜಿನ್ನೂರಿನ ತೋಟದ ಮನೆಯಲ್ಲಿ ಭೀಕರ ಹತ್ಯೆಯಾದ..!
ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಯುವಕನ ಬರ್ಬರ ಕೊಲೆಯಾಗಿದೆ. ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈದು ಹೋಗಿದ್ದಾರೆ ದುಷ್ಕರ್ಮಿಗಳು. ಇನ್ನೇನು ಜೂ. 7 ರಂದು ಹಸೆಮಣೆ ಏರಲು ರೆಡಿಯಾಗಿದ್ದ ಯುವಕ ಸದ್ಯ ಹೆಣವಾಗಿ ಬಿದ್ದಿದ್ದಾನೆ. ಅಂದಹಾಗೆ, ಜಿನ್ನೂರಿನ ನಿಂಗಪ್ಪ ನವಲೂರ (28) ಕೊಲೆಯಾಗಿರುವ ಯುವಕನಾಗಿದ್ದು, ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಮದ್ಯರಾತ್ರಿ ಬರ್ಬರವಾಗಿ ಹತ್ಯೆ ಮಾಡಿ ಹೋಗಿದ್ದಾರೆ ದುಷ್ಟರು. ಅಸಲು, ಇದೇ ಜೂನ್ 7 ರಂದು ಯುವಕನಿಗೆ ಮದುವೆ ಫಿಕ್ಸ್ ಆಗಿತ್ತು. ಕಲಘಟಗಿ ತಾಲೂಕಿನ...
ದಲಿತರಿಗೆ ಸ್ಮಶಾನ ಭೂಮಿ ನೀಡಲು ಆಗ್ರಹ, ಹಿರೇಹರಕುಣಿ ಗ್ರಾಮದ ದಲಿತರಿಂದ ಪ್ರತಿಭಟನೆ..!
ಧಾರವಾಡ: ಕುಂದಗೋಳ ತಾಲೂಕಿನ ಹಿರೇಹರಕುಣಿ ದಲಿತರಿಗೆ ಸ್ಮಶಾನ ಭೂಮಿ ನೀಡಲು ಅಗ್ರಹಿಸಿ ಹಿರೇಹರಕುಣಿ ಗ್ರಾಮದ ದಲಿತ ಕುಟುಂಬಳಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಈ ಹಿಂದಿನ ರುದ್ರಭೂಮಿಯಲ್ಲಿ ದಲಿತರಿಗೆ ಅಂತ್ಯಕ್ರಿಯೆ ಮಾಡಲು ಅವಕಾಶ ನೀಡುತ್ತಿಲ್ಲ. ಬೇರೆ ಸಮುದಾಯದ ಮುಖಂಡರು ದಲಿತರ ಅಂತ್ಯಕ್ರಿಯೆ ಕಾರ್ಯಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಇದರಿಂದಾಗಿ ದಲಿತ ಕುಟುಂಬಗಳು ಸ್ಮಶಾನ ಭೂಮಿ ಇಲ್ಲದೆ ಪರದಾಡುವ ಸ್ಥಿತಿ ಇದೆ. ಈ ಕೂಡಲೇ ರಾಜ್ಯ ಸರ್ಕಾರ ಡಿಸಿಯವರೆಗೆ ಸೂಕ್ತ ನಿರ್ದೇಶನ ನೀಡಿ ದಲಿತರಿಗೆ ಸ್ಮಶಾನ...
ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?
ಕಲಘಟಗಿ: ಬಂಗಾರದ ಆಸೆಗಾಗಿ ವೃದ್ಧ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾರೆ ಆಗಂತುಕರು. ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ, ನೆಲ್ಲಿಹರವಿ ಗ್ರಾಮದ ಮುದುಕಿಯನ್ನು ಕೊಂದು ಹಾಕಿದ್ದಾರೆ. ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ 82 ವರ್ಷದ ತಿಪ್ಪವ್ವ ತಂಬೂರ್ ಎಂಬ ವೃದ್ದೆಯನ್ನ ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಎಂಬುವವರಿಗೆ ಸೇರಿದ ಕಬ್ಬು ಬೆಳೆದ ಜಮೀನಿನಲ್ಲಿ ಭೀಕರವಾಗಿ ಕೊಲೆ ಮಾಡಿ, ವೃದ್ದೆಯ ಕೊರಳಲಿದ್ದ ಚಿನ್ನಾಭರಣ ದೋಚಿಕೊಂಡು ಕೊಲೆಗಾರರರು ಪರಾರಿ ಆಗಿದ್ದಾರೆ. ನಿನ್ನೆ ತಡ ರಾತ್ರಿ ಆಲದಕಟ್ಟಿ ಗ್ರಾಮದ...
ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!
ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ....